[25/02, 11:48 AM] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳು ಭೇಟಿಯಾಗಿ ತಮ್ಮ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಪಿ. ಹೇಮಲತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ಷಡಾಕ್ಷರಿ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
[25/02, 11:48 AM] Pannagaraja Kulakarni: ಬೆಂಗಳೂರು, ಫೆಬ್ರವರಿ 25: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಜಾದ್ ಭವನವನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಆನ್ ಲೈನ್ ಮೂಲಕ ಉದ್ಘಾಟಿಸಿದರು.
ಶಾಸಕ ಎಸ್ ಆರ್ ವಿಶ್ವನಾಥ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ , ನಿರ್ದೇಶಕ ಶಿವಕುಮಾರ್ ಉಪಸ್ಥಿತರಿದ್ದರು, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರರು ಉಪಸ್ಥಿತರಿದ್ದರು.
Post a Comment