CM ವಿವಿಧ ಕಾರ್ಯಕ್ರಮ ಗಳು p

[11/03, 11:20 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆ ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಫಾಸ್ಟ್ ಫಾರ್ವರ್ಡ್ 2040 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
[11/03, 3:58 PM] Gurulingswami. Holimatha. Vv. Cm: *ದೇವನಹಳ್ಳಿಯಿಂದ  ಮೈಸೂರಿನವರೆಗೆ ಸ್ಯಾಟಲೈಟ್ ಟೌನ್  ರಿಂಗ್ ರಸ್ತೆ  ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮಾರ್ಚ್ 11 :

ದೇವನಹಳ್ಳಿಯಿಂದ  ಮೈಸೂರಿಗೆ ಸಂಪರ್ಕ ಕಲ್ಪಿಸುವ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆ ಆಯೋಜಿಸಿದ್ದ ‘ಡೆಕ್ಕನ್ ಹೆರಾಲ್ಡ್ ಬೆಂಗಳೂರು 2040 ಶೃಂಗಸಭೆ’ ಯಲ್ಲಿ ಪಾಲ್ಗೊಂಡು ಮಾತನಾಡಿದರು. 
ಬೆಂಗಳೂರು ನಗರದಲ್ಲಿ ವಾಹನ ದಟ್ಟಣೆಯನ್ನು ನಿವಾರಿಸಲು ಫೆರಿಫೆರಲ್ ರಿಂಗ್ ರಸ್ತೆಯ ಕಾಮಗಾರಿಗೆ ಸಧ್ಯದಲ್ಲಿಯೇ ಪ್ರಾರಂಭಿಸಲಾಗುವುದು. ಹೆಬ್ಬಾಳದಿಂದ ಮೈಸೂರು ರಸ್ತೆ ಫೆರಿಫೆರಲ್ ರಿಂಗ್ ರಸ್ತೆಯ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ಅದರ ಮುಂದುವರಿದ ಭಾಗವಾಗಿ ಸೆಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

 ಬೆಂಗಳೂರು ನಗರದಲ್ಲಿ ಉತ್ತಮ ರಸ್ತೆಗಳು, ಡ್ರೈನೇಜ್ ವ್ಯವಸ್ಥೆ, 12  ಅತಿ ಸಾಂದ್ರತೆಯಿರುವ ಕಾರಿಡಾರ್ ಗಳನ್ನು ಸರ್ಕಾರ ಅಭಿವೃದ್ಧಿಗೊಳಿಸುತ್ತಿದೆ. ಈ ಕಾರಿಡಾರ್ ಗಳಿಂದಾಗಿ ನಗರದ ಪ್ರಮುಖ ನಗರಗಳಿಗೆ ಸಿಗ್ನಲ್ ರಹಿತ ರಸ್ತೆ ಸಂಪರ್ಕ  ದೊರೆಯಲಿದೆ. ಆಯಾ ವಾಹನಗಳ ಓಡಾಟಕ್ಕೆ ಆಯಾ ರಸ್ತೆಗಳನ್ನು ಅಭಿವೃದ್ಧಿಪಡಿಸಿ ವಾಹನ ದಟ್ಟಣೆಯನ್ನು ನಿವಾರಿಸಲು ಯೋಜಿಸಲಾಗುತ್ತಿದೆ.  ಇದಕ್ಕಾಗಿ ಬೆಂಗಳೂರು ನಗರಕ್ಕೆ ಟ್ರಾಫಿಕ್ ಪ್ಲಾನ್ನ್ನು ರೂಪಿಸಲಾಗುತ್ತಿದೆ‌ ಎಂದು ಸಿಎಂ ಹೇಳಿದರು.

 ಮಳೆನೀರು ಸರಾಗವಾಗಿ ಹರಿದುಹೋಗಲು ರಾಜಕಾಲುವೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಈ ವರ್ಷ ಇದಕ್ಕಾಗಿ 1500 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು. 

