[27/02, 9:00 PM] Pannagaraja Kulakarni: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಪಾದಯಾತ್ರೆ ಪುನಾರಂಭ ಹಾಗೂ ತನ್ನಿಮಿತ್ತದ ಸಮಾವೇಶಕ್ಕೆ ಮುನ್ನ ರಾಮನಗರದ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.
[27/02, 9:00 PM] Pannagaraja Kulakarni: ಮೇಕೆದಾಟು ಪಾದಯಾತ್ರೆ ಮರು ಆರಂಭ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾತುಗಳು...
[27/02, 9:00 PM] Pannagaraja Kulakarni: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರಚಿತ "ಮೇಕೆದಾಟು ಯೋಜನೆ ತಪ್ಪಿಸಲಿದೆ ರೋದನೆ" ಕೈಪಿಡಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
[27/02, 9:00 PM] Pannagaraja Kulakarni: *ಮೇಕೆದಾಟು ಪಾದಯಾತ್ರೆ ಎರಡನೇ ಹಂತದ ಕಾರ್ಯಕ್ರಮದಲ್ಲಿ ಡಿ.ಕೆ. ಸುರೇಶ್ ಅವರ ಪ್ರಾಸ್ತಾವಿಕ ನುಡಿ:*
ಮೊದಲ ಹಂತದಲ್ಲಿ ಮೇಕೆದಾಟುನಿಂದ ಆರಂಭ ಮಾಡಿದ್ದ ಪಾದಯಾತ್ರೆ ನಾಲ್ಕು ದಿನಗಳಲ್ಲಿ ರಾಮನಗರ ತಲುಪಿತ್ತು.
ಕೋವಿಡ್ ಮೂರನೇ ಅಲೆ, ಜನರ ಆರೋಗ್ಯ ಹಿತದೃಷ್ಟಿ ಹಾಗೂ ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ನೀಡಿ ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇಂದು ಮತ್ತೆ ಆರಂಭವಾಗುತ್ತಿದೆ.
ಇಂದಿನಿಂದ ಐದು ದಿನಗಳ ಕಾಲ ಈ ಪಾದಯಾತ್ರೆ ನಡೆಯಲಿದೆ.
ಮೇಕೆದಾಟು ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಅಂದಿನ ನೀರಾವರಿ ಸಚಿವ ಎಂ.ಬಿ ಪಾಟೀಲ್ ಅವರು 3 ಬಾರಿ ಡಿಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದರು.
ನೀರು ಹಂಚಿಕೆ ಕುರಿತು ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಜಲ ಸಂಪನ್ಮೂಲ ಸಚಿವರಾಗಿದ್ದಾಗ ಮತ್ತೊಮ್ಮೆ ಡಿಪಿಎಆರ್ ಸಿದ್ಧಪಡಿಸಿ ಕೇಂದ್ರ ಜಲ ಮಂಡಳಿ ಒಪ್ಪಿಗೆ ಪಡೆಯಲು ಸಾಕಷ್ಟು ಪ್ರಯತ್ನ ಪಟ್ಟು ಯಶಸ್ವಿಯಾಗಿದ್ದರು.
ಕಳೆದ ಎರಡೂವರೆ ವರ್ಷಗಳಿಂದ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೂ ರಾಜ್ಯದ ಹಾಗೂ ಕೇಂದ್ರದ ಮುಖಂಡರುಗಳು ಈ ಯೋಜನೆ ಅನುಷ್ಠಾನದ ಪ್ರತಿಪಾದನೆ ಮಾಡಲಿಲ್ಲ.
ಹೀಗಾಗಿ ನಮ್ಮ ನೀರು ಹಾಗೂ ಅದರ ಮೇಲಿನ ಹಕ್ಕನ್ನು ಪ್ರತಿಪಾದಿಸಿ ಬೆಂಗಳೂರು ಹಾಗೂ ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡುವ ಈ ಯೋಜನೆ ಜಾರಿಗೆ ಆಗ್ರಹಿಸಿ ಇಂದು ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ.
