*ಯುವ ಕಾಂಗ್ರೆಸ್ ನಿಂದ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ‘ಯಂಗ್ ಇಂಡಿಯಾ ಕೆ ಬೋಲ್’ ಭಾಷಣ ಸ್ಪರ್ಧೆ**ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

[19/05, 1:22 PM] Ravi Gowda. Kpcc. official: *ಯುವ ಕಾಂಗ್ರೆಸ್ ನಿಂದ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ‘ಯಂಗ್ ಇಂಡಿಯಾ ಕೆ ಬೋಲ್’ ಭಾಷಣ ಸ್ಪರ್ಧೆ*

*ಬೆಂಗಳೂರು:*

ರಾಜ್ಯದ ಯುವಕರು ತಮ್ಮ ನೋವು, ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು, ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಒಂದು ವೇದಿಕೆ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ‘ಯಂಗ್ ಇಂಡಿಯಾ ಕೆ ಬೋಲ್’ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಭಾರತ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ನ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಎಐಸಿಸಿ ಜಂಟಿ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೃಷ್ಣ ಅಲವರು, ರಾಜ್ಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಹ್ಯಾರಿಸ್ ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷರು ಹಾಗೂ ಈ ಸ್ಪರ್ಧೆಯ ಉಸ್ತುವಾರಿಯಾಗಿರುವ ಭವ್ಯ, ಉಪಾಧ್ಯಕ್ಷರಾದ ದೀಪಿಕಾ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಚೈತ್ರಾ, ಮಾರುತಿ, ಎಐಸಿಸಿ ವಕ್ತಾರರು ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಐಶ್ವರ್ಯ ಮಹದೇವ್, ಪ್ರಧಾನ ಕಾರ್ಯದರ್ಶಿಗಳಾದ ಆಶಿಕ್ ಗೌಡ,   ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ವಿ ಶ್ರೀನಿವಾಸ್ ಅವರು, ‘ಕರ್ನಾಟಕ ರಾಜ್ಯದಲ್ಲಿ ಯುವಕರಿಗೆ ವೇದಿಕೆ ಕಲ್ಪಿಸಬೇಕು. ಯುವ ಕಾಂಗ್ರೆಸ್ ಕೇವಲ ಧರಣಿ, ಹೋರಾಟಗಳನ್ನು ಮಾಡುವುದರ ಜೊತೆಗೆ ಇತರೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಈ ಕಾರ್ಯಕ್ರಮ ಕೂಡ ಒಂದಾಗಿದೆ. ಈ ಕಾರ್ಯಕ್ರಮದ ಮೊದಲ ಅವತರಣಿಕೆ ಸಾಕಷ್ಟು ಯಶಸ್ಸು ಕಂಡಿದ್ದು, ಅನೇಕ ಯುವಕರ ಪ್ರಬುದ್ಧ ಮಾತುಗಳನ್ನು ಕೇಳಬಹುದು. ಕರ್ನಾಟಕದ ಯುವಕರು ತಮ್ಮ ಮಾತುಗಳು, ಅಭಿಪ್ರಾಯವನ್ನು ಹಂಚಿಕೊಳ್ಳಲು ಅವಕಾಶ ಇಲ್ಲವಾಗಿದೆ. ಹೀಗಾಗಿ ನಾವು ಆ ವೇದಿಕೆಯನ್ನು ನೀಡುತ್ತಿದ್ದೇವೆ. ಇನ್ನು ಈ ವೇದಿಕೆಯಲ್ಲಿ ಕಾಂಗ್ರೆಸ್ ವಿಚಾರವನ್ನು ಜನರಿಗೆ ಮುಟ್ಟಿಸಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಸ್ಪರ್ಧಿಗೆ ಮೊದಲೇ ವಿಷಯಗಳನ್ನು ನೀಡುತ್ತೇವೆ. ಆ ವಿಚಾರದ ಮೇಲೆ ಅವರು ಮಾತನಾಡುತ್ತಾರೆ. ಈ ಸ್ಪರ್ಧೆಯಲ್ಲಿ ಅರ್ಹರನ್ನು ತೀರ್ಪುಗಾರರನ್ನಾಗಿ ಮಾಡುತ್ತೇವೆ. ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ದಿನಾಂಕವನ್ನು ಪ್ರಕಟಿಸಲಾಗುವುದು. ಬೇರೆ ಪಕ್ಷಗಳಲ್ಲಿ ವಕ್ತಾರರ ಕೆಲಸ ಎಂದರೆ ಸುಳ್ಳನ್ನೇ ನಿಜ ಮಾಡುವುದಾಗಿದೆ. ಅವರಿಗೆ ವಾಟ್ಸಪ್, ಫೇಸ್ಬುಕ್ ನಲ್ಲಿ ಬರುವ ಸುಳ್ಳನ್ನು ನಿಜ ಮಾಡುವ ಕೆಲಸ ಮಾಡುತ್ತಾರೆ. ನಮ್ಮ ವೇದಿಕೆಯಲ್ಲಿ ಅವರ ಅಭಿಪ್ರಾಯ, ಜ್ಞಾನವನ್ನು ಪ್ರಸ್ತುತ ಪಡಿಸಲು ಅವಕಾಶ ನೀಡಲಾಗುವುದು. ರಾಜ್ಯಮಟ್ಟದಲ್ಲಿ ಗೆದ್ದವರನ್ನು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.  ರಾಜ್ಯದ ಯುವಕರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡುತ್ತೇವೆ’ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕೃಷ್ಣ ಅಲವರು, ‘ಬೆಂಗಳೂರಿಗೆ ಬಂದಿರುವುದು ಸಂತೋಷ. ಈ ಕಾರ್ಯ ಕ್ರಮ ಅನಾವರಣ ಮಾಡಲು ಬಂದಿದ್ದೇವೆ. ಈ ಕಾರ್ಯಕ್ರಮದ ಬಗ್ಗೆ ಹೇಳುವುದಾದರೆ, ರಾಜಕಾರಣದ ಬಗ್ಗೆ ಯುವಕರಲ್ಲಿ ಆಸಕ್ತಿ ಮೂಡಿಸಿ ಅವರಿಗೆ ಲಭ್ಯವಾಗುವಂತೆ ಮಾಡುವುದು ರಾಷ್ಟ್ರೀಯ ಯುವ ಕಾಂಗ್ರೆಸ್ ಕರ್ತವ್ಯವೆಂದು ಭಾವಿಸಿದೆ. ರಾಜಕಾರಣ ಚುನಾವಣೆಯಲ್ಲಿ ಆರಂಭವಾಗಿ ಚುನಾವಣೆಯಲ್ಲೇ ಅಂತ್ಯವಾಗುತ್ತದೆ ಎಂದು ಸಾಕಷ್ಟು ಬಾರಿ ಹೇಳುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಕ್ಕೆ ಹಲವು ಆಯಾಮಗಳಿದ್ದು, ಯುವಕರು ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು ಎಂಬುದು ರಾಷ್ಟ್ರೀಯ ಯುವ ಕಾಂಗ್ರೆಸ್ ನ ಜವಾಬ್ದಾರಿಯಾಗಿದೆ. ಇದಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯುವಕರು ನಿರುದ್ಯೋಗ, ಹಣದುಬ್ಬರ, ಭದ್ರತೆ, ಮಹಿಳಾ ವಿಚಾರ, ರೈತರ ವಿಚಾರ, ವ್ಯಪಾರದ ವಿಚಾರಗಳಲ್ಲಿ ಯುವಕರು ತಮ್ಮ ಧ್ವನಿ ಎತ್ತಿ ಸರ್ಕಾರವನ್ನು ಪ್ರಶ್ನಿಸುವಂತಾಗಬೇಕು. ದೇಶದ ಯುವಕರು ನಿರುದ್ಯೋಗದ ನೋವು ಅನುಭವಿಸುತ್ತಿದ್ದರೆ, 8 ವರ್ಷಗಳಾದರೂ ನಿರುದ್ಯೋಗ ದಾಖಲೆ ಪ್ರಮಾಣದ ಏರಿಕೆಯಾಗಿರುವುದು ಏಕೆ? ಎಂದು ಪ್ರಧಾನ ಮಂತ್ರಿಗಳಿಗೆ ಪ್ರಶ್ನೆ ಮಾಡುವಂತಾಗಬೇಕು. ಇನ್ನು ಬೆಲೆ ಏರಿಕೆಯ ಬಿಸಿ ತಟ್ಟಿದ್ದರೆ ಯುವಕರು ಇದನ್ನು ಧೈರ್ಯವಾಗಿ ಪ್ರಶ್ನಿಸಲು ಒಂದು ವೇದಿಕೆ ಕಲ್ಪಿಸಬೇಕು. ಪೆಟ್ರೇಲ್, ಡೀಸೆಲ್ ದರ ಇಳಿಸಲು ಸಾಧ್ಯವಾಗುತ್ತಿಲ್ಲ ಏಕೆ ಎಂದು ಪ್ರಧಾನಿಗಳನ್ನು ಪ್ರಶ್ನಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕಾರ್ಯಕ್ರಮ ಯುವಕರು ಹಲವು ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹಂಚಿಕೊಳ್ಳುವ ರಾಜಕೀಯ ವೇದಿಕೆಯಾಗಿದೆ. ಪ್ರತಿ ಯುವಕರು ಈ ವೇದಿಕೆಯ ಸದುಪಯೋಗಪಡಿಸಿಕೊಳ್ಳಬೇಕು, ತಮ್ಮ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕು ಎಂದು ಕರೆ ನೀಡುತ್ತೇನೆ’ ಎಂದು ತಿಳಿಸಿದರು.

