[27/02, 12:36 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮಿಗಳು ಮೊದಲಾದವರು ಉಪಸ್ಥಿತರಿದ್ದರು.
[27/02, 12:36 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350 ನೇ ವರ್ಷಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ ನಿರಾಣಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮಿಗಳು, ಪಂಚಮಸಾಲಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
[27/02, 12:36 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
[27/02, 12:36 PM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕೋಲಾರ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಟಿಶರ್ಟ್ ಹಾಗೂ ಕೊಡೆಗಳನ್ನು ವಿತರಿಸಿದರು . ಕೆಸಿ ರೆಡ್ಡಿ ಸರೋಜಮ್ಮ ವೆಲ್ ಫೇರ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ , ಕೆಸಿ ರೆಡ್ಡಿ ಮೊಮ್ಮಗಳಾದ ವಸಂತ ಕವಿತಾ ರೆಡ್ಡಿ ಮತ್ತು ಇತರರು ಉಪಸ್ಥಿತರಿದ್ದರು.
[27/02, 8:58 PM] Pannagaraja Kulakarni: *ಉಕ್ರೇನ್ ನಲ್ಲಿರುವ ಉಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು,ಫೆಬ್ರವರಿ 27 :
ಉಕ್ರೇನ್ ನಲ್ಲಿರುವ ಇನ್ನುಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆರಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ತಿಳಿಸಿದರು.
ಉಕ್ರೇನ್ ನಿಂದ ಇನ್ನುಳಿದ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ವಿದೇಶಾಂಗ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೇಂದ್ರ ಹಾಗೂ ರಾಜ್ಯದ ಸಹಾಯವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಚರ್ಚಿಸಲಾಗಿದೆ. ಉಕ್ರೇನ್ ನ ಕಾರ್ಕೈವ್ ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಅಲ್ಲಿನ ಮೆಟ್ರೋ, ಬಂಕರ್ ಗಳಲ್ಲಿ ಬಹಳಷ್ಟು ಜನರನ್ನು ಇರಿಸಿರುವುದು ಆತಂಕದ ವಿಷಯ. ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಊಟ ಮತ್ತು ನೀರಿನ ವ್ಯವಸ್ಥೆಯನ್ನು ಪೂರೈಸಲು ಕೇಂದ್ರ ವಿದೇಶಾಂಗ ಸಚಿವರನ್ನು ಮನವಿ ಮಾಡಲಾಗಿದೆ. ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವ ತನಕ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿ ಇದ್ದಾರೆ ಎಂದು ತಿಳಿಸಿದರು.
[27/02, 8:58 PM] Pannagaraja Kulakarni: *ಯುವನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಫೆಬ್ರವರಿ 27 :
ಇಂದಿನ ಯುವನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆರಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಥಮ ಮುಖ್ಯಮಂತ್ರಿಯಾಗಿದ್ದ ಕೆ.ಸಿ.ರೆಡ್ಡಿಯವರು ದೂರದೃಷ್ಟಿಯಿರುವ ಹಿರಿಯ ನಾಯಕರು. ಕೆ.ಸಿ.ರೆಡ್ಡಿಯವರು ಹಾಕಿರುವ ಆಡಳಿತದ ಅಡಿಪಾಯದಿಂದ ಮೈಸೂರು ಸಂಸ್ಥಾನ ಹಾಗೂ ಕರ್ನಾಟಕ ರಾಜ್ಯವನ್ನು ಕಟ್ಟಲು ಸಾಧ್ಯವಾಯಿತು. ಉತ್ತಮ ಆಡಳಿತಗಾರರಾದ ಕೆ.ಸಿ.ರೆಡ್ಡಿಯವರ ಆದರ್ಶಗಳು, ತತ್ವಗಳು, ಸಾರ್ವಜನಿಕ ಬದುಕಿನ ರೀತಿ, ಜನರ ಸಮಸ್ಯೆಗಳನ್ನು ಒಟ್ಟಾಗಿ ಬಗೆಹರಿಸುವ ಬಗೆ ಎಲ್ಲರಿಗೂ ಸ್ಪೂರ್ತಿಯಾಗಿದೆ. ಅವರ ಆಡಳಿತಾವಧಿಯಲ್ಲಿ ಪ್ರಾದೇಶಿಕ, ಸಾಮಾಜಿಕ ಅಸಮತೋಲನ ನಿವಾರಣೆಗೆ ಆದ್ಯತೆ ನೀಡಲಾಗುತ್ತಿತ್ತು ಎಂದು ತಿಳಿಸಿದರು.
