07-11-2021
ಪ್ರಕಟಣೆಯ ಕೃಪೆಗಾಗಿ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ- ರಾಜ್ಯದಿಂದ ಪಾಲ್ಗೊಂಡವರು
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಿಂದ ರಾಜ್ಯದ ಅಪೇಕ್ಷಿತ ಮುಖಂಡರು ಇಂದು ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.
ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್, ಸಂಸದರಾದ ಡಾಕ್ಟರ್ ಉಮೇಶ್ ಜಾಧವ್, ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣ ಅವರು ಪಾಲ್ಗೊಂಡಿದ್ದರು.
ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment