ಮಾರ್ಚ್ 07, 2022
,
6:09PM
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಫಲಾನುಭವಿಗಳು, ಜನೌಷಧಿ ಕೇಂದ್ರಗಳ ಮಾಲೀಕರೊಂದಿಗೆ ಪ್ರಧಾನಿ ಮೋದಿ ಸಂವಾದ
ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಅರ್ಧದಷ್ಟು ಸೀಟುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಸಮಾನವಾಗಿ ವಿಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.
ಇದರಿಂದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. ಪ್ರಧಾನಮಂತ್ರಿಯವರು ಇಂದು ಜನೌಷಧಿ ಕೇಂದ್ರದ ಮಾಲೀಕರು ಮತ್ತು ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕ್ಯಾನ್ಸರ್, ಕ್ಷಯ, ಮಧುಮೇಹ ಮತ್ತು ಹೃದ್ರೋಗದಂತಹ ಕಾಯಿಲೆಗಳ ಚಿಕಿತ್ಸೆಗೆ ಅಗತ್ಯವಿರುವ 800 ಕ್ಕೂ ಹೆಚ್ಚು ಔಷಧಿಗಳ ಬೆಲೆಯನ್ನು ಕೇಂದ್ರವು ನಿಯಂತ್ರಿಸಿದೆ ಎಂದು ಅವರು ಹೇಳಿದರು. ಸ್ಟೆಂಟ್‌ಗಳು ಮತ್ತು ಮೊಣಕಾಲು ಅಳವಡಿಕೆಯ ವೆಚ್ಚವನ್ನು ಸಹ ನಿಯಂತ್ರಣದಲ್ಲಿ ಇಡಲಾಗಿದೆ ಎಂದು ಸರ್ಕಾರ ಖಚಿತಪಡಿಸಿದೆ.
ನಾಗರಿಕರಿಗೆ ವೈದ್ಯಕೀಯ ಸೇವೆಯನ್ನು ಕೈಗೆಟುಕುವಂತೆ ಮಾಡುವ ಬಗ್ಗೆ ಶ್ರೀ ಮೋದಿ ಅಂಕಿಅಂಶಗಳನ್ನು ನೀಡಿದರು. 50 ಕೋಟಿಗೂ ಹೆಚ್ಚು ಜನರು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಯಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. 3 ಕೋಟಿಗೂ ಹೆಚ್ಚು ಜನರು ಯೋಜನೆಯ ಲಾಭ ಪಡೆದಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರ 70 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಿಂದ 550 ಕೋಟಿ ರೂಪಾಯಿ ಉಳಿತಾಯವಾಗಿದೆ. ಮಂಡಿ ಅಳವಡಿಕೆ ಮತ್ತು ಔಷಧ ಬೆಲೆ ನಿಯಂತ್ರಣದಿಂದ 13 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಿದೆ.
ದೇಶದಲ್ಲಿ ಇದುವರೆಗೆ 8 ಸಾವಿರದ 500 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮೋದಿ ಹೇಳಿದರು. ಈ ಕೇಂದ್ರಗಳು ಈಗ ಸಾಮಾನ್ಯ ಜನರ ಪರಿಹಾರ ಕೇಂದ್ರಗಳಾಗುತ್ತಿವೆಯೇ ಹೊರತು ಮತ್ತೊಂದು ಸರ್ಕಾರಿ ಮಳಿಗೆಯಾಗಿಲ್ಲ ಎಂದರು. ಜನರಿಕ್ ಔಷಧಿಗಳ ಬಳಕೆ ಮತ್ತು ಜನೌಷಧಿ ಪರಿಯೋಜನಾ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 1 ರಿಂದ ದೇಶಾದ್ಯಂತ ಜನೌಷಧಿ ವಾರವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ ಥೀಮ್ "ಜನ್ ಔಷಧಿ-ಜನ್ ಉಪಯೋಗಿ".
ಒಂದು ರೂಪಾಯಿಯ ಸ್ಯಾನಿಟರಿ ನ್ಯಾಪ್‌ಕಿನ್‌ನ ಯಶಸ್ಸನ್ನು ಪ್ರಧಾನಿ ಗಮನಿಸಿದರು. 21 ಕೋಟಿ ಸ್ಯಾನಿಟರಿ ನ್ಯಾಪ್ಕಿನ್‌ಗಳ ಮಾರಾಟವು ಜನ್ ಔಷಧಿ ಕೇಂದ್ರಗಳು ದೇಶದಾದ್ಯಂತ ಮಹಿಳೆಯರ ಜೀವನವನ್ನು ಸುಲಭಗೊಳಿಸಿದೆ ಎಂದು ತೋರಿಸುತ್ತದೆ ಎಂದು ಅವರು ಹೇಳಿದರು.
Post a Comment