*ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ* ಯೋಜನೆಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ದಿನಾಂಕ 12-3-2022 ರಂದು ಬೆಳಿಗ್ಗೆ ಉದ್ಘಾಟನೆ ಮಾಡಲು ಮೂಲಕ ಜಾರಿಗೆ ತರಲಾಯಿತು.
ಪ್ರವಾಸೋದ್ಯಮ,ಪರಿಸರ, ಜೀವಶಾಸ್ತ್ರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಅನಂದ ಸಿಂಗ್, ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ), ಕೊಪ್ಪಳ ಸಂಸದರಾದ ಶ್ರೀ ಕರಡಿ ಸಂಗಣ್ಣ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಶರಣು ತಲ್ಲಿಕೆರಿ, ಮಾಜಿ ಶಾಸಕರು ಹಾಗೂ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ದೊಡ್ಡಣ್ಣ ಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಮರೇಗೌಡ ಬಯ್ಯಾಪುರ ವಹಿಸಿದ್ದರು.
Post a Comment