[12/02, 9:18 PM] Pannagaraja Kulakarni: ಸವಣೂರು ಏತ ನೀರಾವರಿ ಯೋಜನೆಯಡಿ ಹಾವೇರಿ ಜಿಲ್ಲೆಯ ಶಿಗ್ಗಾಂವ ಮತ್ತು ಸವಣೂರು ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ 48 ಕೆರೆಗಳ ತುಂಬಿಸುವ ₹ 90.57 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾದ ಯೋಜನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಶನಿವಾರ ಲೋಕಾರ್ಪಣೆ ಗೊಳಿಸಿದರು .
ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ ಕಾರಜೋಳ,ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಇತರರು ಉಪಸ್ಥಿತರಿದ್ದರು
[12/02, 9:18 PM] Pannagaraja Kulakarni: ಶಿಗ್ಗಾಂವ ತಾಲೂಕಿನ ಹಿರೇ ಬೆಂಡಗೇರಿ ಗ್ರಾಮದಲ್ಲಿ ತುಂಬಿರು ದೊಡ್ಡಕೆರೆಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬಾಗಿನ ಅಪಿ೯ಸಿದರು.
ಕಾಮಿ೯ಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿಯಲ್ಲಿ 48 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ತುಂಬಿರುವ ಕೆರೆಗೆ ಬಾಗಿನ ಅರ್ಪಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಆಡಿಯೋ ಮತ್ತು ವಿಡಿಯೋ ಬೈಟ್...
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿಯಲ್ಲಿ 48 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಕಾರ್ಯವನ್ನುದ್ದೇಶಿಸಿ ಮಾತನಾಡಿದರು.
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್ಕಾರಿ ಉರ್ದು ಪ್ರೌಢಶಾಲೆ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿಯನ್ನು ದಾನ ಮಾಡಿದ ಬಿನಿಜಾನ್ ಹಜರತ್ ಖಾನ್ ನೇರ್ತಿ ಅವರನ್ನು ಸನ್ಮಾನಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾವೇರಿ ಜಿಲ್ಲಾಉಸ್ತುವಾರಿ ಶಿವರಾಮ ಹೆಬ್ಬಾರ್ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹುಲಗೂರು ಗ್ರಾಮದಲ್ಲಿ ಸರ್ಕಾರಿ ಉರ್ದು ಪ್ರೌಢಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಮಾಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಅರೆಬೈಲ್ ಶಿವರಾಮ ಹೆಬ್ಬಾರ್ ಮತ್ತು ಇತರರು ಭಾಗವಹಿಸಿದ್ದರು.
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ತಾಲೂಕಿನ ಹುಲಗೂರು ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾರುಕಟ್ಟೆ ಪ್ರಾಂಗಣದಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 1000 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ , ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಹಾಳಾದ ಹುಲಗೂರು- ಯರಗುಪ್ಪಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
[12/02, 9:18 PM] Pannagaraja Kulakarni: *ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ: ಅಧಿವೇಶನದ ನಂತರ ಉದ್ಘಾಟನೆ*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹಾವೇರಿ, ಫೆಬ್ರವರಿ 12: ಹಾವೇರಿ ಜಿಲ್ಲೆಗೆ ಪ್ರತ್ಯೇಕವಾದ ಹಾಲು ಒಕ್ಕೂಟ ಸ್ಥಾಪಿಸುವ ಪ್ರಕ್ರಿಯೆಯೂ ಅಂತಿಮ ಘಟ್ಟದಲ್ಲಿದ್ದು, ಅಧಿವೇಶನದ ನಂತರ ಪ್ರತ್ಯೇಕ ಮಾಡಿ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆಯಡಿ ತುಂಬಿರುವ ಕೆರೆಗೆ ಬಾಗಿನ ಅಪೀಸಿದ ನಂತರ ಮಾತನಾಡುತ್ತಿದ್ದರು.
ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆ ಪೂರ್ಣಗೊಂಡಿದೆ. ಸವಣೂರು ಕ್ಷೇತ್ರದಲ್ಲಿಯಲ್ಲದೆ, 14000 ಎಕರೆ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ. ಬ್ಯಾಡಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಅಧಿವೇಶನದ ನಂತರ ಉದ್ಘಾಟನೆಗೊಳ್ಳಲಿವೆ ಎಂದರು.
*ರಾಜ್ಯದಲ್ಲಿ ಶಾಂತಿ ನೆಲಸಬೇಕು:*
ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು “ರಾಜ್ಯದಲ್ಲಿ ಶಾಂತಿ ನೆಲಸಬೇಕು. ಉಚ್ಛ ನ್ಯಾಯಾಲಯದ ಆದೇಶವನ್ನು ಪರಿಪೂರ್ಣವಾಗಿ ಜಾರಿ ಮಾಡಬೇಕು. ಮಕ್ಕಳು ಯಾವುದೇ ಭೇಧಭಾವವಿಲ್ಲದೆ, ಒಮ್ಮನಸ್ಸಿನಿಂದ ಮೊದಲಿನಂತೆ ವಿದ್ಯಾರ್ಜನೆ ಮಾಡುವಂತೆ ಮಾಡುವುದು ನನ್ನ ಮೊದಲ ಕರ್ತವ್ಯ” ಎಂದರು.
*ಆಯವ್ಯಯ*: ರಾಜ್ಯದ ಆಯವ್ಯಯ ಪ್ರಕ್ರಿಯೆ ಪ್ರಾರಂಭವಾಗಿದೆ. ಬಹುತೇಕ ಎಲ್ಲಾ ಇಲಾಖೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದೆ. ನಂತರ ಸಂಘಸಂಸ್ಥೆಗಳೊಂದಿಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರದ ಯೋಜನೆಗಳಿಗೆ ಪೂರಕವಾಗಿ ರಾಜ್ಯ ಸರ್ಕಾರದ ಯೋಜನೆಗಳನ್ನು ರೂಪಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಲಾಗುವುದು ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ರಾಜ್ಯ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಇಲ್ಲದ ಸಂದರ್ಭದಲ್ಲಿಯೂ ಅತಿ ಹೆಚ್ಚು ಸಾಲವನ್ನು ಮಾಡಿದ ಸರ್ಕಾರ ಎಂಬ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಹಿಂದಿನ ಸಾಲಗಳನ್ನು ನಿಭಾಯಿಸಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತವನ್ನೂ ನಿಭಾಯಿಸಿ, ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಸಂಪನ್ಮೂಲಗಳನ್ನು ಹೆಚ್ಚಿಸಲು ಸರ್ವ ಪ್ರಯತ್ನವನ್ನೂ ನಮ್ಮ ಸರ್ಕಾರದಿಂದ ಮಾಡಲಾಗುತ್ತಿದೆ. ಎಲ್ಲವನ್ನೂ ಸರಿದೂಗಿಸಿ ಆಯವ್ಯಯವನ್ನು ಮಂಡಿಸಲಾಗುವುದು ಎಂದರು.
*ರಾಷ್ಟ್ರಕವಿ*:
ಕನ್ನಡ ಸಾಹಿತ್ಯ ಪರಿಷತ್ ಅಭಿಲಾಷೆಯಂತೆ ಹಿರಿಯ ಕವಿ ಚನ್ನವೀರ ಕಣವಿ ಅವರಿಗೆ ರಾಷ್ಟ್ರಕವಿ ಬಿರುದು ನೀಡಬೇಕೆನ್ನುವ ಬೇಡಿಕೆಯನ್ನು ಪರಿಗಣಿಸಿ ಶಿಫಾರಸ್ಸು ಮಾಡಲಾಗುವುದು ಎಂದರು.
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಹುಲಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ. ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಭವನವನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ಇತರರು ಉಪಸ್ಥಿತರಿದ್ದರು.
[12/02, 9:18 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹುಲಗೂರು ಗ್ರಾಮದಲ್ಲಿ ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ (ಕೃಷಿ ಯಂತ್ರಧಾರೆ ಕೇಂದ್ರ) ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ್ ಹಾಗೂ ಇತರರಿದ್ದರು
Post a Comment