ಸರ್ವಧರ್ಮ ಜನರಲ್ಲಿ ಪ್ರವಚನ ಮೂಲಕ ಭಾವೈಕ್ಯ ತೆ ಮೂಡಿಸುತ್ತಿದ್ದ ಸಂತ ಇಬ್ರಾಹಿಂ ಸುತಾರ ಇನ್ನಿಲ್ಲ
ಮಖಂಡಿ/ಮಹಾಲಿಗಪುರ: ಪ ದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್.ಸುತಾರ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿತ್ತು ಎನ್ನಲಾಗಿದೆ.
ಇಬ್ರಾಹಿಂ ಎನ್. ಸುತಾರ್ (ಇಬ್ರಾಹಿಂ ನಬೀ ಸಾಹೇಬ್ ಸುತಾರ್) (ಹುಟ್ಟು-10 ಮೇ 1940) ವೈದಿಕ, ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿರುವ ತತ್ವಪದಕಾರರು ಮತ್ತು ಪ್ರವಚನಕಾರರು.
ಇವರಿಗೆ 2018ರ ಪದ್ಮಶ್ರೀ ಪ್ರಶಸ್ತಿಯನ್ನು ಕೊಡಲಾಗಿದೆ.
ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ 10-05-1940 ರಲ್ಲಿ ಮಹಾಲಿಂಗಪುರದ ಬಡಕುಟುಂಬದಲ್ಲಿ ಜನಿಸಿದರು. 1970 ರಲ್ಲಿ 'ಭಾವೈಕ್ಯ ಜನಪದ ಸಂಗೀತ ಮೇಳ' ವನ್ನು ಸ್ಥಾಪಿಸಿದರು. ಕಳೆದ 44 ವರ್ಷಗಳಿಂದ ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜಸೇವೆಯ ಮುಖಾಂತರ ಸರ್ವಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆ ಸಂದೇಶವನ್ನು ಬೀರುತ್ತ ಬಂದಿರುತ್ತಾರೆ. ಪ್ರತಿವರ್ಷ ನೂರಾರು ಕಾರ್ಯ ಕ್ರಮಗಳನ್ನು ನೀಡುತ್ತ, ಹಿಂದು-ಮುಸ್ಲಿಂ ರಲ್ಲಿ ಭಾವೈಕ್ಯತೆ ಬೆಸೆಯುವ ಪವಿತ್ರ ಕಾಯಕದಲ್ಲಿ ತೊಡಗಿಸಿಕೊಂಢಿದ್ದರು.
Post a Comment