*ಜವಾಬ್ದಾರಿಯುತ ನಾಗರಿಕ ಸಮಾಜ ಬೆಂಗಳೂರಿನ ಜೀವಾಳ :*
 ಜವಾಬ್ದಾರಿಯುತ ನಾಗರಿಕ ಸಮಾಜ ಬೆಂಗಳೂರಿನ ಜೀವಾಳವಾಗಿದೆ. ನಗರದ ಜನರ ಸಮಸ್ಯೆಗಳ ಬಗ್ಗೆ ಅರಿತು , ಪರಿಣಾಮಕಾರಿ ಪರಿಹಾರವನ್ನು ಸೂಚಿಸುವ  ಉತ್ತಮ ಹಾಗೂ ಬಲಿಷ್ಟ ನಾಗರಿಕ ಸಮಾಜದ ಅವಶ್ಯಕತೆ ಇದೆ.  ನಾಗರಿಕ ಸಮಾಜಗಳು ಸರ್ಕಾರದೊಂದಿಗೆ ಚರ್ಚಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು. ಈ ಸಮಾಜಗಳಿಂದ ವಿವಿಧ ಸ್ಥರದ ಜನರೊಂದಿಗಿನ ಸಂಪರ್ಕದಿಂದಾಗಿ ಕೆಳವರ್ಗದ ಜನರ ಜೀವನವನ್ನು ಸುಗಮಗೊಳಿಸಿದಂತಾಗುತ್ತದೆ ಎಂದರು .

*ಬೆಂಗಳೂರು ನಗರ ಅಭಿವೃದ್ಧಿ:*
 ಭವಿಷ್ಯದ ಬೆಂಗಳೂರನ್ನು ರೂಪಿಸುವವರಿಗೆ ಬೆಂಗಳೂರಿನ ಇತಿಹಾಸದ ಜ್ಞಾನವಿರಬೇಕಾಗುತ್ತದೆ. ಮೂಲ ಬೆಂಗಳೂರಿಗೆ 8 ಪುರಸಭೆ , 110 ಗ್ರಾಮಗಳು ಸೇರಿ ಈಗ ನವೀಕೃತ ಬೆಂಗಳೂರು ಆಗಿದೆ.  ಇಂತಹ ಬೆಂಗಳೂರಿಗೆ ಅಭಿವೃದ್ಧಿ, ರಸ್ತೆ, ನೀರು ಸೇರಿದಂತೆ ಉತ್ತಮ ಮೂಲಸೌಕರ್ಯಗಳನ್ನು ಒದಗಿಸಬೇಕಾಗಿದೆ. ನಗರದಲ್ಲಿ ರಸ್ತೆ ಅಭಿವೃದ್ಧಿ, ನೀರು ಸರಬರಾಜುಗಳಿಗೆ ಒಂದು ನಿರ್ದಿಷ್ಟ ಪ್ಲಾನ್ ಇಲ್ಲವಾಗಿದೆ. ಆದ್ದರಿಂದ ಬೆಂಗಳೂರು ನಗರ ಯೋಜನೆಯನ್ನು ಸರಿದಾರಿಗೆ ತರಬೇಕಿದೆ ಎಂದರು. 

