[24/02, 12:07 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಅಬಕಾರಿ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜತೆ ಬಜೆಟ್ ಪೂರ್ವ ಸಭೆ ನಡೆಸಿದರು. ಸಭೆಯಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ, ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಅಬಕಾರಿ ಆಯುಕ್ತ ರವಿಶಂಕರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[24/02, 12:51 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂ ಮಾರುಕಟ್ಟೆ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜತೆ ಬಜೆಟ್ ಪೂರ್ವ ಸಭೆ ನಡೆಸಿದರು. ಸಭೆಯಲ್ಲಿ ಹಣಕಾಸು ಇಲಾಖೆ ಎಸಿಎಸ್ ಐ ಎಸ್ ಎನ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ, ಕ್ರೆಡಾಯ್ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
[24/02, 6:34 PM] Gurulingswami. Holimatha. Vv. Cm: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಹೊರವರ್ತುಲ ರಸ್ತೆಯಿಂದ ಪೆರಿಫೆರಲ್ ರಿಂಗ್ ರಸ್ತೆ ವರೆಗೆ 45 ಮೀಟರ್ ಅಗಲದ ರಸ್ತೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್, ಸಂಸದ ಪಿಸಿ ಮೋಹನ್, ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
[24/02, 6:37 PM] Gurulingswami. Holimatha. Vv. Cm: ಬೆಂಗಳೂರು, ಫೆಬ್ರವರಿ 24: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ , ಮಾರತ್ತಹಳ್ಳಿಯಲ್ಲಿ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಪಿಬಸಿ ಮೋಹನ್, ಶಾಸಕ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.
[24/02, 7:17 PM] Gurulingswami. Holimatha. Vv. Cm: ಬೆಂಗಳೂರು, ಫೆಬ್ರವರಿ 24: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ 150 ಅಡಿಗಳ ಸಿಡಿಪಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಪಿ ಸಿ ಮೋಹನ್, ಶಾಸಕ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.
[24/02, 7:31 PM] Gurulingswami. Holimatha. Vv. Cm: ಬೆಂಗಳೂರು, ಫೆಬ್ರವರಿ 24: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಪಿ ಸಿ ಮೋಹನ್, ಶಾಸಕ ಅರವಿಂದ ಲಿಂಬಾವಳಿ, ಗೋಪಿನಾಥ್ ರೆಡ್ಡಿ, ರಮೇಶಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
[24/02, 7:35 PM] Gurulingswami. Holimatha. Vv. Cm: ಬೆಂಗಳೂರು, ಫೆಬ್ರವರಿ 24: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಮುನ್ನೆಕೊಳಲಿನಲ್ಲಿ 250 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
[24/02, 7:51 PM] Gurulingswami. Holimatha. Vv. Cm: ಬೆಂಗಳೂರು, ಫೆಬ್ರವರಿ 24: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು *ಮಹದೇವಪುರ ವಿಧಾನಸಭಾ ಕ್ಷೇತ್ರ* *ವ್ಯಾಪ್ತಿಯಲ್ಲಿನ 250* *ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ* *ಆಸ್ಪತ್ರೆ* *ನಿರ್ಮಾಣ ಕಾಮಗಾರಿ* ಶಂಕುಸ್ಥಾಪನೆ, ಕೆ.ಆರ್.ಡಿ.ಸಿ.ಎಲ್. ವತಿಯಿಂದ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ, *150* *ಅಡಿಗಳ ಸಿ.ಡಿ.ಪಿ. ರಸ್ತೆ* *ಕಾಮಗಾರಿಯ ಭೂಮಿ ಪೂಜೆ,* ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ಸೇರಿದಂತೆ ವಿವಿಧ ಕಲ್ಯಾಣ *ಕಾರ್ಯಕ್ರಮಗಳಿಗೆ ಚಾಲನೆ ನೀಡಿ* *ಕಾರ್ಯಕ್ರಮವನ್ನುದ್ದೇಶಿಸಿ* ಮಾತನಾಡಿದರು.
[24/02, 8:49 PM] Gurulingswami. Holimatha. Vv. Cm: ಬೆಂಗಳೂರು, ಫೆಬ್ರವರಿ 24: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರೆಸ್ ಕ್ಲಬ್ ಆಪ್ ಬೆಂಗಳೂರು ವತಿಯಿಂದ ಆಯೋಜಿಸಿದ್ದ 2020 ಮತ್ತು 2021 ನೇ ಸಾಲಿನ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಅವರಿಗೆ ವಿಶೇಷ ಪ್ರಶಸ್ತಿ ಪ್ರದಾನ ಮಾಡಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಯಡಿಯೂರಪ್ಪ ಹಾಗೂ ಸುದೀಪ ಪ್ರಶಸ್ತಿ ಪ್ರದಾನ ಮಾಡಿದರು.
೨೦೨೦ ಹಾಗೂ ೨೦೨೧ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದರು.
ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಕಾರ್ಯದರ್ಶಿ ಹೆಚ್.ವಿ.ಕಿರಣ್ ಉಪಸ್ಥಿತರಿದ್ದರು.
Post a Comment