ಬಿಜೆಪಿ, ಬೆಂಗಳೂರು ಕೇಂದ್ರ ಜಿಲ್ಲೆ ಕಾರ್ಯಕಾರಿಣಿ

ಮಧ್ಯಮ ಪ್ರಕಟಣೆಗಾಗಿ
ಬಿಜೆಪಿ, ಬೆಂಗಳೂರು ಕೇಂದ್ರ ಜಿಲ್ಲೆ ಕಾರ್ಯಕಾರಿಣಿ ಸಭೆಯನ್ನು ಇಂದು 14-5-2022, ಶನಿವಾರ ಬೆಳಿಗ್ಗೆ 10.30ಕ್ಕೆ ಶೇಷಾದ್ರಿಪುರಂ, ಫ್ಳಾಟ್ ಫಾರಂ ರಸ್ತೆಯಲ್ಲಿರುವ ಗೋಲ್ಡನ್ ಮೆಟ್ರೋ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕಾರಿಣಿ ಸಭೆಯ ಉದ್ಘಾಟನೆಯನ್ನು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಪಿ.ಸಿ.ಮೋಹನ್ ರವರು, ಶಾಸಕರಾದ ಶ್ರೀ ಎಸ್.ಸುರೇಶ್ ಕುಮಾರ್ ರವರು ಮತ್ತು ರಾಜ್ಯ ಉಪಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ರವರು, ಸಮಾರೋಪವನ್ನು ವಿಭಾಗ ಪ್ರಭಾರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಹೆಚ್.ಎಸ್.ಗೋಪಿನಾಥ್ ರವರು, ಶಾಸಕರಾದ ಶ್ರೀ ಅರವಿಂದ ಲಿಂಬಾವಳಿ ರವರು ಮತ್ತು ಸಚಿವರಾದ ಶ್ರೀ ಮುನಿರತ್ನ ರವರು ಮಾಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷರಾದ ಶ್ರೀ ಜಿ.ಮಂಜುನಾಥ್ ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಇಂತಿ
ಶ್ರೀನಾಥ್, ಮಾಧ್ಯಮ ಸಂಚಾಲಕರು, ಬೆಂಗಳೂರು ಕೇಂದ್ರ ಜಿಲ್ಲೆ

Post a Comment

Previous Post Next Post