*ಕೆ.ಸಿ.ರೆಡ್ಡಿಯವರ ಜೀವನಾದರ್ಶಗಳು ಪ್ರೇರಣಾದಾಯಕ:*
ಕೋಲಾರ ಜಿಲ್ಲೆಯ ಕೆ.ಸಿ.ರೆಡ್ಡಿಯವರು ವೈಜ್ಞಾನಿಕ ಚಿಂತನೆಯ ವ್ಯಕ್ತಿ. ಕರ್ನಾಟಕ ರಾಜ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ವಾಮ್ಯದ ಬಿಹೆಚ್ಇಎಲ್, ಬಿಎಂಎಲ್ ಹೆಚ್ ಎ ಎಲ್ ಸೇರಿದಂತೆ ಹಲವಾರು ಕೈಗಾರಿಕೆಗಳನ್ನು ಸ್ಥಾಪಿಸಲು ಕಾರಣರಾದರು. ಹೊಸ ತಂತ್ರಜ್ಞಾನದಿಂದ ಹೊಸ ಚಿಂತನೆಗೆ ನಾಂದಿ ಹಾಡಿದ್ದರು. ಇದರಿಂದಾಗಿ ನಮ್ಮ ರಾಜ್ಯ ಐಟಿಬಿಟಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಾಣಲು ಸಹಕಾರಿಯಾಯಿತು. ಅಂದಿನ ಉದ್ಯಮಗಳಲ್ಲಿದ್ದ ಆರ್ ಎಂಡ್ ಡಿ, ರಾಜ್ಯದಲ್ಲಿ ಇಂದಿನ ತಂತ್ರಜ್ಞಾನದ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದೆ. ಸದಾ ಸ್ಮರಣೀಯರಾದ ಕೆ.ಸಿ.ರೆಡ್ಡಿಯವರ ಜೀವನಾದರ್ಶಗಳು ಸದಾಕಾಲ ಪ್ರೇರಣಾದಾಯಕ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಪ್ರತಿಮೆಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಯಿಸಿ, ಕೆ.ಸಿ.ರೆಡ್ಡಿಯವರ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[27/02, 8:58 PM] Pannagaraja Kulakarni: *ಪೋಲಿಯೋ ವಿರುದ್ಧದ ನಮ್ಮ ಸಮರ ಅತ್ಯಂತ ಯಶಸ್ವಿಯಾಗಿದೆ:ಸಿಎಂ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಫೆಬ್ರವರಿ 27: ದೇಶದಲ್ಲಿ ಟಿಬಿ, ಕಾಲಾರಾ, ಮಲೇರಿಯಾ ಹಾಗೂ ಪ್ಲೇಗ್ ರೋಗಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಅವುಗಳ ಮೇಲೆ ಸಂಪೂರ್ಣ ಹಿಡಿತಸಾಡಿಸಿದ್ದೇವೆ.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಪೋಲಿಯೋ ಮುಕ್ತ ರಾಷ್ಟ್ರವಾದರೂ ಪ್ರತಿ ವರ್ಷ ಮೂರು ದಿನ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗುತ್ತದೆ.ಲಸಿಕಾ ಕಾರ್ಯಕ್ರಮ ಬಹಳ ಮುಖ್ಯ.25 ವರ್ಷಗಳ ಹಿಂದೆ ಪೋಲಿಯೋ ದುಷ್ಪರಿಣಾಮಗಳನ್ನು ನಾವು ಕಣ್ಣಾರೆ ಕಂಡಿದ್ದೇವೆ. ಅಂಗವಿಲಕತೆಗೆ ಮುಖ್ಯ ಕಾರಣ ಹಾಗೂ ದೊಡ್ಡ ಪ್ರಮಾಣದ ಜೀವ ಹಾನಿಗೆ ಪೋಲಿಯೋ ಕಾರಣವಾಗಿತ್ತು. ಮಕ್ಕಳಿಗೆ ಬರುವ ಈ ಕಾಯಿಲೆ ದೇಹವನ್ನು ನಿಷ್ಕ್ರಿಯ ಮಾಡಿ ಕ್ಷೋಭೆಯನ್ನುಂಟು ಮಾಡಿತ್ತು. ಆ ಸಂದರ್ಭದಲ್ಲಿ ಕೋವಿಡ್ ಗೆ ನಡೆದ ಹೋರಾಟದಂತೆಯೇ ಹೋರಾಟ ನಡೆದು ಓರಲ್ ಲಸಿಕೆ ಬಂದ ನಂತರ ನಿಯಂತ್ರಣಕ್ಕೆ ತರಲಾಯಿತು. ಪ್ರಗತಿ ಪರ ರಾಷ್ಟ್ರಗಳ ನಡುವೆ ಭಾರತದಲ್ಲಿ ತಳಮಟ್ಟದಿಂದ ಆಗುವ ಅಭಿಯಾನದ ಅನುಷ್ಠಾನ ಬೇರೆ ದೇಶಗಳಲ್ಲಿ ಕಾಣುವುದಿಲ್ಲ. ಬಡತನ, ಅಪೌಷ್ಟಿಕತೆ ಇರುವಲ್ಲಿ ಈ ರೀತಿಯ ರೋಗಗಳಿಗೆ ಹೆಚ್ವಿನ ಅವಕಾಶವಿರುವುದರಿಂದ ಜನರು ಕೂಡ ಜಾಗೃತರಾಗಿದ್ದರೆ ಎಂದರು.