*ಬೆಂಗಳೂರು ಆರ್ಥಿಕ ರಾಜಧಾನಿಯಾಗುವತ್ತ ಹೆಜ್ಜೆ ಹಾಕುತ್ತಿದೆ :*
ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬರುತ್ತಾರೆ. ದೇಶದ ಉಳಿದ ಮೆಟ್ರೋಪಾಲಿಟನ್ ನಗರಗಳಿಗಿಂತ ಬೆಂಗಳೂರು ಉತ್ತಮವಾಗಿದೆ ಎಂದು ಹಲವು ಜನರು, ಖಾಸಗಿ ಕಂಪನಿಗಳು ನಗರಕ್ಕೆ ಬರುತ್ತಿವೆ. ಮೊದಲು ಬೆಂಗಳೂರು ಐಟಿ ಬಿಟಿ ರಾಜಧಾನಿ ಎಂದು ಗುರುತಿಸಲಾಗುತ್ತಿತ್ತು. ಆದರೆ ನಿಧಾನವಾಗಿ ಬೆಂಗಳೂರು ನಗರ ಈಗ ಆರ್ಥಿಕ ರಾಜಧಾನಿಯಾಗುವತ್ತ ಹೆಜ್ಜೆ ಹಾಕುತ್ತಿದೆ. ಪರಿಹಾರ ಮಾರ್ಗವನ್ನು ಹುಡುಕದೇ ಕೇವಲ ಸಮಸ್ಯೆಗಳ ಬಗೆಗಿನ ಚರ್ಚೆಯಿಂದ ಪ್ರಯೋಜನವಿಲ್ಲ. ನಗರ ಯೋಜನೆಗಳಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಿ ಅದನ್ನು ವಾಸ್ತವತೆಗೆ ತರುವವನು ನಿಜವಾದ ನಗರ ಯೋಜನೆಕಾರ ಮತ್ತು ಉತ್ತಮ ಆಡಳಿತಗಾರ ಎಂದೆನಿಸುತ್ತಾನೆ. ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ ನ್ನು ವಾಸ್ತವಿಕತೆಗೆ ತರಲು ಸಾರ್ವಜನಿಕರ ಸಹಯೋಗ , ಸಹಭಾಗಿತ್ವ ಅತ್ಯಗತ್ಯ ಎಂದು ತಿಳಿಸಿದರು.

*ತ್ಯಾಜ್ಯ ನಿರ್ವಹಣೆ:*
ಬೆಂಗಳೂರಿನಲ್ಲಿ ತ್ಯಾಜ್ಯ ವಸ್ತುಗಳ ನಿರ್ವಹಣೆ ದೊಡ್ಡ ಸವಾಲಾಗಿದೆ. ನಗರದ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದ ನಿಯಂತ್ರಣ, ನಿರ್ವಹಣೆ ಮಾಡಲು ಚಿಂತಿಸಬೇಕು. ದೊಡ್ಡ ಹೊಟೆಲ್ ಗಳು, ಕಲ್ಯಾಣಮಂಟಪಗಳು, ಆಸ್ಪತ್ರೆಗಳು, ಮಾಲ್ ಗಳು ಈಗ ಆಧುನಿಕ ತಂತ್ರಜ್ಞಾನದ ತ್ಯಾಜ್ಯ ಸಂಸ್ಕರಣ ಘಟಕಗಳನ್ನು ಸ್ಥಾಪಿಸಿಕೊಳ್ಳುವ ಮೂಲಕ ತ್ಯಾಜ್ಯ ಸಂಸ್ಕರಣೆಯನ್ನು ಮಾಡಬಹುದಾಗಿದೆ. ಇದರಿಂದ ಉತ್ಪತ್ತಿಯಾಗುವ ಸಾವಯವ ಗೊಬ್ಬರವನ್ನು ಕೃಷಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
[11/03, 6:51 PM] Gurulingswami. Holimatha. Vv. Cm: ಬೆಂಗಳೂರು, ಮಾರ್ಚ್ 11: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು *ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ,* *ಜೈವಿಕ ತಂತ್ರಜ್ಞಾನ* ಹಾಗೂ *ವಿಜ್ಞಾನ* *ಮತ್ತು ತಂತ್ರಜ್ಞಾನ ಇಲಾಖೆ ಹಾಗೂ* ಕರ್ನಾಟಕ ರಾಜ್ಯ *ವಿಜ್ಞಾನ ಮತ್ತು ತಂತ್ರಜ್ಞಾನ* *ಮಂಡಳಿಯ ವತಿಯಿಂದ* ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿರುವ *ಸರ್* . *ಎಂ* *. ವಿಶ್ವೇಶ್ವರಯ್ಯ,  ಡಾ.* *ರಾಜಾರಾಮಣ್ಣ,*  ಸರ್ *.ಸಿ.ವಿ.ರಾಮನ್, ಪ್ರೊ ಸತೀಶ್* *ಧವನ್ ಮತ್ತು ಡಾ. ಕಲ್ಪನಾ ಚಾವ್ಲಾ* 2019ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ *ರಾಜ್ಯ ಪ್ರಶಸ್ತಿ ಪ್ರದಾನ ಮಾಡಿ* ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
[11/03, 7:28 PM] Gurulingswami. Holimatha. Vv. Cm: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು

 ಡಾ. ಬಿ ಎನ್ ಗಂಗಾಧರ, ಪ್ರೊ. ಗೈತಿ ಹಾಸನ್ ಅವರಿಗೆ ಸರ್.ಎಂ.ವಿಶ್ವೇಶ್ವರಯ್ಯ, ಪ್ರೊ. ಲಲಿತ್ ಮೋಹನ್ ಪಟ್ನಾಯಕ್, ಪ್ರೊ. ಶೆಟ್ಟಿ ಹುಂತ್ರಿಕೆ ಶೇಖರ್ ಅವರಿಗೆ ಡಾ.ರಾಜಾರಾಮಣ್ಣ, ಪ್ರೊ. ಎಚ್. ನಾಗಭೂಷಣ, ಡಾ. ಜಿ. ವೆಂಕಟಸುಬ್ರ ಮಣಿಯನ್, ಪ್ರೊ. ರವಿ ಮಂಜಿತ್ತಾಯ, ಡಾ. ದಿನೇಶ ನಾಗೇಗೌಡ ಅವರಿಗೆ ಸರ್.ಸಿ.ವಿ.ರಾಮನ್, ಪ್ರೊ. ಆರ್ ವೆಂಕಟೇಶ ಬಾಬು , ಪ್ರೊ. ರಾಜ್ ಮೋಹನ್ ಬಾಲಕೃಷ್ಣನ್, ಪ್ರೊ. ವಿನೋದ ಗಣಪತಿ, ಪ್ರೊ. ಹರ್ಷವರ್ಧನ ಅವರಿಗೆ  ಪ್ರೊ ಸತೀಶ್ ಧವನ್ ಮತ್ತು ಪ್ರೊ.‌ಮಳಲಿ ಸಂಪೂರ್ಣ ಅವತಿಗೆ ಡಾ. ಕಲ್ಪನಾ ಚಾವ್ಲಾ ಅವರ 2019ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರಶಸ್ತಿ ವಿಜೇತರುಗಳಿಗೆ ಪ್ರದಾನ ಮಾಡಿದರು.

ಭಾರತ ರತ್ನ ಪ್ರೊ. ಸಿ. ಎನ್. ಆರ್. ರಾವ್ , ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವ ಶ್ರೀ ಡಾ ಅಶ್ವತ್ಥ್ ನಾರಾಯಣ, ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಗೋವಿಂದನ್ ರಂಗರಾಜನ್, ಶಾಸಕ ಶ್ರೀ ರಿಜ್ವಾನ್ ಅರ್ಷದ್, ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಶ್ರೀ ಕಿರಣ್ ಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಕಾರ್ಯದರ್ಶಿ ಪ್ರೊ. ಅಶೋಕ್ ಎಂ. ರಾಯಚೂರ್ ಹಾಗೂ ಇತರರು ಉಪಸ್ಥಿತರಿದ್ದರು.
[11/03, 8:45 PM] Gurulingswami. Holimatha. Vv. Cm: *ವಿಜ್ಞಾನಿಗಳ ಅವಿಷ್ಕಾರಗಳು ಸಾಮಾನ್ಯ ಜನರಿಗೆ ತಲುಪುವಂತಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಮಾರ್ಚ್ 11 :

