ಮಾರ್ಚ್ 16, 2022
,
1:33PM
ಹೊಸ ಶಿಕ್ಷಣ ನೀತಿಯು ಮೊದಲ ಬಾರಿಗೆ ಶಿಕ್ಷಕರ ತರಬೇತಿಗೆ ಹೆಚ್ಚಿನ ಉತ್ತೇಜನ ನೀಡಿದೆ: ಸಂಸತ್ತಿನಲ್ಲಿ ಶಿಕ್ಷಣ ಸಚಿವರು
ಹೊಸ ಶಿಕ್ಷಣ ನೀತಿಯು ದೇಶದಲ್ಲಿ ಮೊದಲ ಬಾರಿಗೆ ಶಿಕ್ಷಕರ ತರಬೇತಿಗೆ ಹೆಚ್ಚಿನ ಉತ್ತೇಜನವನ್ನು ನೀಡಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಧಾನ್, ಶಿಕ್ಷಕರ ತರಬೇತಿ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಸರ್ಕಾರ ಅಭಿಪ್ರಾಯಪಟ್ಟಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ದೇಶದಲ್ಲಿ ವಿದ್ಯಾರ್ಥಿ-ಶಿಕ್ಷಕರ ಅನುಪಾತ ಸುಧಾರಿಸಿದೆ ಎಂದರು.
ದೇಶದಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರಾಜ್ಯ ಸರ್ಕಾರಗಳು ಪ್ಯಾರಾ ಶಿಕ್ಷಕರಿಗೆ ತರಬೇತಿ ನೀಡುತ್ತವೆ ಎಂದು ಸಚಿವರು ಹೇಳಿದರು.
Post a Comment