ಪ್ರಧಾನಮಂತ್ರಿಗಳು ಸಹ ಇಂದು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಅವರ ಚಿಂತನೆಗಳು ವೈಜ್ಞಾನಿಕ ವಾಗಿವೆ. ಸ್ವಚ್ಛ ಭಾರತ ಯೋಜನೆಯಿಂದ ಹಲವಾರು ರೋಗರುಜಿನಗಳು ದೂರವಿಡಬಹುದು. ಯೋಗವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವುದು ಒಂದೆಡೆಯಾದರೆ, ಪ್ರತಿಯೊಬ್ಬ ವ್ಯಕ್ತಿಯ ಸ್ವಾಸ್ಥ್ಯ ವನ್ನು ಉತ್ತಮವಾಗಿಡಲು ಯೋಗ ಸಹಕಾರಿ ಎಂದರು.
*ಲಸಿಕೆ ಮೂಲಕ ಕೋವಿಡ್ ನಿಯಂತ್ರಣ*
ಕೋವಿಡ್ ನಿಯಂತ್ರಿಸಲು ಸಹ ಪ್ರಧಾನಿಗಳು ಲಸಿಕಾ ಅಭಿಯಾನಕ್ಕೆ ಅತಿ ಹೆಚ್ಚು ಮಹತ್ವವನ್ನು ನೀಡಿ ಅಭಿಯಾನವನ್ನು ಪ್ರಾರಂಭಿಸಿದರು. ಮೊದಲ ಹಾಗೂ ಎರಡನೇ ಅಳೆಯನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು. ಭಾರತದಲ್ಲಿಯೇ ಲಸಿಕೆ ತಯಾರಿಸಿ, ವಿದೇಶಗಳಿಗೂ ರಫ್ತು ಮಾಡಲಾಗಿದೆ. ಇದರ ಶ್ರೇಯಸ್ಸು ಲಸಿಕೆ ತಯಾರಿಸಿದ ವಿಜ್ಞಾನಿಗಳಿಗೆ ಹಾಗೂ ದೇಶದ 130 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದರು.
ಪಂಚಮಸಾಲಿ ಮಠದ ಜಗದ್ಗುರು ಶ್ರೀ ವಚನಾನಂದಸ್ವಾಮಿಗಳು ಯೋಗದಲ್ಲಿ ದೊಡ್ದ ಸಾಧನೆ ಮಾಡಿದ್ದಾರೆ. ಜನರಿಗೆ ಯೋಗವನ್ನು ಕಲಿಸುತ್ತಾ ಶ್ವಾಸ ಗುರು ಎಂಬ ಬಿರಿದು ಸಹ ಪಡೆದ್ದಿದ್ದಾರೆ.
ಆರೋಗ್ಯ ಬಹಳ ಮುಖ್ಯ. ಕರ್ನಾಟಕ ರಾಜ್ಯ ಆರೋಗ್ಯಕ್ಕೆ ಅತಿ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ. ಇದು ಮುಂದುವರೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮಿಗಳು ಮೊದಲಾದವರು ಉಪಸ್ಥಿತರಿದ್ದರು.
[27/02, 8:58 PM] Pannagaraja Kulakarni: *ಕೆಳದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ತೀರ್ಮಾನ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಫೆಬ್ರವರಿ 27: ಕೆಳದಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಪಡಿಸಲು ಸರ್ಕಾರ ತೀರ್ಮಾನಿಸಿದೆ ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350 ನೇ ವರ್ಷಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಿದ್ದರು.
ಕೆಳದಿ ಚನ್ನಮ್ಮನ ಪಟ್ಟಾಭಿಷೇಕದ ದಿನದಂದು ಆಚರಣೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಮುಂದಿನ ವರ್ಷ ಕೆಳದಿ ಯಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದರು.
ಕೆಳದಿ ಚನ್ನಮ್ಮ ಒಬ್ಬ ಧೀರ ಮಹಿಳೆ. ಇಂತಹ ವೀರ ಮಹಿಳೆಯರನ್ನು ಗುರುತಿಸುವ ಮೂಲಕ ಕರ್ನಾಟಕದ ಭವ್ಯ ಪರಂಪರೆಯ ಜೊತೆಗೆ ಭವಿಷ್ಯ ವನ್ನು ನಿರ್ಮಾಣ ಮಾಡಬಹುದು ಎಂದರು.
