ಹನ್ನೊಂದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಭಾನುವಾರ ರಾತ್ರಿ ಆದೇಶ ಹೊರಡಿಸಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಅವರನ್ನು ಅಭಿವೃದ್ಧಿ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು : 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ರಜನೀಶ್ ಗೋಯಲ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್ಎನ್ ಪ್ರಸಾದ್ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ.
ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, ರಾಮ್ ಪ್ರಸಾದ್ ಮನೋಹರ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರಾಗಿ ವರ್ಗಾಯಿಸಲಾಗಿದೆ.
ವಿನೋಥ್ ಪ್ರಿಯಾ- ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿಯಾಗಿ, ರಮೇಶ್ ಡಿ.ಎಸ್ - ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ, ಶರತ್.ಬಿ- ಕೃಷಿ ಇಲಾಖೆಯ ಆಯುಕ್ತರಾಗಿ, ಸತ್ಯಭಾಮರನ್ನು ಅತಿಸಣ್ಣ, ಸಣ್ಣ, ಮಧ್ಯಮ ಉದ್ಯಮ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿ ಹಾಗೂ ಸೋಮಶೇಖರ್ ಎಸ್.ಜೆ. ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ.
Post a Comment