ಈ ಸ್ಪರ್ಧೆಯ ಕುರಿತು ಮಾಹಿತಿ ನೀಡಿದ ನಲಪಾಡ್ ಅವರು, ‘ಶ್ರೀನಿವಾಸ್ ಅವರು ಹಾಗೂ ಕೃಷ್ಣ ಅಲವರು ಅವರು ಈ ಕಾರ್ಯಕ್ರಮವನ್ನು ಅನಾವರಣಗೊಳಿಸುತ್ತಿರುವುದು ಬಹಳ ಸಂತೋಷದ ವಿಚಾರ. ರಾಜ್ಯದಲ್ಲಿನ ಯುವಕರು ರಾಜ್ಯದ ಸಮಸ್ಯೆ, ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿ ತಮ್ಮ ಮಾತಿನ ಸಾಮರ್ಥ್ಯವನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಇತಿಹಾಸವನ್ನು ಜನರಿಗೆ ತಲುಪಿಸಲು ಉತ್ತಮ ವಾಕ್ಚಾತುರ್ಯವಿರುವ ಯುವಕರ ಅನ್ವೇಷಣೆಗೆ ಯುವ ಕಾಂಗ್ರೆಸ್ ಈ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ಕಾರ್ಯಕ್ರಮದ ಮೊದಲ ಅವತರಣಿಗೆಯ ಅಂತಿಮ ಸ್ಪರ್ಧೆ ದೆಹಲಿಯಲ್ಲಿ ಯಶಸ್ವಿಯಾಗಿ ನಡೆದಿತ್ತು. ರಾಜ್ಯದಿಂದ 15 ಯುವಕು ಅದರಲ್ಲಿ ಭಾಗವಹಿಸಿ ಮೂವರು ಪ್ರಶಸ್ತಿ ಗೆದ್ದಿದ್ದರು. ಇಂತಹ ಉತ್ತಮ ಕಾರ್ಯಕ್ರಮವನ್ನು ರಾಜ್ಯದಲ್ಲಿಯೂ ಮಾಡಬೇಕು ಎಂಬ ಉದ್ದೇಶದೊಂದಿಗೆ. ಕರ್ನಾಟಕದಲ್ಲಿ ಜಿಲ್ಲಾ ಮಟ್ಟದಲ್ಲಿ  ಸ್ಪರ್ಧೆ ನಡೆಸಲಾಗುವುದು. ಅಲ್ಲಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳು ಜೂನ್ 18ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಅಂತಿಮ ಸ್ಪರ್ಧೆ ನಡೆಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಗೆದ್ದವರು ಮಾತ್ರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ವಿಜೇತರಾಗುವವರಿಗೆ ಪ್ರಶಸ್ತಿ ನೀಡಲಾಗುವುದು. ಮೊದಲ ಬಹುಮಾನ ಐ ಫೋನ್ 13 ಪ್ರೋ, ಎರಡನೇ ಬಹುಮಾನವಾಗಿ ಐ ಫೋನ್ 13 ಹಾಗೂ ಮೂರನೇ ಬಹುಮಾನವಾಗಿ ಒನ್ ಪ್ಲಸ್ ಫೋನ್ ಅನ್ನು ನೀಡಲಾಗುವುದು. ಜೊತೆಗೆ 10 ಉತ್ತಮ ಭಾಷಣ ಮಾಡುವವರನ್ನು ಯೂವ ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಲಾಗುವುದು, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರುನ್ನು ಜಿಲ್ಲಾ ಮಟ್ಟದ ವಕ್ತಾರರನ್ನಾಗಿ ಆಯ್ಕೆ ಮಾಡಲಾಗುವುದು. ಈ ಸ್ಪರ್ಧೆಯ ಉಸ್ತುವಾರಿ ಯಾಗಿ ನಮ್ಮ ಉಪಾಧ್ಯಕ್ಷರಾದ ಭವ್ಯ ಹಾಗೂ ಸಿರಿಲ್ ಅವರನ್ನು ನೇಮಿಸಲಾಗಿದೆ. ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಲು ನಿಮ್ಮ ಹೆಸರು ನೋಂದಾಯಿಸಿಕೊಳ್ಳಲು https://ycea.in/youngindia/index.html   ಜಾಲತಾಣಕ್ಕೆ ಭೇಟಿ ನೀಡಿ’ ಎಂದು ತಿಳಿಸಿದರು.
[19/05, 7:52 PM] Ravi Gowda. Kpcc. official: *ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