*ಪ್ರಗತಿಪರ ನಿಲುವಿನ ಚನ್ನಮ್ಮ*
ಕರ್ನಾಟಕ ರಾಜ್ಯಕ್ಕೆ ತನ್ನದೇ ಸಂಸ್ಕೃತಿ, ಹೋರಾಟ , ಭಾಷೆ, ಜೀವನಶೈಲಿ, ಆರ್ಥಿಕ, ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳನ್ನು ಹೊಂದಿದೆ. ಇವೆಲ್ಲವೂ ಸಮಗ್ರವಾಗಿ ಸೇರಿದಾಗ ಮಾತ್ರ ಅದು ಕರ್ನಾಟಕವಾಗುತ್ತದೆ. ಇದರಲ್ಲಿ ಕೆಳದಿ ಚನ್ನಮ್ಮನ ಪಾತ್ರ ದೊಡ್ಡದಿದೆ. ಮಹಿಳೆಯೊಬ್ಬಳು ಕಂದಾಚಾರವನ್ನು ಬಿಟ್ಟು ಪ್ರಗತಿಪರ ಚಿಂತನೆಯಿಂದ ಆ ಕಾಲದಲ್ಲಿ ತನ್ನ ನಿಲುವು ಹಾಗೂ ಗಟ್ಟಿತನಗಳನ್ನು ತೋರಿದಳು. ದೂರದೃಷ್ಟಿ ,ಕ್ಷಮಿಸುವ ದೊಡ್ಡ ಗುಣ, ಆಕೆಯಲ್ಲಿತ್ತು. ಚನ್ನಮ್ಮನ ಅಸ್ತಿತ್ವಕ್ಕೆ ಧಕ್ಕೆ ತಂದು ಮೂರು ಬಾರಿ ಆಕ್ರಮಿಸಿದವರನ್ನು ಕ್ಷಮಿಸಿ ಆಶ್ರಯ ನೀಡುವುದು ಅಪರೂಪ. ಕಿತ್ತೂರು ಚೆನ್ನಮ್ಮ ಆ ಭಾಗದಲ್ಲಿ ಹೋರಾಡಿದಂತೆಯೇ ಕೆಳದಿ ಚನ್ನಮ್ಮನ ಹೋರಾಟವೂ ರೋಮಾಂಚಕವಾಗಿದೆ. ನಮ್ಮ ಮಕ್ಕಳಿಗೆ ಇವರ ಬಗ್ಗೆ ಪಠ್ಯ ಮುಖೇನ ತಿಳಿಸುವ ಅವಶ್ಯಕತೆ ಇದೆ.
ಪೋಲಿಯೋ ಹಾಗೂ ಕೆಳದಿ ಚನ್ನಮ್ಮನ ಕಾರ್ಯಕ್ರಮ ಒಟ್ಟಿಗೆ ನಡೆದಿರುವುದು ಆರೋಗ್ಯ ಹಾಗೂ ಐತಿಹಾಸಿಕ ಕರ್ನಾಟಕದ ಸಂಗಮವಾಗಿದೆ ಎಂದು ಅಭಿಪ್ರಾಯ ಪಟ್ಟರು.
ದೂರದೃಷ್ಟಿ ಇರುವ ಪಂಚಮಸಾಲಿ ಶ್ರೀ ವಚನಾನಂದ ಜಗದ್ಗುರುಗಳು ತುಂಗಾ ತಟದಲ್ಲಿ ತುಂಗಾಭದ್ರಾರತಿ ಕಾರ್ಯಕ್ರಮ ರೂಪಿಸಿ, ಸೃಷ್ಟಿಕರ್ತ ನಿಗೆ ನಮ್ಮ ನಮನಗಳನ್ನು ಸಲ್ಲಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅದು ನಮ್ಮ ಸಂಸ್ಕೃತಿ. ಎಲ್ಲಾ ನದಿ ತಟಗಳಲಿ ಆರತಿ ಕಾರ್ಯಕ್ರಮ ರೂಪಿಸಲು ಬೇಡಿಕೆ ಬರುತ್ತಿದ್ದು. ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮೊದಲಾದವರು ಉಪಸ್ಥಿತರಿದ್ದರು.
[27/02, 8:58 PM] Pannagaraja Kulakarni: ಬೆಂಗಳೂರು, ಫೆಬ್ರವರಿ 27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ: ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಸಚಿವರಾದ ಆರ್.ಅಶೋಕ್, ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್, ಸಂಸದರಾದ ಸಂಸದ ಸದಾನಂದ ಗೌಡ ಹಾಗೂ ಸುಮಲತಾ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮೊದಲಾದವರು ಉಪಸ್ಥಿತರಿದ್ದರು.
