ಪ್ರಧಾನಿ ಹೊಗಳಿಕೆ

*ದೇಶದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕ: ಸಂಕ್ರಾಂತಿ ಸಂದೇಶದಲ್ಲಿ ಪ್ರಧಾನಿ ಬಣ್ಣನೆ* 

ಬೆಂಗಳೂರು, ಜನವರಿ 15-
ರಾಷ್ಟ್ರದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕದ ಸೋದರ ಸೋದರಿಯರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ದಡಿ  ಕರ್ನಾಟಕದ ಗ್ರಾಮೀಣ ಬಡ ವರ್ಗದ 18,78,671 ವಸತಿ ರಹಿತ, 6,61,535 ನಿವೇಶನ ರಹಿತರ ಸಿಂಕ್ರೊನೈಸೇಶನ್‌ ನ ಬಹುದಿನಗಳ ಬೇಡಿಕೆಯನ್ನು ಅನುಮೋದಿಸಿರುವ ಪ್ರಧಾನಿಯವರಿಗೆ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದರು.

ಇದು ನಿಜವಾಗಿ ಆ ಎಲ್ಲ ಜನರ ಜೀವನದಲ್ಲಿ ಹೊಸ ಸಂತೋಷವನ್ನು ತರುವ ಜೊತೆಗೆ ಮಕರ ಸಂಕ್ರಾಂತಿಯನ್ನು ಇನ್ನಷ್ಟು ವಿಶೇಷವಾಗಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದರು. 
ಇದಕ್ಕೆ ಉತ್ತರಿಸಿದ ಪ್ರಧಾನಿಯವರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

Post a Comment

Previous Post Next Post