ಬಿಜೆಪಿ ಸರ್ಕಾರ ಬೆಂಗಳೂರು ನಗರಕ್ಕಿರುವ ಘನತೆ, ಗೌರವವನ್ನು ಉಳಿಸಿಕೊಳ್ಳಬೇಕು. ಬಹಳ ಹಿಂದಿನಿಂದಲೂ ಬೇರೆ ರಾಜ್ಯ ಹಾಗೂ ದೇಶಗಳಿಂದ ಉದ್ದಿಮೆದಾರರು ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಅಭಿವೃದ್ಧಿ ಕಡೆ ಗಮನಹರಿಸದೇ, ಸಮಾಜದ ಧೃವೀಕರಣ, ಕೋಮುವಾದದ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. 

ಬಿಜೆಪಿ ಸರ್ಕಾರ ತಾನು ಸರ್ವ ಸ್ಪರ್ಶಿ ಹಾಗೂ ಸರ್ವ ವ್ಯಾಪಿ ಬಜೆಟ್ ಮಂಡಿಸಿದ್ದೇವೆ ಎಂದು ಹೇಳಿಕೊಂಡರು. ಆದರೆ ತಾವು ಘೋಷಿಸಿದ ಬಜೆಟ್ ಅನ್ನೇ ಸರಿಯಾಗಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಹೊಣೆಯಾರು?

ಇನ್ನು ಕೇಂದ್ರ ಬಜೆಟ್ ನಲ್ಲಿ ಬೆಂಗಳೂರು ನಗರ ಅಥವಾ ರಾಜ್ಯಕ್ಕೆ ಏನಾದರೂ ಕೊಡುಗೆ ಬಂತಾ? ಇಲ್ಲ. ಇನ್ನು ರಾಜ್ಯದಿಂದ ಆಯ್ಕೆಯಾಗಿ ಹಣಕಾಸು ಸಚಿವೆಯಾದ ನಿರ್ಮಲಾ ಸೀತರಾಮನ್ ಅವರು ಮತ್ತೊಮ್ಮೆ ರಾಜ್ಯದಿಂದ ಆಯ್ಕೆಯಾಗುತ್ತಿದ್ದಾರೆ. ಅವರು ರಾಜ್ಯದಿಂದ ಆಯ್ಕೆ ಯಾಗಿರುವುದಕ್ಕೆ ಜನರಿಗೆ, ಬೆಂಗಳೂರಿಗೆ ಅಥವಾ ಕರ್ನಾಟಕಕ್ಕೆ ವಿಶೇಷ ಕೊಡುಗೆ, ಉಡುಗೊರೆ ನೀಡಿದ್ದಾರಾ? ಯಾವುದಾದರೂ ಯೋಜನೆ ಕೊಟ್ಟಿದ್ದಾರಾ?