[27/02, 8:58 PM] Pannagaraja Kulakarni: ಬೆಂಗಳೂರು, ಫೆಬ್ರವರಿ 27: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು *ಕಂಠೀರವ ಸ್ಟುಡಿಯೋದಲ್ಲಿ ಡಾ||* *ಅಂಬರೀಷ್ ಪ್ರತಿಷ್ಠಾನದ* ವತಿಯಿಂದ ಆಯೋಜಿಸಿರುವ *ಡಾ. ಅಂಬರೀಷ್* *ಸ್ಮಾರಕ* ನಿರ್ಮಾಣದ *ಭೂಮಿ ಪೂಜೆ* ಕಾರ್ಯವನ್ನು ನೆರವೇರಿಸಿ ಮಾತನಾಡಿದರು.
[27/02, 8:58 PM] Pannagaraja Kulakarni: ಚಿತ್ರನಟ ಅಂಬರೀಶ್ ಸ್ಮಾರಕಕ್ಕೆ ಮುಖ್ಯಮಂತ್ರಿ ಗಳಿಂದ ಶಂಕುಸ್ಥಾಪನೆ
*ಸುತ್ತಮುತ್ತಲಿನ ರಾಜ್ಯಗಳ ಜನರೂ ಬಂದು ನೋಡುವಂಥ ಉತ್ತಮ ಸ್ಮಾರಕ ನಿರ್ಮಾಣ* *ಸಿಎಂ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಮಾತ್ರವಲ್ಲದೆ ಸುತ್ತಮುತ್ತಲಿನ ರಾಜ್ಯಗಳ ಜನರೂ ಬಂದು ನೋಡುವಂಥ ಉತ್ತಮ ಸ್ಮಾರಕ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಚಿತ್ರನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
"ಅಂಬರೀಶ್ ಅವರನ್ನು ಯಾವಾಗಲೂ ಅಂಬರೀಶ್ ಎಂದೇ ಸಂಬೋಧಿಸುತ್ತಿದ್ದೆ. ಈಗಲೂ ಹಾಗೆಯೇ ಕರೆಯುತ್ತೇನೆ. ನಮ್ಮದು 40 ವರ್ಷಗಳಿಗೂ ಮಿಗಿಲಾದ ಸ್ನೇಹ. ಒಟ್ಟಿಗೆ ಓಡಾಡಿ, ಸಮಯ ಕಳೆದಿದ್ದೇವೆ.ಊಟ ಮಾಡಿದ್ದೇವೆ. ಕರ್ನಾಟಕದಾದ್ಯಂತ ಸುತ್ತಿದ್ದೇವೆ. ಮಾಡಬಹುದಾದ್ದನ್ನು ಮಾಡಬಾರದ್ದನ್ನು ಮಾಡಿದ್ದೇವೆ" ಅಂಬರೀಶ್ ಅವರೊಂದಿಗಿನ ಒಡನಾಟವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮರಿಸಿದ ಬಗೆ ಇದು.
"ಅಂಬರೀಶ್ ತೆರೆದ ಪುಸ್ತಕವಿದ್ದಂತೆ. ಯಾವುದನ್ನೂ ಮುಚ್ಚಿಡುತ್ತಿರಲಿಲ್ಲ. ಯಾರು ತಮ್ಮ ಮನದಾಳದ ಇಚ್ಛೆಯಂತೆ ಜೀವನ ನಡೆಸಲು ಸಾಧ್ಯವಾಗುತ್ತದೆಯೋ ಅವರು ನಿಜವಾದ ಧೀರ. ನಹಲವಾರು ನಾಯಕಣತರನ್ನು ನೋಡಿದ್ದೇವೆ. ನಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವುದು ಎಷ್ಟು ಕಷ್ಟಸಾಧ್ಯವೆಂದು ವೈರಲ್ಲರಿಗೂ ಗೊತ್ತಿದೆ. ಆದರೆ ಅಂಬರೀಶ್ ಮಾತ್ರ ಏನೇ ಬಂದರೂ ಆತ್ಮಸಾಕ್ಷಿಗೆ ವಿರುದ್ಧವಾಗಿ ಒಂದು ದಿನವೂ ಬದುಕಲಿಲ್ಲ. ತನ್ನ ಸ್ವಂತ ಇಚ್ಚಾಶಕ್ತಿಯ ಮೇಲೆ ಬದುಕಿದಂತಹ ಒಬ್ಬ ಮೇರು ನಟ ಅಂಬರೀಶ್. ಇದು ದೈವದತ್ತ ಕೊಡುಗೆ. ಅತ್ಯಂತ ಆತ್ಮೀಯ. ಅವನ ಬಾಯಲ್ಲಿ 'ಲೇ.'ಎಂದು ಕರೆಸಿಕೊಳ್ಳುವ ಬಯಕೆ ಅವರ ಸ್ನೇಹಿತರಲ್ಲಿತ್ತು. ಅವರು ಗೌರವ ನೀಡಿ ಮಾತನಾಡಿದರೆ ಆ ವ್ಯಕ್ತಿ ಆತ್ಮೀಯರಲ್ಲವೆಂದು ಅನಿಸುತ್ತಿತ್ತು. ಬಾಲ್ಯ, ಚಿತ್ರರಂಗ, ರಾಜಕೀಯದಲ್ಲಿಯೂ ಹಾಗೆಯೇ ಇದ್ದವರು. ಹುಟ್ಟಿನಿಂದ ನಾಯಕತ್ವದ ಗುಣಗಳು ಅವರಲ್ಲಿತ್ತು. ಸಿನಿಮಾದಲ್ಲಿ ಖಳನಾಯಕನ ಪಾತ್ರ ಮಾಡಿದರೂ, ನಾಯಕನ ಪಾತ್ರವರ್ ಅವರಿಗೆ ಶೋಭೆಯನ್ನು ತಂದುಕೊಟ್ಟಿತು ಎಂದರು.
