CM ಚಟುವಟಿಕೆ ಮಾಹಿತಿ

[19/02, 2:48 PM] Gurulingswami. Holimatha. Vv. Cm: ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನಾಚರಣೆ :

*ಛತ್ರಪತಿ ಶಿವಾಜಿ ಭಾರತದ ಸ್ವಾಭಿಮಾನದ ಪ್ರತೀಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಫೆಬ್ರವರಿ 19 :
 ಛತ್ರಪತಿ ಶಿವಾಜಿ ಮಹಾರಾಜರು ಭಾರತದ ಸ್ವಾಭಿಮಾನ ಹಾಗೂ ಭಾರತದ ಏಕತೆ, ಅಖಂಡತೆಯ ಪ್ರತೀಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಮರಾಠ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತ ದೇಶದ ವೀರ ಹೋರಾಟಗಾರ ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ವೀರ ಛತ್ರಪತಿ ಶಿವಾಜಿ ಮಹಾರಾಜರು ರಕ್ಷಣೆ ಮಾಡಿದರು. ಅವರ ದಿಟ್ಟತನದಿಂದ ಭಾರತದಲ್ಲಿ ಹಿಂದೂ ಸಾಮ್ರಾಜ್ಯ ಗಟ್ಟಿಯಾಗಿ ಉಳಿಯಲು ಸಾಧ್ಯವಾಯಿತು. ಸಮಾಜದ ಎಲ್ಲಾ ವರ್ಗದ ಜನರನ್ನೂ ಸಮಾನವಾಗಿ ನೋಡಿದ ಶಿವಾಜಿಯವರನ್ನು ಪ್ರತಿಯೊಬ್ಬ ಭಾರತೀಯನೂ ಪೂಜನೀಯ ಭಾವದಿಂದ ನೋಡುತ್ತಾನೆ. ಅವರ ಹೆಸರಿನಲ್ಲಿಯೇ ಸ್ಪೂರ್ತಿ, ಶಕ್ತಿ ಹಾಗೂ ಪ್ರೇರಣೆ ನೀಡುತ್ತದೆ. ಶಿವಾಜಿ ಮಹಾರಾಜರ ಅಭಿಮಾನದ ಸಂಕೇತವಾಗಿ ಜನ್ಮದಿನವನ್ನು ಆಚರಿಸಲಾಗಿದೆ.

 ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು  ಹಾಗೂ ರಾಷ್ಟ್ರಭಕ್ತಿಯ ಭಾವನೆ ತುಂಬುವ ಕೆಲಸವನ್ನು ಮಾಡಲಾಗುವುದು. ಮರಾಠ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದ್ದು, ಶ್ರೀ  ಮಾಣಿಕ್ ರಾವ್ ಮೂಳೆಯವರನ್ನು ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಲಾಗಿದೆ.  ಧ್ವನಿಯಿಲ್ಲದ ದುರ್ಬಲ ವರ್ಗಗಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸರ್ಕಾರದ  ಉದ್ದೇಶವಾಗಿದೆ ಎಂದು ತಿಳಿಸಿದರು.

*ಉಚ್ಛನ್ಯಾಯಾಲಯದ ಆದೇಶದ ಪರಿಪಾಲನೆ ಎಲ್ಲರ ಕರ್ತವ್ಯ:*
ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗುತ್ತಿರುವ ಬಗ್ಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿಗಳು, ಉಚ್ಛನ್ಯಾಯಾಲಯದ ಆದೇಶದ ಪರಿಪಾಲನೆ ಎಲ್ಲರ ಕರ್ತವ್ಯ. ಹೊರಗಿನವರಿಂದ ಎಲ್ಲ ಸಮಸ್ಯೆಗಳು ಉಂಟಾಗುತ್ತಿದೆ. ಹೊರಗಿನವರು ಅನಗತ್ಯ ಪ್ರವೇಶದಿಂದಾಗಿ ಎಲ್ಲ ಗೊಂದಲಗಳು ಏಳುತ್ತಿವೆ. ಶಾಲಾ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳೇ ಈ ವಿಷಯವನ್ನು ಬಗೆಹರಿಸಿಕೊಳ್ಳುತ್ತಾರೆ. ವಾತಾವರಣ ತಿಳಿಯಾಗಬೇಕಿದೆ.ಈ ನಿಟ್ಟಿನಲ್ಲಿ ರಾಜ್ಯದಲ್ಲಿ  ಆಗುತ್ತಿರುವ ಬೆಳವಣಿಗೆಗಳ ಎಲ್ಲಾ ಮಾಹಿತಿಗಳನ್ನು ಪಡೆಯುತ್ತಿದ್ದೇನೆ ಎಂದು ತಿಳಿಸಿದರು.