ಈಗ ಮಳೆ ಬಂದು ಅವಾಂತರವಾದ ನಂತರ ಬಿಜೆಪಿಯವರು ಛತ್ರಿ ಹಿಡಿದುಕೊಂಡು ಸಿಟಿ ರೌಂಡ್ಸ್ ಹಾಕುತ್ತಿದ್ದೇನೆ ಎಂದರೆ ಹೇಗೆ? ನಮ್ಮ ಬಡಾವಣೆಯಲ್ಲಿ ಚೆನ್ನಾಗಿರುವ ರಸ್ತೆಯನ್ನು ಕಿತ್ತು ಮತ್ತೆ ಬೇರೆ ರಸ್ತೆ ಹಾಕುತ್ತಿದ್ದಾರೆ. ಆದರೆ ಗುಂಡಿ ಬಿದ್ದಿರುವ ರಸ್ತೆಯನ್ನು ಸರಿಪಡಿಸುತ್ತಿಲ್ಲ. 

ಬೆಂಗಳೂರು ನಗರದ ಘನತೆ ಉಳಿಸಲು ಶಾಸಕರ ಸಭೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಸರ್ಕಾರ ಎಲ್ಲ ಶಾಸಕರ ಸಭೆ ಮಾಡಿದರೆ ಕಾಂಗ್ರೆಸ್ ಶಾಸಕರೂ ಭಾಗವಹಿಸುತ್ತಾರಲ್ಲವೇ, ಭಾಗವಹಿಸಿದರೆ ಅವರು ಧ್ವನಿ ಎತ್ತುತ್ತಾರೆ ಅವರಿಗೆ ಅಪಮಾನವಾಗುತ್ತದೆಯಲ್ಲ. ಹಿಗಾಗಿ ಸಭೆ ಮಾಡಲು ಹಿಂಜರಿಯುತ್ತಿದ್ದಾರೆ’ ಎಂದು ಟೀಕಿಸಿದರು.

ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರು ಆರೋಪ ಮಾಡುತ್ತಲೇ ಇರುತ್ತಾರೆ, ನಾವು ಕೇಳಿಸಿಕೊಳ್ಳೋಣ. ನಮ್ಮ ಕೆಲಸ ನಾವು ಮೋಡೋಣ. ಬೆಂಗಳೂರಿನ ಜನರಿಗಾಗಿಯೇ ನಾವು ಮೇಕೆದಾಟು ಹೋರಾಟ ಮಾಡಿದೆವು. ನಾವು ನಮ್ಮ ಕರ್ತವ್ಯವನ್ನು ಹಿಂದೆಯೂ ಮಾಡಿದ್ದು, ಈಗಲೂ ಮಾಡುತ್ತಿದ್ದು, ಮುಂದೆಯೂ ಮಾಡುತ್ತೇವೆ. ಮುಂದಿನ ಚುನಾವಣೆಗೆ ನಾವು ಬೆಂಗಳೂರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತೇವೆ. ನಾನು ನಗರಾಭಿವೃದ್ಧಿ ಸಚಿವನಾಗಿದ್ದವನು. ನನಗೆ ಬೆಂಗಳೂರಿನ ಬಗ್ಗೆ ನನ್ನದೇ ಆದ ಕಲ್ಪನೆ ಇದೆ. ಬೆಂಗಳೂರಿನ ಪ್ರಾಮುಖ್ಯತೆ, ಒಂದೂವರೆ ಕೋಟಿ ಜನ ಕಟ್ಟುತ್ತಿರುವ ತೆರಿಗೆ, ಇಲ್ಲಿ ಬಂಡವಾಳ ಹೂಡಲು ಎಷ್ಟು ಜನ ಮುಂದಾಗಿದ್ದರು, ಅವರನ್ನು ಹೇಗೆ ಉಳಿಸಿಕೊಳ್ಳಬೇಕು, ಇಲ್ಲಿ ಸಂಪಾದನೆ ಮಾಡಿದರೆ ಮಾತ್ರವೇ ನಾವು ಹಳ್ಳಿಗಳಿಗೆ ಹೆಚ್ಚಿನ ಅನುದಾನ ನೀಡಲು ಸಾಧ್ಯ ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಕಾರ್ಯಕ್ರಮಗಳು’ ಎಂದು ಉತ್ತರಿಸಿದರು.

