ನೆಲಮಂಗಲ: ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ರೈತರು ಮಳೆ ಬಂದ್ರೆ ವರ್ಷವಿಡೀ ಬೆಳೆದ ರಾಗಿ ನೀರಿನಲ್ಲಿ ನಾಶವಾಗುವ ಆತಂಕದಿಂದ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಉದ್ದೇಶದಿಂದ ರಾಗಿ ಖರೀದಿ ಕೇಂದ್ರವನ್ನ ಆರಂಭಿಸಿದೆ. ಆದರೆ ಅಧಿಕಾರಿಗಳು ನಿರ್ಲಕ್ಷದಿಂದಾಗಿ ಸರ್ಕಾರದ ಲಾರಿಗಳು ಇನ್ನೂ ಬಂದಿಲ್ಲ. ನೆಲಮಂಗಲ ತಾಲೂಕಿನ ವಿವಿಧ ಗ್ರಾಮಗಳಿಂದ ರೈತರು ಆಗಮಿಸಿದ್ದು, ಲಾರಿಗಳ ಆಗಮನಕ್ಕಾಗಿ ಕಾಯುತ್ತಿದೆ ಎಂದು ಬೆಂಗಳೂರು ಹೊರವಲಯ ನೆಲಮಂಗಲ ರಾಗಿ ಖರೀದಿ ಕೇಂದ್ರದ ಬಳಿ ರೈತರು ತಮ್ಮ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ಸುಮಾರು 200 ರಕ್ಕೂ ಹೆಚ್ಚು ಟ್ರಾಕ್ಟರ್ ವಾಹನಗಳಿಂದ ರಾಗಿ ತಂದಿರುವ ರೈತರು ರಾಗಿ ಖರೀದಿ ಕೇಂದ್ರಕ್ಕೆ ಕಾಯುತ್ತಿದ್ದಾರೆ. ಮಳೆ ಬಂದರೆ ಸಂಪೂರ್ಣವಾಗಿ ಹಾಳಾಗುತ್ತದೆ. ಇಲ್ಲಿ ನಮ್ಮ ಸಂಕಷ್ಟಕ್ಕೆ ಸ್ಪಂದಿಸುವವರು ಇಲ್ಲ. ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Post a Comment