ಮಾರ್ಚ್ 07, 2022
,
4:34PM
ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದರು; ಉಕ್ರೇನ್‌ನಲ್ಲಿ ಯುದ್ಧದ ಪರಿಸ್ಥಿತಿಯನ್ನು ಚರ್ಚಿಸಲಾಗಿದೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಉಕ್ರೇನ್ ಮತ್ತು ರಷ್ಯಾ ತಂಡಗಳ ನಡುವಿನ ಮಾತುಕತೆಯ ಸ್ಥಿತಿಗತಿಗಳ ಕುರಿತು ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿ ಅವರಿಗೆ ವಿವರಿಸಿದರು ಎಂದು ಮೂಲಗಳು ತಿಳಿಸಿವೆ. ಸುಮಾರು 50 ನಿಮಿಷಗಳ ಕಾಲ ನಡೆದ ದೂರವಾಣಿ ಸಂಭಾಷಣೆಯಲ್ಲಿ, ತಮ್ಮ ತಂಡಗಳ ನಡುವೆ ನಡೆಯುತ್ತಿರುವ ಮಾತುಕತೆಗಳ ಜೊತೆಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ನೇರ ಮಾತುಕತೆ ನಡೆಸುವಂತೆ ಶ್ರೀ ಮೋದಿ ಅಧ್ಯಕ್ಷ ಪುಟಿನ್ ಅವರನ್ನು ಒತ್ತಾಯಿಸಿದರು. ಸುಮಿ ಸೇರಿದಂತೆ ಉಕ್ರೇನ್‌ನ ಕೆಲವು ಭಾಗಗಳಲ್ಲಿ ಕದನ ವಿರಾಮ ಮತ್ತು ಮಾನವೀಯ ಕಾರಿಡಾರ್‌ಗಳ ಸ್ಥಾಪನೆಯನ್ನು ಅವರು ಶ್ಲಾಘಿಸಿದರು.
ಸುಮಿಯಿಂದ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಪ್ರಾಮುಖ್ಯತೆಯನ್ನು ಪ್ರಧಾನ ಮಂತ್ರಿ ಒತ್ತಿ ಹೇಳಿದರು. ಅವರ ಸುರಕ್ಷಿತ ಸ್ಥಳಾಂತರಕ್ಕೆ ಸಾಧ್ಯವಿರುವ ಎಲ್ಲ ಸಹಕಾರದ ಬಗ್ಗೆ ಅಧ್ಯಕ್ಷ ಪುಟಿನ್ ಅವರು ಶ್ರೀ ಮೋದಿಯವರಿಗೆ ಭರವಸೆ ನೀಡಿದರು.
Post a Comment