ಸಮಾರಂಭದಲ್ಲಿ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ , ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಮಾಜಿ ಶಾಸಕ ಎಂಜಿ ಮೂಳೆ, ಮರಾಠಾ ಸಮುದಾಯದ ಮುಖಂಡ ಮನೋಜ ಕುಮಾರ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
[19/02, 2:48 PM] Gurulingswami. Holimatha. Vv. Cm: *ಕಾಂಗ್ರೆಸ್ ವಿರೋಧಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ: ಸಿಎಂ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಫೆಬ್ರವರಿ 19:ಕಾಂಗ್ರೆಸ್ ವಿರೋಧಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಕಾಂಗ್ರೆಸ್ ಪಕ್ಷದ ಧರಣಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದವರು ಆಡಳಿತ ಪಕ್ಷವಾಗಿಯಂತೂ ಅಲ್ಲ, ವಿರೋಧಪಕ್ಷವಾಗಿರಲೂ ಸಹ ನೈತಿಕತೆಯನ್ನು ಕಳೆದುಕೊಂಡಿದೆ  ಎಂದು ತಿಳಿಸಿದರು.
[19/02, 2:55 PM] Gurulingswami. Holimatha. Vv. Cm: *ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಜನರ ಅನುಕೂಲಕ್ಕೆ 3 ಎಕರೆ ಜಾಗ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ*

*ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ನಿಯೋಗಕ್ಕೆ ಸಿಎಂ ಭರವಸೆ*

ಬೆಂಗಳೂರು: ಬೆಂಗಳೂರಿನಲ್ಲಿ  ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ನಿಯೋಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. 

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಈ ಭರವಸೆ ನೀಡಿದರು. 

ಬೆಂಗಳೂರಿನಲ್ಲಿ  ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಕಟ್ಟಡ, ಆ ಭಾಗದಿಂದ ಬರುವ ವಿದ್ಯಾರ್ಥಿಗಳು, ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗಲು ವಸತಿ ನಿಲಯ ನಿರ್ಮಾಣ ಮಾಡಲು ಶೀಘ್ರವೇ ಜಮೀನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.


ಇದರೊಂದಿಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಬಜೆಟ್ ನಲ್ಲಿ ಆದ್ಯತೆ ನೀಡುವಂತೆ ನಿಯೋಗ ಮಾಡಿದ ಮನವಿಕೆ ಸಿಎಂ ಸಕಾರಾತ್ಮಕ ಸ್ಪಂದಿಸಿದರು.

ಮುಖ್ಯಮಂತ್ರಿಗಳ ಭೇಟಿಯ ನಿಯೋಗದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ, ಪದಾಧಿಕಾರಿಗಳಾದ ಬಸವರಾಜ ಬೇಳೂರು, ಶ್ರೀಧರ ಕಲ್ಲೂರು, ಗಂಗಾಧರ ವಾಲಿ, ಅಯ್ಯನಗೌಡ ಬಿರಾದಾರ, ಸಂತೋಷ ಬಸೆಟ್ಟಿ, ಭಿಮಣ್ಣ ನಲತ್ವಾಡ, ಪತ್ರಕರ್ತ ಶಂಕರ ಪಾಗೋಜಿ  ಹಾಜರಿದ್ದರು.
[19/02, 4:44 PM] Gurulingswami. Holimatha. Vv. Cm: ದಲಿತರ ಬೇಡಿಕೆಗಳನ್ನು ಆಲಿಸಲು ಖುದ್ದಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

 ದಲಿತ  ಸಂಘಟನೆಗಳಿಂದ ಮುಷ್ಕರ ನಡೆಯುತ್ತಿದ್ದ  ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ತೆರಳಿ ಅವರ ಮನವಿ ಸ್ವೀಕಾರ



ಸಿಎಂ ಬೊಮ್ಮಾಯಿ ತಾವು ಕಾಮನ್ ಮ್ಯಾನ್ ಸಿಎಂ ರೀತಿಯಲ್ಲಿ ದಲಿತರ ಪ್ರತಿಭಟನಾ ಸ್ಥಳಕ್ಕೆ ತೆರಳಿ ಮನವಿ ಪತ್ರ ಸ್ವೀಕರಿಸಿದರು

  ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು

ಬೇಡಿಕೆ ಈಡೆರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು

ಸಿಎಂ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರಿಂದ ಸಿಎಂ ಗೆ ಧನ್ಯವಾದ ಅರ್ಪಿಸಿದ ದಲಿತ ಸಂಘಟನೆಗಳ ಮುಖಂಡರು
[19/02, 6:22 PM] Gurulingswami. Holimatha. Vv. Cm: ದಾವಣಗೆರೆ ಗೆ ಹೊರಟ ಸಿಎಂ ..

Post a Comment

Previous Post Next Post