[21/02, 10:18 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಹುಬ್ಬಳ್ಳಿ ಡೆವಲಪ್ಮೆಂಟ್ ಫೋರಂ ನಿಯೋಗ ಭೇಟಿ ಮಾಡಿತು.
ಹುಬ್ಬಳ್ಳಿ ಡೆವಲಪ್ಮೆಂಟ್ ಫೋರಂ ಅಧ್ಯಕ್ಷರಾದ ಡಾ. ವಿಜಯ ಸಂಕೇಶ್ವರ, ಕೇಂದ್ರ ಸಚಿವರಾದ ಪ್ರಲ್ಲಾದ ಜೋಷಿ, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ್ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ್ ಶಟ್ಟರ, ಶಾಸಕ ಅರವಿಂದ ಬೆಲ್ಲದ, ಕೆಎಲ್ ಇ ತಾಂತ್ರಿಕ ಮಹಾವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ, ಯುವ ಉದ್ಯಮಿ ಸಂತೋಷ ಹುರುಳಿಕೊಪ್ಪಿ ಮತ್ತು ಇತರರು ನಿಯೋಗದಲ್ಲಿ ಉಪಸ್ಥಿತರಿದ್ದರು.
[21/02, 10:29 AM] Gurulingswami. Holimatha. Vv. Cm: ಶಾಸಕ ಸಿ ಎಂ ನಿಂಬಣ್ಣವರ್ ಉಪಸ್ಥಿತರಿದ್ದರು.
[21/02, 12:27 PM] Gurulingswami. Holimatha. Vv. Cm: ಭಾರತದಲ್ಲಿ ಇಸ್ರೇಲ್ ರಾಯಭಾರಿ ಶ್ರೀ ನವೊರ್ ಗಿಲಾನ್ ಮತ್ತು ದಕ್ಷಿಣ ಭಾರತದಲ್ಲಿ ಇಸ್ರೇಲ್ ನ ಕಾನ್ಸಲ್ ಜನರಲ್ ಜೊನಾಥನ್ ಝಡ್ಕಾ ಅವರ ನೇತೃತ್ವದ ಇಸ್ರೇಲಿ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿತು. ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[21/02, 12:27 PM] Gurulingswami. Holimatha. Vv. Cm: Israeli delegation led by H.E. Mr Naor Gilon, Ambassador of Israel to India and Mr. Jonathan Zadka, Consul General of Israel to South India called on Chief Minister Basavaraja Bommai and discussed various issues. Union Minister Pralhad Joshi and other senior officers were present.
[21/02, 4:07 PM] Gurulingswami. Holimatha. Vv. Cm: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀರಾಮಸೇನೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
[21/02, 4:09 PM] Gurulingswami. Holimatha. Vv. Cm: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ್ ಸೇರಿದಂತೆ ಶ್ರೀರಾಮಸೇನೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
[21/02, 4:10 PM] Gurulingswami. Holimatha. Vv. Cm: ಸಚಿವ ಸಿ ಸಿ ಪಾಟೀಲ್ ಉಪಸ್ಥಿತರಿದ್ದರು.
[21/02, 9:37 PM] Gurulingswami. Holimatha. Vv. Cm: ಬೆಳಗಾವಿ ಮತ್ತು ರಾಮಗನರ ಜಿಲ್ಲೆಯ ಕೆಲ ಮುಖಂಡರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟಿಲ್ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು.
ಖಾನಾಪುರ ಮಾಜಿ ಶಾಸಕ ಪಾಟೀಲ್, ರಾಮನಗರ ಜಿಲ್ಲೆಯ ಗೌತಮ್ ಗೌಡ, ಮಾಗಡಿಯ ಪ್ರಸಾದ ಗೌಡ, ಚನ್ನಪಟ್ಟಣದ ಲಿಂಗೇಶ ಕುಮಾರ ಬಿಜೆಪಿ ಸೇರ್ಪಡೆಯಾದರು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಇತರರು ಉಪಸ್ಥಿತರಿದ್ದರು.
