ಫೆಬ್ರವರಿ 25, 2022
,
8:20PM
ಉತ್ತರ ಪ್ರದೇಶದಲ್ಲಿ 5ನೇ ಹಂತದ ಚುನಾವಣೆಯ ಪ್ರಚಾರ ಅಂತ್ಯಗೊಂಡಿದೆ
ಶುಕ್ರವಾರ ಸಂಜೆ ಉತ್ತರ ಪ್ರದೇಶದಲ್ಲಿ ಐದನೇ ಹಂತದ ಮತದಾನದ ಚುನಾವಣಾ ಪ್ರಚಾರ ಕೊನೆಗೊಂಡಿದ್ದು, ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಮೌನ ಅವಧಿ ಆರಂಭವಾಗಿದೆ. 12 ಜಿಲ್ಲೆಗಳ 61 ಸ್ಥಾನಗಳಿಗೆ ಫೆಬ್ರವರಿ 27 ರಂದು ಮತದಾನ ನಡೆಯಲಿದೆ. ಈ ಹಂತದಲ್ಲಿ ಮತದಾನ ನಡೆಯಲಿರುವ ಜಿಲ್ಲೆಗಳು ಬಾರಾಬಂಕಿ ರಾಯ್ಬರೇಲಿ ಪ್ರತಾಪಗಢ ಕೌಶಂಬಿ ಪ್ರಯಾಗ್ರಾಜ್ ಅಯೋಧ್ಯೆ ಶ್ರಾವಸ್ತಿ ಬಹ್ರೈಚ್ ಗೊಂಡ ಸುಲ್ತಾನಪುರ, ಅಮೇಥಿ ಮತ್ತು ಚಿತ್ರಕೂಟ.
ರಾಜ್ಯದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ರಾಜ್ಯದಲ್ಲಿ 5ನೇ ಹಂತದ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು ಚುನಾವಣಾ ಪ್ರಚಾರದ ಕಾವು ಮುಗಿಲು ಮುಟ್ಟಿದೆ.
ಬಿಜೆಪಿಯ ಹಿರಿಯ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕಣದಲ್ಲಿರುವ ಕೌಶಂಬಿ ಜಿಲ್ಲೆಯ ಸಿರತು ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಉತ್ತರ ಪ್ರದೇಶದ ಬಿಜೆಪಿ ಪ್ರಣಾಳಿಕೆ ಕುರಿತು ಮಾತನಾಡಿದ ಅಮಿತ್ ಶಾ, ಯುಪಿಯಲ್ಲಿ ಎನ್‌ಡಿಎ ಸರ್ಕಾರಕ್ಕೆ ಮತ ಹಾಕುವುದು ಎಂದರೆ ಹೋಳಿ ಮತ್ತು ದೀಪಾವಳಿಯಂದು ಉಚಿತ ಸಿಲಿಂಡರ್‌ಗಳು. ಬಿಜೆಪಿ ನಾಯಕ ಮತ್ತು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಯಾಗರಾಜ್ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದರು.
ಕಾಂಗ್ರೆಸ್ ಸಂಸದ ಹಾಗೂ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಈ ಚುನಾವಣೆಯಲ್ಲಿ ತಮ್ಮ ಮೊದಲ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಅಮೇಥಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಮತ್ತು ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಭಾರತದ ಉದ್ಯೋಗ ಕ್ಷೇತ್ರದ ಬೆನ್ನೆಲುಬನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸ್ನೇಹಿತರು ಮುರಿದಿದ್ದಾರೆ ಎಂದು ಹೇಳಿದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಿದರು, ಐದನೇ ಹಂತದ ಚುನಾವಣೆಯ ಪ್ರಚಾರ ಕೊನೆಗೊಳ್ಳುವ ಕೇವಲ ಒಂದು ಗಂಟೆ ಮೊದಲು ಸಮಾಜವಾದಿ ಪಕ್ಷದ ಮತ್ತೊಬ್ಬ ನಾಯಕಿ ಮತ್ತು ನಟಿ ಜಯಾ ಬಚ್ಚನ್ ಕೌಶಂಬಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದರು.
Post a Comment