 ವಿಜ್ಞಾನಿಗಳ ಅವಿಷ್ಕಾರಗಳು ಸಾಮಾನ್ಯ ಜನರಿಗೆ ತಲುಪುವಂತಾಗಬೇಕು ಎಂಬುದು ಸರ್ಕಾರದ ಧ್ಯೇಯವಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ವತಿಯಿಂದ ಆಯೋಜಿಸಿದ್ದ ಸರ್ . ಎಂ . ವಿಶ್ವೇಶ್ವರಯ್ಯ,  ಡಾ. ರಾಜಾರಾಮಣ್ಣ,  ಸರ್ .ಸಿ.ವಿ.ರಾಮನ್, ಪ್ರೊ ಸತೀಶ್ ಧವನ್ ಮತ್ತು ಡಾ. ಕಲ್ಪನಾ ಚಾವ್ಲಾ 2019ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಸಂಶೋಧನೆಗಳು ನಿರಂತರವಾಗಿ ನಡೆಯುವಂತದ್ದು. ರಾಜ್ಯದ ವೈಜ್ಞಾನಿಕ ಕ್ಷೇತ್ರ ರಾಜ್ಯದ ಜನರ ಶ್ರೇಯೋಭಿವೃದ್ಧಿಗೆ ಬಳಕೆಯಾಗಬೇಕೆನ್ನುವುದು ಸರ್ಕಾರದ ಉದ್ದೇಶ. ಈ ನಿಟ್ಟಿನಲ್ಲಿ ವಿಜ್ಞಾನಿಗಳ ಎಲ್ಲ ಸಹಕಾರವನ್ನು ನೀಡಲಾಗುವುದು. ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್  ಹಾಗೂ ಸರ್ಕಾರದ ಸಹಯೋಗದಲ್ಲಿ ವೈದ್ಯಕೀಯ ಸಂಶೋಧನಾ ಕೇಂದ್ರ ನಿರ್ಮಾಣಕ್ಕೆ ಚಿಂತಿಸಲಾಗುವುದು ಎಂದು ತಿಳಿಸಿದರು. 

*ಸುಸ್ಥಿರ ಅಭಿವೃದ್ಧಿ ಹಾಗೂ ಸುಸ್ಥಿರ ಬಳಕೆಯ ಚಿಂತನೆ :*
ಪರಿಸರ ಹಾಗೂ ಅರಣ್ಯ ಜೀವಿಶಾಸ್ತ್ರವನ್ನು ಉಳಿವಿಗಾಗಿ ಸುಸ್ಥಿರ ಅಭಿವೃದ್ಧಿ ಹಾಗೂ ಸುಸ್ಥಿರ ಬಳಕೆಯ ಚಿಂತನೆ ಅತ್ಯಗತ್ಯ. ಆದ್ದರಿಂದ ಪ್ರಾಕೃತಿಕ ಮತ್ತು ಮಾನವ ನಿರ್ಮಿತ ಒತ್ತಡಗಿಂದ ಅರಣ್ಯ ಜೀವಿಶಾಸ್ತ್ರದ ಮೇಲೆ ಆಗಿರುವ  ದುಷ್ಪರಿಣಾಮವನ್ನು ಸರಿದೂಗಿಸುವ ಉದ್ದೇಶದಿಂದ ಹಸಿರು ಆಯವ್ಯಯವನ್ನು ರೂಪಿಸಿ 100 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗುವುದು. ಪರಿಸರ ಸಂರಕ್ಷಣೆಗೆ ಹೊಸ ಚಿಂತನೆ ದೃಷ್ಟಿಕೋನದ ಅವಶ್ಯಕತೆ ಇದೆ ಎಂದು ತಿಳಿಸಿದರು.

*ಸೈಬರ್ ಅಪರಾಧಗಳು :*
ಸೈಬರ್ ಅಪರಾಧಗಳು ಹೆಚ್ಚಾಗಿರುವುದರಿಂದ ಸೈಬರ್ ಕಾನೂನು ರಚಿಸಲಾಗಿದೆ. ಈಗಿನ ಯುವ ವಿಜ್ಞಾನಿಗಳ ಸಂಶೋಧನೆಗಳು ಸೈಬರ್ ಅಪರಾಧಿಗಳ ಬುದ್ದಿಮತ್ತೆಯನ್ನು ಮೀರಿಸುವಂತಿರಬೇಕು ಎಂದು ಸಲಹೆ ನೀಡಿದರು.

