*ಹಿರಿಯ ನಟ ರಾಜೇಶ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ*

*ಹಿರಿಯ ನಟ ರಾಜೇಶ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ*

ಬೆಂಗಳೂರು, ಫೆಬ್ರವರಿ 19: ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

"ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಅತ್ಯಂತ ಪ್ರೌಢಿಮೆಯ ಅಭಿನಯವನ್ನು ಪ್ರದರ್ಶಿಸುತ್ತಿದ್ದ ಕಲಾವಿದರಾಗಿದ್ದರು. ಅವರ ಸಿನೆಮಾಗಳು ಮನದಾಳದಲ್ಲಿದೆ. ಯಾವುದೇ ಪಾತ್ರವನ್ನು ನೀಡಿದರೂ ಸುಲಲಿತವಾಗಿ ಅಭಿನಯಿಸುವ ಸಾಮರ್ಥ್ಯ ಅವರಲ್ಲಿತ್ತು.  ಕಲಾಸೇವೆಯನ್ನು ಅವರು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದಾರೆ. ತಾನು ದೊಡ್ಡ ನಟನೆಂಬ ಆಡಂಬರವಿಲ್ಲದೇ ಬದುಕಿದ ಅತ್ಯಂತ ಸರಳಜೀವಿ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ  ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ" ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಿರಿಯ ಚಿತ್ರನಟ ರಾಜೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವಪೂರ್ವಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ  ಉಪಸ್ಥಿತರಿದ್ದರು.

Post a Comment

Previous Post Next Post