ಭಾರತ ರತ್ನ ಪ್ರೊ. ಸಿ ಎನ್ ಆರ್ ರಾವ್ ಅವರಿಗೆ ಪ್ರತಿಷ್ಠಿತ ಎನಿ ಎನರ್ಜಿ ಫ್ರೊಂಟೈರ್ಸ್ ೨೦೨೦ ಪ್ರಶಸ್ತಿ ಗರಿಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಭಾರತ ರತ್ನ ಪ್ರೊ. ಸಿ ಎನ್ ಆರ್ ರಾವ್ ಅವರಿಗೆ ಪ್ರತಿಷ್ಠಿತ ಎನಿ ಎನರ್ಜಿ ಫ್ರೊಂಟೈರ್ಸ್ ೨೦೨೦ ಪ್ರಶಸ್ತಿ ಗರಿ

ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್‌ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ಎನರ್ಜಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡಲಾಗುವ ಇಟಲಿ ದೇಶದ ಸರ್ಕಾರದ ಪ್ರಶಸ್ತಿ ಇದಾಗಿದೆ

ಈ ಪ್ರಶಸ್ತಿಯನ್ನು ಎನರ್ಜಿ ಕ್ಷೇತ್ರದ ನೋಬಲ್ ಪ್ರಶಸ್ತಿ ಎಂದೇ ವ್ಯಾಖ್ಯಾನಿಸಲಾಗುತ್ತದೆ

ಪ್ರೊ. ರಾವ್ ಅವರು ಇಡೀ ಏಷ್ಯಾ ಖಂಡದಲ್ಲಿಯೇ ಈ ಪ್ರಶಸ್ತಿ ಪಡೆಯುತ್ತಿರುವ ಮೊದಲ ವಿಜ್ಞಾನಿ

ಈ ಪ್ರಶಸ್ತಿಯನ್ನು ಈಗಾಗಲೇ ಘೋಷಿಲಾಗಿದೆ

ಆದರೆ ಕೋವಿಡ್ ಹಿನ್ನೆಲೆಯಲ್ಲಿ ಪ್ರದಾನ ಮಾಡಿರಲಿಲ್ಲ

ಇವತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಡಾ. ಇಂದುಮತಿ ರಾವ್, ಜವಾಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಅಧ್ಯಕ್ಷ ಪ್ರೊ. ಜಿ ಯು ಕುಲಕರ್ಣಿ ಸೇರಿದಂತೆ ಅನೇಕ ವಿಜ್ಞಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

Previous Post Next Post