ಹಿಜಾಬ್‌ ಪ್ರಕರಣದ ವಿಚಾರಣೆಯನ್ನು ಮತ್ತೆ ಹೈಕೋರ್ಟ್‌ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ

ಹಿಜಾಬ್‌ ಪ್ರಕರಣದ ವಿಚಾರಣೆಯನ್ನು ಮತ್ತೆ ಹೈಕೋರ್ಟ್‌ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ಆರಂಭಗೊಂಡಿರುವ ವಿಚಾರಣೆಯ ವೇಳೆ ಸಂವಿಧಾನದ 25 (1)ನೇ ವಿಧಿಯ ಕುರಿತಂತೆ ಹೈಕೋರ್ಟ್ ನ ತ್ರಿಸದಸ್ಯ ನ್ಯಾಯಪೀಠದಲ್ಲಿ ಚರ್ಚೆ ನಡೆಯಿತು.
ಅಂತಿಮವಾಗಿ ಪರ-ವಿರೋಧ ವಾದ-ಪ್ರತಿವಾದ ಆಲಿಸಿದ ಬಳಿಕ, ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ಹಿಜಾಬ್ ಅನುಮತಿ ಕೋರಿ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿಯವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವು ಶುಕ್ರವಾರ ವಿಚಾರಣೆ ಆರಂಭಿಸಿ, ನಿನ್ನೆಗೆ ಮುಂದೂಡಿಕೆ ಮಾಡಿತ್ತು. ಬಳಿಕ ನಿನ್ನೆ ಮತ್ತೆ ವಿಚಾರಣೆಯನ್ನು ಇಂದಿಗೆ ಮುಂದೂಡಿದ ಕೋರ್ಟ್. ಈಗ ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

Post a Comment

Previous Post Next Post