ಮಾರ್ಚ್ 13, 2022
,
1:36 PM
ಉಕ್ರೇನ್‌ನಲ್ಲಿನ ಸಂಘರ್ಷದ ಸಂದರ್ಭದಲ್ಲಿ ಭಾರತದ ಭದ್ರತಾ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ಮೋದಿಯವರು ಉನ್ನತ ಮಟ್ಟದ ಸಭೆ ನಡೆಸಿದರು
ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಸಂದರ್ಭದಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ, ರಕ್ಷಣಾ ಕಾರ್ಯದರ್ಶಿ, ವಿದೇಶಾಂಗ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಿದ್ದರು.
Post a Comment