[27/02, 9:00 PM] Pannagaraja Kulakarni: ಪಾದಯಾತ್ರೆಯಲ್ಲಿ ಸುರ್ಜೇವಾಲ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಸಲೀಂ ಅಹ್ಮದ್, ಬಿ.ವಿ. ಶ್ರೀನಿವಾಸ್ ಮತ್ತಿತರ ಮುಖಂಡರ ಹೆಜ್ಜೆ...
[27/02, 9:55 PM] Pannagaraja Kulakarni: ರಾಮನಗರದಿಂದ ಬಿಡದಿವರೆಗೆ ಭಾನುವಾರ ನಡೆದ ಪಾದಯಾತ್ರೆ ನಂತರ ಡಿ.ಕೆ. ಶಿವಕುಮಾರ್ ಅವರು ಬಿಡದಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಚಲುವರಾಯಸ್ವಾಮಿ, ಸಂಸದ ಡಿ.ಕೆ. ಸುರೇಶ್, ಮಾಜಿ ಶಾಸಕರಾದ ಸಿ.ಎಂ. ಲಿಂಗಪ್ಪ, ಎಚ್ ಸಿ. ಬಾಲಕೃಷ್ಣ, ಎಂಎಲ್ಸಿ ಎಸ್ ರವಿ ಮತ್ತಿತರರು ಭಾಗವಹಿಸಿದ್ದರು.
[27/02, 9:55 PM] Pannagaraja Kulakarni: *ಬಿಡದಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಭಾಷಣ:*
ಉರಿ ಬಿಸಿಲು, ಟಾರು ರಸ್ತೆಯಲ್ಲಿ ಇಂದು ನಾವೆಲ್ಲರೂ ಹೆಜ್ಜೆ ಹಾಕಿದ್ದೇವೆ.
ಅನೇಕ ಕಡೆಗಳಲ್ಲಿ ಮರಗಳಿಲ್ಲದೆ ಬಿಸಿಲಲ್ಲೇ ಗುಂಡಿ, ಬಂಡೆ ಎಲ್ಲವನ್ನು ನೋಡಿಕೊಂಡು ಬಂದಿದ್ದೇವೆ.
ನಮ್ಮ ಸ್ನೇಹಿತರೊಬ್ಬರು ನನ್ನನ್ನು ಮಣ್ಣಿನ ಮಗ ಎಂದು ಹೇಳಿದರು. ಆದರೆ ನಾನು ಮಣ್ಣಿನ ಮಗ ಅಲ್ಲ, ಕಲ್ಲಿನ ಮಗ ಎಂದು ನಮ್ಮಣ್ಣ ಕುಮಾರಣ್ಣಾ ಹೇಳಿದ್ದಾರೆ.
ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಕಲ್ಲು ಬಂಡೆ ಚಚ್ಚಿದಾಗಲೇ ಚಪ್ಪಡಿಯಾಗೋದು, ಕೆತ್ತಿದಾಗ ಶಿಲೆ ಆಗೋದು, ನಂತರ ಅದು ಮರಳಾಗಿ ಮಣ್ಣಾಗುತ್ತದೆ.
ಅಂದರೆ ಮಣ್ಣಿನ ಮೂಲ ಸ್ವರೂಪ ಕಲ್ಲು ಅಂತಾನೆ ಅಲ್ಲವೇ?
ಈ ಕಲ್ಲನ್ನು ನೀವು ಹೇಗೆ ಬೇಕೋ ಹಾಗೆ ಉಪಯೋಗಿಸಿಕೊಳ್ಳಿ, ನಮ್ಮ ಅಣ್ಣನೂ ಅವರಿಗೆ ಬೇಕಾದ ಹಾಗೆ ಬಳಸಿಕೊಳ್ಳಲಿ.
ನಮಗೆ ಯಾರಾದರೂ ಹೊಡೆಯಲು ಬಂದರೆ ನಾವು ಅದನ್ನು ತಪ್ಪಿಸಬಹುದು. ಆದರೆ ನಮ್ಮ ಬಗ್ಗೆ ಅನಗತ್ಯವಾಗಿ ಮಾತನಾಡುವವರನ್ನು ತಪ್ಪಿಸಲು ಸಾಧ್ಯವೇ?