*ಸ್ನೇಹ ಜೀವಿ*
ಸ್ನೇಹಕ್ಕೆ ಬಹಳ ಬೆಲೆ ನೀಡಿ, ಅದಕ್ಕಾಗಿ ಏನು ಬೇಕಾದರೂ ಮಾಡುತ್ತಿದ್ದ ವ್ಯಕ್ತಿ ಅವರು. ಬೆಂಗಳೂರಿನಲ್ಲಿ ಶೂಟಿಂಗ್ ಮಾಡುವಾಗ ನಾಲ್ಕೈದು ಜನ ಸ್ನೇಹಿತರು ಕಾರಿನ ಹಾರ್ನ್ ಹೊಡೆದರೆ ಸಾಕು ಹೇಗಿದ್ದರೂ ಬಿಟ್ಟು ಬರುತ್ತಿದ್ದರು. ನಿರ್ಮಾಪಕರು ಮನೆಗೆ ಬಂದು ಚಿತ್ರೀಕರಣದ ವೇಳೆ ದಯಮಾಡಿ ಬರಬೇಡಿ ಎಂದು ಹೇಳಿ ಹೋದ ಪ್ರಸಂಗವನ್ನು ಮುಖ್ಯ ಮಂತ್ರಿಗಳು ಸ್ಮರಿಸಿದರು.
*ಅಧಿಕಾರ ಧಿಕ್ಕರಿಸಿ ರಾಜಕಾರಣ*
ಬಡವರಿಗೆ, ರೈತರಿಗಾಗಿ ಹೃದಯ ಮಿಡಿಯುತ್ತಿತ್ತು. ಕರ್ನಾಟಕವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ತುಡಿತ ಅವರಲ್ಲಿತ್ತು. ಆದರೆ ಅಂಬರೀಶನಿಗೆ ಅಧಿಕಾರಕ್ಕೆ ಅಂಟಿಕೊಳ್ಳುವ ಗುಣವಿರಲಿಲ್ಲ. ಅಧಿಕಾರವಿರಲಿ, ಇಲ್ಲದಿರಲಿ ಅದನ್ನು ಧಿಕ್ಕರಿಸಿಯೇ ರಾಜಕಾರಣ ಮಾಡಿದವರು. ಅಂತಹ ವ್ಯಕ್ತಿ ಗಳು ಬಹಳ ಕಡಿಮೆ. ಕೇಂದ್ರ ಸಚಿವರಿದ್ದಾಗ ಕಾವೇರಿ ವಿವಾದ ಎದುರಾದಾಗ ಒಂದು ಕ್ಷಣವೆಯೂ ಯೋಚಿಸದೆ, ಅವರು ರಾಜಿನಾಮೆಯನ್ನು ಬಿಸಾಡಿ ಬಂದವರು. ಕಾವೇರಿ ಹೋರಾಟದಲ್ಲಿ ಅಧಿಕಾರ ತ್ಯಾಗ ಮಾಡಿದ್ದು ಅಂಬರೀಶ್ ಮಾತ್ರ ಎಂದರು.
*ಮಂಡ್ಯ ಪ್ರೀತಿ*
ಮಂಡ್ಯ ಅಂದರೆ ಅವರಿಗೆ ಪಂಚಪ್ರಾಣ. ಮಂಡ್ಯದವರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಮಾತನಾಡಿಸಿ ಪರಿಹಾರ ಕಲ್ಪಿಸುತ್ತಿದ್ದರು. ಅವರಿದ್ದಲ್ಲಿ ಜೀವಂತಿಕೆ ಇರುತ್ತಿತ್ತು. ವಿದ್ಯುತ್ ಸಂಚಾರವಾದಂಥ ಪರಿಣಾಮ ಇರುತ್ತಿತ್ತು ಎಂದರು.