ಪಠ್ಯ ಪುಸ್ತಕ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಮಗೆ ನಮ್ಮ ಇತಿಹಾಸ ಮುಖ್ಯ. ಹಿಂದೆ ಇದ್ದ ನಮ್ಮ ಪಠ್ಯ ಪುಸ್ತಕವನ್ನು ತಜ್ಞರುಗಳು ಸೇರಿ ಸಿದ್ಧಪಡಿಸಿದ್ದರು. ರಾಮಾಯಣ, ಮಹಾಭಾರತ, ಬುದ್ಧ, ಟಿಪ್ಪು ಬಗ್ಗೆ ಪಠ್ಯದಲ್ಲಿ ಸೇರಿಸಲಾಗಿತ್ತು. ರಾಷ್ಟ್ರಪತಿಗಳು ಕೂಡ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ನಾರಾಯಣ ಗುರುಗಳ ಪಠ್ಯ ತೆಗೆಯಲು ಷಡ್ಯಂತ್ರ ರೂಪಿಸಿದ್ದಾರೆ. ಈಗ ಅವರು ಯಾವುದನ್ನೂ ತೆಗೆದಿಲ್ಲ ಎಂದು ಹೇಳುತ್ತಿದ್ದಾರೆ. ನಾರಾಯಣ ಗುರುಗಳ ವಿಚಾರಕ್ಕೆ ಮಹತ್ವವಿದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿದಾಗ ಸುನಿಲ್ ಕುಮಾರ್ ಅವರ ಧ್ವನಿ ಏನಾಗಿತ್ತು? ಈ ಹಿಂದೆ ಇದ್ದ ಎಲ್ಲಾ ಅಂಶಗಳು ಪಠ್ಯ ಪುಸ್ತಕದಲ್ಲಿ ಇರಬೇಕು ಎಂಬುದು ನಮ್ಮ ಆಗ್ರಹ’ ಎಂದು ಉತ್ತರಿಸಿದರು. 

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಯಾರು ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗೆ, ‘ಈ ವಿಚಾರವಾಗಿ ನಾನು ಹಾಗೂ ಶಾಸಕಾಂಗ ಪಕ್ಷದ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಇನ್ನೊಂದು ಸುತ್ತು ಚರ್ಚೆ ಮಾಡುತ್ತೇವೆ. ನಮಗೆ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಚರ್ಚೆ ಮಾಡಿ ವರಿಷ್ಠರು ತೀರ್ಮಾನ ಮಾಡುತ್ತಾರೆ’ ಎಂದರು.

ರಾಜ್ಯಸಭೆ ಚುನಾವಣೆ ಸಂಬಂಧ ಕೇಳಿದ ಪ್ರಶ್ನೆಗೆ, ‘ರಾಜ್ಯ ಸಭೆ ವಿಚಾರದಲ್ಲಿ ನಮ್ಮಲ್ಲಿ ಒಂದು ಪದ್ಧತಿ ಇದೆ. ಕೇಂದ್ರ ನಾಯಕರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದನ್ನು ಪಾಲಿಸುತ್ತೇವೆ. ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗುತ್ತದೆ’ ಎಂದರು.
[19/05, 9:22 PM] Ravi Gowda. Kpcc. official: ಮಂಗಳೂರಿನಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಅಭಿನಂದನೆ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಯು.ಟಿ. ಖಾದರ್  ಮಾಜಿ ಸಚಿವರಾದ ರಮನಾಥ ರೈ, ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೋ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post