ನಿನ್ನೆ ರಾತ್ರಿಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ :ಕೇಸ್: ಒಬ್ಬ ಅರೆಸ್ಟ್

ಹರ್ಷ ಎಂಬಾತ ನಿನ್ನೆ ರಾತ್ರಿ 9 ರ ವೇಳೆ    ಕ್ಯಾಂಟೀನ್ ಬಳಿ ಟೀ ಕುಡಿಯು ತ್ತಿ ದ್ದಾಗ  ಕಾರಿನಲ್ಲಿ  ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾ ದಾಳಿ ನಡೆಸಿ ಪರಾರಿಯಾಗಿದೆ . ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ  ಎಸಗಿದ್ದು,  ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಒಬ್ಬ ಆರೋಪಿಯಾಗಿದ್ದಾನೆ.ದೊಡ್ಡಪೇಟೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಆರೋಪಿಯು ಹಳೆಯ ವೈಷ್ಯ ಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದ್ದು, ಐದು ಮಂದಿ ಮಚ್ಚು ಲಾಂಗುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀ ಸರಿಗೆ ಮಾಹಿತಿ ನೀಡಿದ್ದಾನೆ. ಉಳಿದ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾ ಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

Post a Comment

Previous Post Next Post