ಅವರು ಇನ್ನಷ್ಟು ಕಾಲ ನಮ್ಮೊಡನೆ ಇರಬೇಕಿತ್ತು. ಕನ್ನಡ ಚಿತ್ರರಂಗದ ಹೆಸರನ್ನು ಇತರೆ ರಾಜ್ಯದಲ್ಲಿಯೂ ಅಭಿಮಾನಪೂರ್ವಕವಾಗಿ ತೆಗೆಡಿಕೊಳ್ಳುವಂತೆ ಮಾಡಿದ್ದರು. ಅಜಾತಶತ್ರು ಎಂದು ಅವರನ್ನು ಕರೆಯಲಾಗುತ್ತಿತ್ತು. ಯಾರೊಂದಿಗೂ ದ್ವೇಷ ಸಾಧಿಸುತ್ತಿರಲಿಲ್ಲ.
ಅವರನ್ನು ಕಾಣಲು 5 ಲಕ್ಷ ಕ್ಕಿಂತಲೂ ಹೆಚ್ಚು ಜನ ಬಿಜಾಪುರದಲ್ಲಿ ಸೇರಿದ್ದರು ಎಂದು ನೆನೆಸಿಕೊಂಡ ಮುಖ್ಯಮಂತ್ರಿಗಳು, ಅವರು ಯಾವುದೇ ತರಬೇತಿ ಇಲ್ಲದೆ ಅಲ್ಲೇ ಮಾಡಿ ತೋರಿಸುವ ನೈಜ ನಟನೆ ಇತ್ತು. ಅತ್ಯಂತ ಗಟ್ಟಿಯಾದ ಬಾಳ ಸಂಗಾತಿ ಸುಮಲತಾ.ಅವರದ್ದು ಅನ್ಯೋನ್ಯ ದಾಂಪತ್ಯ. ಅಂಬರೀಶ್ ಅವರ ಗುಣಧರ್ಮಗಳನ್ನು ಸುಮಲತಾ ಅವರು ರೂಢಿಸಿಕೊಂಡಿದ್ದಾರೆ.
ಅವರ ಪುತ್ರ ಅಭಿಷೇಕ್ ಸಹ ಅವರ ತಂದೆಯ ಗುಣಗಳನ್ನು ಪಡೆದು ಆದಷ್ಟು ಬೇಗ ಮತ್ತೊಮ್ಮೆ ಅಂಬರೀಶ್ ಅವರನ್ನು ಪರಿಚಯಿಸುತ್ತಾರೆ ಎಂಬ ನಿರೀಕ್ಷೆ ಇದೆ ಎಂದರು. ಕಲಾರಂಗಕ್ಕೆ ಉತ್ತಮ ಸೇವೆ ದೊರಕಬೇಕು.
*ಪುನೀತ್ ಸ್ಮಾರಕ*
ಡಾ: ರಾಜ್ ಕುಮಾರ್, ವಿಷ್ಣುವರ್ಧನ್,ಶಂಕರ್ ನಾಗ್, ಪುನೀತ್ ರಾಜ್ ಕುಮಾರ್, ಮೇರು ನಟರನ್ನು ನಾಡು ಕಳೆದುಕೊಂಡಿದೆ. ಪುನೀತ್ ಅವರ ಸ್ಮಾರಕ ವನ್ನು ಸದ್ಯದಲ್ಲಿಯೇ ನಿರ್ಮಿಸಲಾಗುವುದು ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ದಿನಾಂಕವನ್ನೂ ಘೋಷಿಸಲಾಗುವುದು ಎಂದರು.
ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಸಣ್ಣ ಕೃತಜ್ಞತೆ ಹೇಳುವ ಭಾಗ್ಯ ನನಗೆ ದೊರೆತಿದೆ. ಅವರು ಎಲ್ಲೇ ಇದ್ದರೂ ಅವರು ನಮ್ಮನ್ನು ನೆನೆಸಿಕೊಳ್ಳುತ್ತಾರೆ ಎಂದರು.