*ಸಿಎನ್‍ಆರ್ ರಾವ್ ಅವರು ಪ್ರೇರಣಾ ಶಕ್ತಿ :*
ವಿಜ್ಞಾನ ಅವಿಷ್ಕಾರಗಳಿಂದ ಕೂಡಿದೆ. ವಿಜ್ಞಾನದಲ್ಲಿ ಅಭಿವೃದ್ಧಿ , ಪ್ರಯೋಗ, ಸಂಶೋಧನೆ, ಅನ್ವೇಷಣೆ ನಿರಂತರವಾಗಿ ನಡೆಯುತ್ತಿದೆ. ಐನ್‍ಸ್ಟೈನ್,ನ್ಯೂಟನ್ ಸೇರಿದಂತೆ ಮಹಾನ್ ವಿಜ್ಞಾನಿಗಳು ಮಾಡಿರುವ ಸಂಶೋಧನೆಗಳು ಪ್ರಯೋಗಗಳು  ಮಾನವ ಸಂತತಿಯ ಅಭಿವೃದ್ಧಿಗೆ ಬಹಳ ಸಹಕರಿಸಿವೆ.  ಸಿ.ಎನ್.ಆರ್. ರಾವ್ ಅಂತಹ ಮಹಾನ್ ವಿಜ್ಞಾನಿ ತಮ್ಮ ಸಂಶೋಧನೆಗಳಿಂದ ನಮಗೆಲ್ಲರಿಗೂ ಪ್ರೇರಣಾ ಶಕ್ತಿಯಾಗಿದ್ದಾರೆ. ಕನ್ನಡಿಗರಾದ ಸಿಎನ್‍ಆರ್ ರಾವ್ ಅವರು ಅನೇಕ ಸಂಸ್ಥೆಗಳನ್ನು ಕಟ್ಟಿ, ವಿಜ್ಞಾನ ಕ್ಷೇತ್ರಕ್ಕೆ  ಅನನ್ಯ ಕೊಡುಗೆ ನೀಡುವ ಮೂಲಕ ‘ಆಧುನಿಕ ವಿಶ್ವೇಶ್ವರಯ್ಯ’ ಆಗಿದ್ದಾರೆ ಎಂದರು.

ಶ್ರೇಷ್ಠ ವಿಜ್ಞಾನಿಗಳ ಮಾರ್ಗದರ್ಶನ ಹಾಗೂ ದೃಷ್ಟಿಕೋನದಿಂದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಮನುಷ್ಯನಲ್ಲಿರುವ ಒಗ್ಗಿಕೊಳ್ಳುವಿಕೆಯ ಗುಣ ಭೂಮಿಯ ಇನ್ಯಾವುದೇ ಜೀವಿಗಳಿಗೆ ಸಾಧ್ಯವಿಲ್ಲ. ಆದ್ದರಿಂದ ದೀರ್ಘಕಾಲ ಬಾಳುವ ಮನುಷ್ಯನ ಮೇಲೆ ಭೂಮಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವ ಮಹತ್ತರ ಜವಾಬ್ದಾರಿ ಇದೆ. ಉತ್ತಮ ಮಾನವ ಹಾಗೂ ನೈಸರ್ಗಿಕ ಸಂಪನ್ಮೂಲಗಳು, ಸಂಶೋಧನೆಯ ಉತ್ಪನ್ನಗಳನ್ನು ನಮ್ಮ ಪೂರ್ವಜರು ನೀಡಿದ್ದಾರೆ.. ಜ್ಞಾನ, ವಿಜ್ಞಾನ, ತಂತ್ರಜ್ಞಾನ, ತಂತ್ರಾಂಶ ಜ್ಞಾನ ನಮಗೆ ಲಭಿಸಿದೆ. ಅವುಗಳನ್ನು ಸಂರಕ್ಷಿಸುವ ಹೊಣೆ ನಮ್ಮ ಮೇಲಿದೆ ಎಂದು ತಿಳಿಸಿದರು.

Post a Comment

Previous Post Next Post