ಅಣ್ಣಾ ನಿಮಗೆ ನಾಲಿಗೆ ಇದೆ ಅಂತಾ ಬಾಯಿಗೆ ಬಂದಹಾಗೆ ಮಾತನಾಡುತ್ತೀರಿ. ಜನ ಥೂ.. ಛೀ... ಎಂದು ಬಯ್ಯುತ್ತಿದ್ದಾರೆ. ನೀವು ನಿಮ್ಮ ನಾಲಿಗೆ ರಕ್ಷಣೆ ಮಾಡಿಕೊಳ್ಳಣ್ಣಾ.
ಕುಮಾರಣ್ಣಾ ಅವರು ಜಲಧಾರೆ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಸಂತೋಷ ಅವರು ಮಾಡಲಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚಾಮರಾಜನಗರದಿಂದ ಬೀದರ್ ವರೆಗೂ ಹೋರಾಟ ಮಾಡಲಿ ನಮ್ಮ ಅಭ್ಯಂತರವಿಲ್ಲ.
ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇರುತ್ತದೆಯೇ ಹೊರತು ಯಾವುದೇ ತಕರಾರಿಲ್ಲ.
ನಾವು ಸಾಕಷ್ಟು ಕಾರ್ಯಕ್ರಮ ಮಾಡಿದ್ದೇವೆ. ಇಂದಿನ ಹೋರಾಟಕ್ಕೆ ಜನತಾದಳದವರೂ ಬಂದಿದ್ದರು. ಈ ಕ್ಷೇತ್ರದಲ್ಲಿರುವ, ಇಲ್ಲಿರುವ ಜನರಲ್ಲಿ ಕೇವಲ ಕಾಂಗ್ರೆಸಿಗರು ಮಾತ್ರ ಇಲ್ಲ, ಎಲ್ಲ ಪಕ್ಷದವರೂ ಇದ್ದಾರೆ. ಇದು ಪಕ್ಷಾತೀತ ಹೋರಾಟ. ಎಲ್ಲ ವರ್ಗದ ಜನರ ಹೋರಾಟ. ಕಾಂಗ್ರೆಸ್ ಕೇವಲ ಮುಂದಾಳತ್ವ ವಹಿಸಿಕೊಂಡಿದೆ.
ಇಂದಿನ ಹೋರಾಟ ನೀರಿಗಾಗಿ. ಈ ನೀರಿಗೆ ಬಣ್ಣ, ಆಕಾರ, ರುಚಿ ಇದೆಯಾ? ಇಲ್ಲ. ಇದನ್ನು ಎಲ್ಲಿ ಬೇಕಾದರೂ ಹರಿಸಬಹುದು. ಈ ನೀರು ಬಿಟ್ಟು ಬದುಕಲು ಸಾಧ್ಯವೇ? ಇಲ್ಲ. ಇದೇ ಕಾರಣಕ್ಕೆ ನಾವಿಂದು ಹೋರಾಟ ಮಾಡುತ್ತಿದ್ದೇವೆ.
ನಮ್ಮ ನೀರು, ನಮ್ಮ ಹಕ್ಕು. ಹೀಗಾಗಿ ನೀರಿಗಾಗಿ ನಡೆಯುತ್ತಿದ್ದೇವೆ. ಈ ಹೋರಾಟದಲ್ಲಿ ನಮಗೆ ಅನೇಕರು, ನೀರು, ಮಜ್ಜಿಗೆ, ಎಳನೀರು ಕೊಟ್ಟು ಉಪಚರಿಸಿದ್ದಾರೆ. ಅವರಿಗೆ ನನ್ನ ಸಾಷ್ಟಾಂಗ ನಮನಗಳು.
ಹೆಜ್ಜೆ ಹಾಕುತ್ತೇವೆ, ನಾವು ಹೆಜ್ಜೆ ಹಾಕುತ್ತೇವೆ ಎಂದು ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ನಮ್ಮ ಜನ ಐತಿಹಾಸಿಕ ಹೋರಾಟದಲ್ಲಿ ಹೆಜ್ಜೆ ಹಾಕಿದ್ದಾರೆ.