[27/02, 8:58 PM] Pannagaraja Kulakarni: ಶಿಗ್ಗಾಂವ ಪಟ್ಟಣದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬ್ರಹ್ಮ ಕುಮಾರಿ ಈಶ್ವರೀ ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಅಯೋಜಿಸಲಾದ ಭಾರತದ ಪ್ರಖ್ಯಾತ ತೀರ್ಥಕ್ಷೇತ್ರಗಳ ದ್ವಾದಕಜ್ಯೋತೀಲಿ೯ಂಗಗಳ ಪುಣ್ಯದರ್ಶನ6666 ಕಾರ್ಯಕ್ರಮ ಉದ್ಘಾಟಿಸಿದರು
[27/02, 8:58 PM] Pannagaraja Kulakarni: ಮಾನ್ಯಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸವಣೂರು ದೊಡ್ಡಹುಣಸಿ ಕಲ್ಮಠದ ಆವರಣದಲ್ಲಿ ಲಿಂ ಶ್ರೀ ಗುರು ರಾಚೋಟೇಶ್ವರ ಮಹಾಸ್ವಾಮಿಗಳವರ 45 ನೇ ಪುಣ್ಯ ಸ್ಮರಣೋತ್ಸವ " ಶರಣ ಸಂಸ್ಕೃತಿ ಸಮಾರಂಭದಲ್ಲಿ ಕಲ್ಪ ವೃಕ್ಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಕಾರ್ಯಕ್ರಮ ಉದ್ಘಾಟಿಸಿದರು
[27/02, 8:58 PM] Pannagaraja Kulakarni: ಸವಣೂರು ಹುಣಿಸಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ಅವರನ್ನ ಮುಖ್ಯಮಂತ್ರಿಗಳು ಸನ್ಮಾನಿಸಿದರು
[27/02, 8:58 PM] Pannagaraja Kulakarni: ಮಾನ್ಯಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸವಣೂರು ದೊಡ್ಡಹುಣಸಿ ಕಲ್ಮಠದ ಆವರಣದಲ್ಲಿ ಲಿಂ ಶ್ರೀ ಗುರು ರಾಚೋಟೇಶ್ವರ ಮಹಾಸ್ವಾಮಿಗಳವರ 45 ನೇ ಪುಣ್ಯ ಸ್ಮರಣೋತ್ಸವ " ಶರಣ ಸಂಸ್ಕೃತಿ ಸಮಾರಂಭದಲ್ಲಿ ಕಲ್ಪ ವೃಕ್ಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹಾತ್ಮರ ಚರಿತ್ರಾಮೃತ ಹೊತ್ತಿಗೆ ಬಿಡುಗಡೆ ಗೊಳಿಸಿದರು
[27/02, 8:58 PM] Pannagaraja Kulakarni: ಸವಣೂರು ಹುಣಿಸಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ಅವರನ್ನ ಮುಖ್ಯಮಂತ್ರಿಗಳು ಸನ್ಮಾನಿಸಿದರು
[27/02, 8:58 PM] Pannagaraja Kulakarni: ಮಾನ್ಯಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸವಣೂರು ದೊಡ್ಡಹುಣಸಿ ಕಲ್ಮಠದ ಆವರಣದಲ್ಲಿ ಲಿಂ ಶ್ರೀ ಗುರು ರಾಚೋಟೇಶ್ವರ ಮಹಾಸ್ವಾಮಿಗಳವರ 45 ನೇ ಪುಣ್ಯ ಸ್ಮರಣೋತ್ಸವ " ಶರಣ ಸಂಸ್ಕೃತಿ ಸಮಾರಂಭದಲ್ಲಿ ಕಲ್ಪ ವೃಕ್ಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹುಣಿಸಿಮಠದ ಶ್ರೀ ಪ್ರಭು ಚೆನ್ನಬಸವ ಶ್ರೀಗಳನ್ನು ಸನ್ಮಾನಿಸಿದರು
[27/02, 8:58 PM] Pannagaraja Kulakarni: ಮೋಟಗಿ ಮಠದ ಶ್ರೀ ಚನ್ನಬಸವ ಸ್ವಾಮೀಜಿರವರಿಗೆ "ಕಲ್ಪವೃಕ್ಷಶ್ರೀ" ಪ್ರಶಸ್ತಿ ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಮಾಡಿದರು.
[27/02, 10:11 PM] Pannagaraja Kulakarni: ಮಾನ್ಯಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸವಣೂರು *ದೊಡ್ಡಹುಣಸಿ ಕಲ್ಮಠದ* *ಆವರಣದಲ್ಲಿ ಲಿಂ ಶ್ರೀ ಗುರು* *ರಾಚೋಟೇಶ್ವರ* *ಮಹಾಸ್ವಾಮಿಗಳವರ 45 ನೇ* ಪುಣ್ಯ ಸ್ಮರಣೋತ್ಸವ " *ಶರಣ* *ಸಂಸ್ಕೃತಿ ಸಮಾರಂಭದಲ್ಲಿ ಕಲ್ಪ* *ವೃಕ್ಷ ಪ್ರಶಸ್ತಿ ಪ್ರದಾನ* ಸಮಾರಂಭದಲ್ಲಿ ಹುಣಿಸಿಮಠದ ಶ್ರೀ *ಪ್ರಭು ಚೆನ್ನಬಸವ ಶ್ರೀಗಳನ್ನು* ಸನ್ಮಾನಿಸಿ. ಮಾತನಾಡಿದರು
Post a Comment