*ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಪೌರಾಡಳಿತ ಸಚಿವರಿಂದ ಗೋಪೂಜೆ*
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿಯ, ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಸರ್ಕಾರದ ಸುತ್ತೋಲೆಯಂತೆ ಬಲಿಪಾಡ್ಯಮಿ ಅಂಗವಾಗಿ ಇಂದು ಗೋಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಗೋಪೂಜೆ ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.), ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್.ಎನ್. ನಿಸರ್ಗ ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ, ದೇವಾಲಯದ ಆಡಳಿತಾಧಿಕಾರಿ ಹೇಮಾವತಿ, ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು.
Post a Comment