ಎಸ್.ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಕೃಷ್ಣಾ ನದಿಗಾಗಿ ಹೆಜ್ಜೆ ಹಾಕಿದ್ದರು. ಆಡ್ವಾಣಿ ಅವರು ರಥಯಾತ್ರೆ ಮಾಡಿದ್ದರು. ಚಂದ್ರಶೇಖರ್ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನಡೆದರು. ನಮ್ಮ ಆಂಧ್ರ ಪ್ರದೇಶ ಮಾಜಿ ಸಿಎಂ ರಾಜಶೇಖರ್ ರೆಡ್ಡಿ ಹೆಜ್ಜೆ ಹಾಕಿದ್ದರು. ಈಗಿನ ಆಂಧ್ರ ಸಿಎಂ ಜಗನ್ ಕೂಡ ಪಾದಯಾತ್ರೆ ಮಾಡಿದ್ದಾರೆ. ಇವರೆಲ್ಲರೂ ಛಲದಿಂದ, ಸಂಕಲ್ಪದಿಂದ ಹೋರಾಟ ಮಾಡಿದ್ದಾರೆ.
ನಮಗೆ ಈ ಹೋರಾಟದ ಸ್ಪೂರ್ತಿ ತುಂಬಿದವರು ಮಹಾತ್ಮಾ ಗಾಂಧೀಜಿ ಅವರು. ಅವರ ಹಿಂಬಾಲಕರು ನಾವು. ಅವರು ಹಾಗೂ ಕಾಂಗ್ರೆಸ್ ಪಕ್ಷ ಈ ತ್ರಿವರ್ಣ ಧ್ವಜದ ರೂವಾರಿಗಳು.
ಬಾಲಕೃಷ್ಣ ಅವರು ಹುಟ್ಟುಹಬ್ಬದ ಪ್ರಯುಕ್ತ ತಿರುಪತಿಯಲ್ಲಿ ಪೂಜೆ ಇಟ್ಟುಕೊಂಡಿದ್ದರು. ಆದರೆ ಪಾದಯಾತ್ರೆ ದಿನಾಂಕ ನಿಗದಿಯಾದ ಬಳಿಕ ನನ್ನ ದೇವರುಗಳು ಇಲ್ಲೇ ಮಾಗಡಿಯಲ್ಲಿ ಇದ್ದಾರೆ. ಜನರೇ ನನ್ನ ದೇವರು. ಅವರಿಗೆ ಪೂಜೆ ಮಾಡುತ್ತೇನೆ ಎಂದು ನಮ್ಮ ಜತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
ಅವರನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿ ಅವರಿಗೆqa ಜನ್ಮದಿನದ ಉಡುಗೊರೆ ನೀಡಬೇಕು.
ನಾನು ಇಲ್ಲೇ ಇದ್ದು, ಇಲ್ಲಿ ಸ್ವಾಮೀಜಿ ಪುತ್ಥಳಿಗೆ ಪೂಜೆ ಮಾಡಿ, ಇಲ್ಲಿಂದ ಪಾದಯಾತ್ರೆ ಆರಂಭಿಸಿ ಬೆಂಗಳೂರು ತಲುಪಬೇಕು.
ನಿಮ್ಮ ಪ್ರೀತಿ ವಿಶ್ವಾಸ ಹೀಗೆ ಇರಲಿ. ರಾಜಕಾರಣ ಇಂದು ಇರುತ್ತದೆ, ನಾಳೆ ಹೋಗುತ್ತದೆ. ನಾವು ಬದುಕಿರುವಾಗ ಒಂದು ಹೋರಾಟದಲ್ಲಿ ಭಾಗವಹಿಸಿ ನಮ್ಮ ಜೀವನ ಸಾರ್ಥಕತೆ ಮಾಡಿಕೊಳ್ಳಬೇಕು. ನೀವೆಲ್ಲ ಹೋರಾಟದಲ್ಲಿ ಭಾಗವಹಿಸಿ ಇತಿಹಾಸ ಪುಟ ಸೇರಿದ್ದೀರಿ.
Post a Comment