[21/02, 10:08 PM] Gurulingswami. Holimatha. Vv. Cm: ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್
[21/02, 10:10 PM] Gurulingswami. Holimatha. Vv. Cm: 21-02-2022
ಪ್ರಕಟಣೆಯ ಕೃಪೆಗಾಗಿ
ಬಿಜೆಪಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಖಚಿತ-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ
ಬೆಂಗಳೂರು: ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯಲಿದೆ. ಉತ್ತರದ ಖಾನಾಪುರ ಮತ್ತು ದಕ್ಷಿಣದ ರಾಮನಗರದಲ್ಲಿ ಜನತೆಯೂ ಬಿಜೆಪಿ ಅಧಿಕಾರ ಪಡೆಯಲು ನೆರವಾಗಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ರಾಮನಗರ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆ ಖಾನಾಪುರದ ಪ್ರಮುಖ ಮುಖಂಡರು ಇಂದು ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆ ಕಾರ್ಯ ಪ್ರಾರಂಭಗೊಂಡಿದೆ. ಬಿಜೆಪಿ ಆಳವಾಗಿ ಬೇರೂರಿ ಶಕ್ತಿ ಪಡೆದಿರದ ಪ್ರದೇಶಗಳಲ್ಲಿ ಪಕ್ಷವು ಇನ್ನಷ್ಟು ಶಕ್ತಿಶಾಲಿಯಾಗಿ ಬೆಳೆಯಲಿದೆ ಎಂದು ನುಡಿದರು.
ರಾಜ್ಯದ ರಾಜಕೀಯದಲ್ಲಿ ಇಂದು ಅತ್ಯಂತ ಮಹತ್ವದ ದಿನ. ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನೆಲೆಯಾಗಿದ್ದ ಜಿಲ್ಲೆಗಳಲ್ಲಿ ಇಂದು ದೊಡ್ಡ ಬದಲಾವಣೆ ಆಗುತ್ತಿದೆ. ಬರುವಂತಹ ದಿನಗಳಲ್ಲಿ ಎಲ್ಲ ಕಡೆ ಬಿಜೆಪಿಯ ಕಮಲ ಅರಳಲಿದೆ ಎಂದು ತಿಳಿಸಿದರು. ಬಿಜೆಪಿ ಪರವಾದ ಈ ಅಲೆಯು ದೊಡ್ಡ ಶಕ್ತಿಯಾಗಿ ಪರಿವರ್ತನೆಗೊಳ್ಳಲಿದೆ ಎಂದು ಅವರು ತಿಳಿಸಿದರು.
ಇದೊಂದು ಹೊಸ ದಿಕ್ಸೂಚಿ. ಈಗ ಪಕ್ಷ ಸೇರಿದ ಅರವಿಂದ ಪಾಟೀಲ್, ಲಿಂಗೇಶ್‍ಕುಮಾರ್ ಮತ್ತಿತರರು ತಮ್ಮ ತಮ್ಮ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಿಗಳು. ಹೀಗಾಗಿ ಪಕ್ಷ ಹೆಚ್ಚು ಬಲಯುತವಾಗಿ ಬೆಳೆಯಲಿದೆ. ಬಿಜೆಪಿ ಸಕಾರಾತ್ಮಕ ರಾಜಕೀಯ ಮಾಡುತ್ತದೆ. ಆಡಳಿತಕ್ಕೆ ಬಂದ ಬಳಿಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಜನರಿಗಾಗಿ ಮೈಮುರಿದು ದುಡಿಯುತ್ತಿದ್ದೇವೆ ಎಂದು ತಿಳಿಸಿದರು. ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯಾದ್ಯಂತ ದೃಢವಾಗಿ ಬೆಳೆದಿದೆ ಎಂದರು.
ಬೆಳಗಾವಿ ಜಿಲ್ಲೆಯ ಖಾನಾಪುgದÀ ಮಾಜಿ ಶಾಸಕರಾದ ಅರವಿಂದ ಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಅವರ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಗೊಂಡರು. ರಾಮನಗರ ಜಿಲ್ಲೆಯ ಮುಖಂಡರು ಹಾಗೂ ಬಮುಲ್ ಮಾಜಿ ನಿರ್ದೇಶಕರಾದ ಲಿಂಗೇಶ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹೆಚ್.ಎನ್.ಅಣ್ಣಯ್ಯ, ವಿಧಾನಪರಿಷತ್ ಮಾಜಿ ಸದಸ್ಯರಾದ ಮರಿಲಿಂಗೇಗೌಡರ ಮಕ್ಕಳಾದ ಗೌತಮ್, ಡಾ|| ವಿವೇಕಾನಂದ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪ್ರಸಾದ್ ಗೌಡ (ಮಾಗಡಿ), ನಗರಸಭಾ ಮಾಜಿ ಸದಸ್ಯರಾದ ಕೃಷ್ಣೇಗೌಡ, ಗೋಪಾಲಕೃಷ್ಣ ಹಲವು ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಸೇರಿದರು.
ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ವಿಧಾನಪರಿಷತ್ ಸದಸ್ಯರಾದ ಸಿ.ಪಿ. ಯೋಗೇಶ್ವರ್, ಶಶಿಲ್ ಜಿ ನಮೋಶಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ, ಸಿದ್ದರಾಜು ಮತ್ತು ಮುಖಂಡರು, ಕಾರ್ಯಕರ್ತರು ಈ ಸೇರ್ಪಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment