Cm, ಇಂದು ಮಳೆ ಪೀಡಿತ ಪ್ರದೇಶಗಳಲ್ಲಿ....

[18/05, 10:23 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಜಯನಗರ ಬಡಾವಣೆಯ ಕನಕನಪಾಳ್ಯದಲ್ಲಿ ಪಟಾಲಮ್ಮ ದೇವಿ ಮಹೋತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್,  ಶಾಸಕರಾದ ಉದಯ್ ಗರುಡಾಚಾರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಚ್ ಎಂ ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.
[18/05, 10:58 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಹೊಸಕೆರೆಹಳ್ಳಿ ಬಡಾವಣೆಯಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಉಂಟಾದ ಪ್ರದೇಶಕ್ಕೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
[18/05, 11:00 AM] Gurulingswami. Holimatha. Vv. Cm: ಬೆಂಗಳೂರು, ಮೇ 18: *ಮಾನ್ಯ* *ಮುಖ್ಯಮಂತ್ರಿ ಬಸವರಾಜ* *ಬೊಮ್ಮಾಯಿ* ಅವರು ಇಂದು *ಮಳೆಯಿಂದ ಹಾನಿಗೊಳಗಾದ*  *ಹೊಸಕೆರೆಹಳ್ಳಿಯ ದತ್ತಾತ್ರೇಯ* *ನಗರಕ್ಕೆ ಭೇಟಿ ನೀಡಿ* *ಮಾಧ್ಯಮದವರೊಂದಿಗೆ* ಮಾತನಾಡಿದರು.
[18/05, 11:10 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಬೆಂಗಳೂರಿನಲ್ಲಿ ವಿಧಾನಪರಿಷತ್ತಿನ ಮಾಜಿ ಹಿರಿಯ ಸದಸ್ಯ ಹಾಗೂ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರ್ ಅಶೋಕ್, ಅರಗ ಜ್ಞಾನೆಂದ್ರ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಸಿದ್ದು ಸವದಿ, ಕಳಕಪ್ಪ ಬಂಡಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಇತರರು ಉಪಸ್ಥಿತರಿದ್ದರು.
[18/05, 11:27 AM] Gurulingswami. Holimatha. Vv. Cm: ಬೆಂಗಳೂರು, ಮೇ 18: *ಮಾನ್ಯ* *ಮುಖ್ಯಮಂತ್ರಿ ಬಸವರಾಜ* *ಬೊಮ್ಮಾಯಿ ಅವರು ಇಂದು* ಮಳೆಯಿಂದ ಹಾನಿಗೊಳಗಾದ  *ರಾಜ ** *ರಾಜೇಶ್ವರಿ ನಗರದ** *ಐಡಿಯಲ್ ಬಡಾವಣೆಗೆ* ಭೇಟಿ ನೀಡಿ *ಮಾಧ್ಯಮದವರೊಂದಿಗೆ* ಮಾತನಾಡಿದರು.
[18/05, 11:38 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಐಡಿಯಲ್ ಬಡಾವಣೆಯಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಜನವಸತಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಸಚಿವರಾದ ಮುನಿರತ್ನ ಆರ್ ಅಶೋಕ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
[18/05, 1:04 PM] Gurulingswami. Holimatha. Vv. Cm: *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ  ಜನ್ಮದಿನದ ಶುಭಾಶಯಗಳನ್ನು ಕೋರಿದ ಸಿಎಂ ಬಸವರಾಜ ಬೊಮ್ಮಾಯಿ* 
 
ಬೆಂಗಳೂರು, ಮೇ 18: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಜನ್ಮ‌ದಿನದ ಶುಭಾಷಯ ಕೋರಿದರು. 

ಇಂದು ಮುಂಜಾನೆ ದೇವೆಗೌಡರಿಗೆ ದೂರವಾಣಿ ಕರೆ ಮಾಡಿ ಮಾತನಾದ ಸಿಎಂ ಬಸವರಾಜ ಬೊಮ್ಮಾಯಿ ಅವರು, 
ದೇವರು ತಮಗೆ ಆಯುರಾರೋಗ್ಯ, ಸಂಪತ್ತನ್ನು ಕರುಣಿಸಲಿ. ನಾಡಿನ ಹಿತಕ್ಕೆ ನಿಮ್ಮ ಕೊಡುಗೆ ನಿರಂತರವಾಗಿ ಇರಲಿ ಎಂದು ಹಾರೈಸುವ ಮೂಲಕ  ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
[18/05, 2:07 PM] Gurulingswami. Holimatha. Vv. Cm: *ರಾಜ್ಯಪಾಲರಿಗೆ ಜನ್ಮದಿನದ ಶುಭಾಶಯ ಕೋರಿದ *ಸಿಎಂ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮೇ 18:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 
 ರಾಜ್ಯಪಾಲ ಥಾವರ್ ಚಂದ್  ಗೆಹ್ಲೋಟ್ ಅವರಿಗೆ  ಹುಟ್ಟುಹಬ್ಬದ ಶುಭಾಷಯ ಕೋರಿದರು. 

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ರಾಜ್ಯಪಾಲರಿಗೆ ದೂರವಾಣಿ ಕರೆ ಮಾಡಿ ಶುಭ  ಕೋರಿದರು. 
 ಭಗವಂತ  ತಮಗೆ ದೀರ್ಘಾಯಸ್ಸು, ಆರೋಗ್ಯ, ಸಕಲೈಶ್ವರ್ಯ  ದಯಪಾಲಿಸಲಿ ಎಂದು ಶುಭ ಕೋರಿದರು.
[18/05, 2:07 PM] Gurulingswami. Holimatha. Vv. Cm: CM Bommai greets HD Deve Gowda on his birthday

Bengaluru. May 18.
Chief Minister Basavaraj Bommai extended birthday greetings to former Prime Minister HD Deve Gowda and wished for his health and long life on Wednesday.

The Chief Minister called Deve Gowda over phone in the morning and wished for his health, wealth and long life. "May God bless you with health, wealth and long life to serve the State for a long time," Bommai wished the veteran leader on his birthday.
[18/05, 2:39 PM] Gurulingswami. Holimatha. Vv. Cm: *ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಮೃತ ಪಟ್ಟವರ ಕುಟುಂಬಗಳಿಗೆ ೫ ಲಕ್ಷ ಪರಿಹಾರ

ಬೆಂಗಳೂರು, ಮೇ 18 : 

ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ.  ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರವಾಹದಿಂದಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ ೫ ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ  ಎತ್ತರದ ಪ್ರದೇಶದಿಂದ ಮಳೆನೀರು ಹೆಚ್ಚು ಹರಿದುಬಂದಾಗ ತಗ್ಗು ಪ್ರದೇಶಗಳಿಗೆ ನುಗ್ಗುತ್ತದೆ. ರಾಜಾಕಾಲುವೆಗಳ ಪಕ್ಕದಲ್ಲಿ ಮನೆಗಳು ಕಟ್ಟಿಕೊಂಡಿದ್ದಾರೆ. ಆದ್ದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ನೀರು ನುಗ್ಗಿರುವ ಮನೆಗಳಿಗೆ ನೀರು ತೆಗೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ರಾಜಕಾಲುವೆಗಳನ್ನು ಪೂರ್ಣಪ್ರಮಾಣದಲ್ಲಿ ನಿರ್ಮಿಸಲು ನೀರು ಹೊರಗೆ ಹರಿಯುವಂತೆ ಸಂಪರ್ಕ ಕಲ್ಪಿಸಬೇಕು. ರಾಜಕಾಲುವೆಗಳಲ್ಲಿ ನೀರು ಹರಿದುಹೋಗದೇ ಒಂದೇ ಕಡೆ ನಿಲ್ಲುತ್ತಿರುವ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ವರ್ಷದಲ್ಲಿ ಸರಾಗ ಮಳೆನೀರಿನ ಹರಿವಿಗಾಗಿ ಎಲ್ಲ ಅಡಚಣೆಗಳನ್ನು ತೆಗೆಯುವ ಕಾಮಗಾರಿಗಳಿಗೆ ಆದೇಶ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ಇರುವ ಬಾಟೆಲ್‍ನೆಕ್‍ಗಳನ್ನು ತೆಗೆಯಲು ಮೊದಲ ಪ್ರಾಶಸ್ತ್ಯ ನೀಡಲಾಗುವುದು ಎಂದರು.

*ಸೆಕಂಡರಿ ಮತ್ತು ಟರ್ಷಿಯರಿ ಕಾಲುವೆಗಳನ್ನು ನಿರ್ಮಾಣಕ್ಕೆ ಕ್ರಮ:*
ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಕೆರೆ ಪ್ರದೇಶಗಳನ್ನು ಒತ್ತುವರಿ ಮಾಡಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ.  ಇಂತಹ ಪ್ರದೇಶಗಳಲ್ಲಿ ಬಿಬಿಎಂಪಿ ವತಿಯಿಂದ ಸೆಕಂಡರಿ ಮತ್ತು ಟರ್ಷಿಯರಿ ಕಾಲುವೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಒಂದು ವರ್ಷದೊಳಗೆ ಮಾಡಲಾಗುವುದು ಎಂದರು.

*ರಾಜಕಾಲುವೆಯ ಉಳಿದ ಕಾಮಗಾರಿ ಈ ವರ್ಷ ಪೂರ್ಣ:*
ರಾಜಕಾಲುವೆ ನಿರ್ಮಾಣ ಕಾರ್ಯ ಅಪೂರ್ಣವಾಗಿ ನಿಂತುಹೋಗಿರುವ ಪ್ರದೇಶಗಳಲ್ಲಿಯೇ ನೀರು ನುಗ್ಗುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ರಾಜಕಾಲುವೆ ಸುಮಾರು 800 ಕಿಮೀ ಉದ್ದವಿದ್ದು, ಕಳೆದ ವರ್ಷ 400 ಕಿ.ಮೀ ಕಾಮಗಾರಿ ಮಾತ್ರ ಆಗಿದ್ದು, ಇನ್ನುಳಿದ ಕಾಮಗಾರಿಗಳನ್ನು ಈ ವರ್ಷ ಕೈಗೊಂಡು ಪೂರ್ಣಗೊಳಿಸಲಾಗುವುದು ಎಂದರು.

*ಉಲ್ಲಾಳದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ :*
ಉಲ್ಲಾಳದಲ್ಲಿ ಜಲಮಂಡಳಿಯ ಕಾಮಗಾರಿ ನಡೆಯುತ್ತಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.

ರಾಜಕಾಲುವೆ, ಕೆರೆ ಒತ್ತುವರಿ ಪ್ರದೇಶವನ್ನು ಗುರುತಿಸಲಾಗಿದ್ದು,ತೆರವುಗೊಳಿಸುವ ಕಾರ್ಯವನ್ನು  ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಒಳಚರಂಡಿ, ಗ್ಯಾಸ್ ಲೈನ್, ನೀರು ಸರಬರಾಜು, ಟೆಲಿಕಾಂ ಕೇಬಲ್, ವಿದ್ಯುಚ್ಛಕ್ತಿ ಕೇಬಲಿಂಗ್ , ಹಲವಾರು ಕಾಮಗಾರಿಗಳು ಒಟ್ಟಿಗೆ ಪ್ರಾರಂಭವಾಗಿದೆ. ಆದ್ದರಿಂದ ಟಾಸ್ಕ್ ಫೋರ್ಸ್‍ನ್ನು ರಚಿಸಲಾಗಿದ್ದು, ಈ ಎಲ್ಲ ಕಾಮಗಾರಿಗಳು ಮುಗಿದ ನಂತರ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
[18/05, 2:39 PM] Gurulingswami. Holimatha. Vv. Cm: CM Bommai extends birthday greetings to Governor Gehlot

Bengaluru. May 18.
Chief Minister Basavaraj Bommai has greeted Governor Thavar Chand Gehlot on his birthday.

Bommai called Gehlot over the phone in the morning and wished for his health, prosperity and long life.
[18/05, 4:03 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,  ಸಿಟಿ ರವಿ , ಬೆಳ್ಳಿ ಪ್ರಕಾಶ್ , ಕುಮಾರಸ್ವಾಮಿ, ಎಂ ಕೆ ಪ್ರಾಣೇಶ,  ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ ಮತ್ತು ಇತರರು ಉಪಸ್ಥಿತರಿದ್ದರು.
[18/05, 4:05 PM] Gurulingswami. Holimatha. Vv. Cm: Rs25,000 compensation for houses flooded: CM Bommai

Rs5 lakh solatium for families of those who lost their lives

Bengaluru. May 18.
Chief Minister Basavaraj Bommai has announced Rs25,000 compensation for houses which were flooded due to heavy rains in Bengaluru. Arrangements have been made to serve food for the flood affected people, Chief Minister Basavaraj Bommai said.

The Chief Minister was interacting with media persons after visiting the rain affected areas of Hosakerehalli and Rajarajeshwari Nagar.

Low lying areas are flooded in Bengaluru during heavy rains as the water flows from high areas to low lying areas due to the topography of the city. In many places houses have been built along the Rajakaluves(major storm water drains. As a result water cannot flow smoothly. Action has been taken to drain out water from houses which have been flooded. The clogged Rajakaluves and waterlogging areas have been identified. Orders have been issued to take all possible measures to remove all bottlenecks for smooth flow of water in Rajakaluves and low lying areas, Bommai said.

Construction of secondary and tertiary drains 

In many places rain water is gushing into the homes due to encroachments and construction of houses on lake beds. BBMP would build secondary and tertiary drains in such areas. These works would be completed within an year, Bommai said.

Rajakaluve works

Replying to a question on flooding in areas where Rajakaluve works have not been completed, Bommai said, the city has about 800km long Rajakaluves. Last year work on about 400km of Rajakaluves was completed, work on the remaining length of Rajakaluves would be completed this year to enable smooth flow of water, Bommai said.

Rs5 lakh solatium for families of the dead

Expressing his grief at the death of two persons who lost their lives at Ullal where BWSSB works are in progress, Bommai said Rs5 lakh solatium would be paid to their families.

Encroachments on Rajakaluves have been identified and action is being taken to clear them. Most of the inconvenience is being caused due to simultaneous works of underground drains, gas pipelines, telecom cables, water supply going on in the city. Roads have been dug up for these works. Therefore a Task Force is being constituted. Road works would be taken up after completion of these ongoing works, Bommai said.
[18/05, 4:53 PM] Gurulingswami. Holimatha. Vv. Cm: *ಚಿಕ್ಕಮಗಳೂರು* , ಮೇ 18: *ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ* *ಬೊಮ್ಮಾಯಿ* ಅವರು *ಚಿಕ್ಕಮಗಳೂರಿನ* *ಸಾರ್ವಜನಿಕರ ಭೇಟಿ ಹಾಗೂ* *ಅಹವಾಲುಗಳನ್ನು ಸ್ವೀಕರಿಸಿ* ನಂತರ *ಮಾಧ್ಯಮದವರಿಗೆ* *ಪ್ರತಿಕ್ರಿಯೆ ನೀಡಿದರು.*
[18/05, 5:16 PM] Gurulingswami. Holimatha. Vv. Cm: *ಚಿಕ್ಕಮಗಳೂರು* , ಮೇ 18: ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು ಜಿಲ್ಲಾಡಳಿತ, ಚಿಕ್ಕಮಗಳೂರು ಇವರ ವತಿಯಿಂದ ಎ.ಐ.ಟಿ. ಕಾಲೇಜು ಆವರಣದಲ್ಲಿ ಆಯೋಜಿಸಿರುವ *ಚಿಕ್ಕಮಗಳೂರು* *ಜಿಲ್ಲೆಯ* *ವಿವಿಧ ಯೋಜನೆ ಮತ್ತು ಅಭಿವೃದ್ಧಿ* ಕಾಮಗಾರಿಗಳ *ಉದ್ಘಾಟನೆ ಮತ್ತು ಶಂಕುಸ್ಥಾಪನೆ* ಕಾರ್ಯಕ್ರಮ ಹಾಗೂ *ಸವಲತ್ತುಗಳ ವಿತರಣಾ* *ಸಮಾರಂಭದಲ್ಲಿ* ಪಾಲ್ಗೊಂಡು *ಕಾರ್ಯಕ್ರಮವನ್ನುದ್ದೇಶಿಸಿ* ಮಾತನಾಡಿದರು.
[18/05, 6:01 PM] Gurulingswami. Holimatha. Vv. Cm: ಇತ್ತೀಚೆಗೆ ನಿಧನರಾದ ಚಿಕ್ಕಮಗಳೂರು ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ಚಂದ್ರಿಕಾ ಎಸ್ಟೇಟ್ ಮಾಲೀಕ ದಿ.ಎ.ಎಸ್.ಚಂದ್ರಪ್ರಕಾಶ ಅವರ ಮನೆಗೆ ಇಂದು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶಾಸಕ ಸಿಟಿ ರವಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[18/05, 6:30 PM] Gurulingswami. Holimatha. Vv. Cm: *ಮುಳ್ಳಯ್ಯನಗಿರಿ ದತ್ತ ಪಿಠಕ್ಕೆ ರೋಪ್ ವೇ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಚಿಕ್ಕಮಗಳೂರು,  ಮೇ 18:   ಮುಳ್ಳಯ್ಯನಗಿರಿ ದತ್ತ ಪಿಠಕ್ಕೆ ರೋಪ್ ವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.  

 ಅವರು ಇಂದು ಜಿಲ್ಲೆಯ ವಿವಿಧ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ  ಹಾಗೂ ಸವಲತ್ತುಗಳನ್ನು ವಿತರಿಸಿ ಮಾತನಾಡುತ್ತಿದ್ದರು.

*ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ*
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ.  ರೋಪ್ ವೇ ಗಳನ್ನು ಪ್ರಥಮ ಬಾರಿಗೆ ರಾಜ್ಯದಲ್ಲಿ ಪ್ರವಾಸೀ ತಾಣಗಳಿಗೆ ಪರಿಚಯಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಬೆಟ್ಟ, ನಂದಿ ಬೆಟ್ಟ, ಅಂಜನಾದ್ರಿ ಬೆಟ್ಟದಲ್ಲಿ ನಿರ್ಮಿಸಲಾಗುತ್ತಿದೆ ಎಂದರು. ಇಲ್ಲಿಗೆ ವಿಮಾನ ಸೌಲಭ್ಯ ಅಗತ್ಯವಿದೆ. ಅದಕ್ಕಾಗಿ ಏರ್ ಸ್ಟ್ರಿಪ್  ನಿರ್ಮಿಸಿ ಪ್ರವಾಸೋದ್ಯಕ್ಕೆ ಇಂಬು ಕೊಡಲು ಪ್ರಯತ್ನಿಸಲಾಗುವುದು. ಮೂರು ಕಡೆಗಳಲ್ಲಿ ಹೆಲಿಪೋರ್ಟ್ ನಿರ್ಮಿಸಲಾಗುತ್ತಿದೆ. ಹಂಪಿ, ಚಿಕ್ಕಮಗಳೂರು ಮತ್ತು ಮಡಿಕೇರಿಗಳಲ್ಲಿ ನಿರ್ಮಿಸಲಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಹೆಲಿಪೋರ್ಟ್ ನ್ನು ಇದೇ ವರ್ಷ ಪ್ರಾರಂಭ ಮಾಡಲಾಗುವುದು.   ಗ್ರಾಮಿಣ ಪ್ರದೇಶದಲ್ಲಿ ಸಂಚಾರಿ ಆಸ್ಪತ್ರೆಯನ್ನು ನಾಲ್ಕು ಜಿಲ್ಲೆಗಳಲ್ಲಿ ಪ್ರಾರಂಭಿಸಿದ್ದು,  ಈ ಪೈಕಿ ಚಿಕ್ಕಮಗಳೂರು ಜಿಲ್ಲೆಯೂ ಒಂದು ಮುಖ್ಯಮಂತ್ರಿಗಳು ತಿಳಿಸಿದರು.

ಅಭಿವೃದ್ಧಿ ಜನರ ಬಳಿಗೆ ಜನರ ಸುತ್ತಲೂ ಆಗಬೇಕು. ಅಭಿವೃದ್ಧಿ ಸುತ್ತಲೂ ಜನ ಓಡಾಡಬಾರದು. ಆನರ ಬೇಕು ಬೇಡಗಳನ್ನು ಅರ್ತ ಮಾಡಿಕೊಂಡು ಅವರ ಹತ್ತಿರ ಹೋಗುವಂಥ ಕೆಲಸ ಸರ್ಕಾರದಲ್ಲಿ ಆಗಬೇಕು. ಜನಪ್ರತಿನಿಧಿಗಳು ಆ ನಿಟ್ಟಿನಲ್ಲಿ ಕೆಲಸವನ್ನು ಮಾಡಬೇಕು.  ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಕರ್ನಾಟದಲ್ಲಿ ಅಭಿವೃದ್ಧಿಗೆ ಮಾದರಿಯಾಗಿದೆ. ಸಿ.ಟಿ ರವಿ ಅವರು ಜನೋಪಯೋಗಿ ಜನಪ್ರತಿನಿಧಿಗಳು. ಅವರ ನಿರಂತರ ಪ್ರಯತ್ನದಿಂದಾಗಿ ಅರಣ್ಯ, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ ವಲಯಗಳಿಗೆ ಸಂಬಂಧಿಸಿದಂತೆ  ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದೆ ಎಂದರು.

*ಕೆರೆ ತುಂಬುವ ಯೋಜನೆ*

ನಮ್ಮ ಸರ್ಕಾರ ಜನರ ಬೇಕುಬೇಡಿಕೆಗಳನ್ನು ಅರಿತು ಕೆಲಸ ಮಾಡುವ ಸರ್ವಸ್ಪರ್ಶಿ,  ಸ್ವರ್ವವ್ಯಾಪಿ ಬಜೆಟ್ ನೀಡಿದೆ. ಈ ಜಿಲ್ಲೆಗೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ.  ಭದ್ರಾ ಯೋಜನೆಯಡಿಯಲ್ಲಿ ಕಡೂರು , ಚಿಕ್ಕಮಗಳೂರು ಮತ್ತು ತರೀಕರೆಯಲ್ಲಿ 1283 ಕೊಟಿ ರೂ..ಗಳ ಕೆರೆ ತುಂಬುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಮೊದಲನೇ ಹಂತದ ಕಾಮಗಾರಿ ಪ್ರಾರಂಭವಾಗಿದೆ. 2-3 ನೇ ಹಂತಕ್ಕೆ ಇದೇ ವರ್ಷದಲ್ಲಿ ಅನುಮೋದನೆ ನೀಡಲಾಗುವುದು. ಈ ಕಾರ್ಯಕ್ರಮದಿಂದ  ಮೂರು ತಾಲ್ಲೂಕುಗಳ ನೀರಿನ ಮಟ್ಟ ಉತ್ತಮವಾಗಿ ರೈತಾಪಿ ವರ್ಗಕ್ಕೆ ಮತ್ತು ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಸರ್ಕಾರದ ಮಹತ್ವದ ಕೊಡುಗೆ ಇದು. ಗೋಂದಿ ಅಣೆಕಟ್ಟು  ಏತ ನೀರಾವರಿಯಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದರು

*ದುಡಿಮೆಯಲ್ಲಿ ಆರ್ಥಿಕತೆ*
ನಮ್ಮ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಿದೆ.  11 ಲಕ್ಷ ಮಕ್ಕಳಿಗೆ ಈ ಆರು ತಿಂಗಳಲ್ಲಿ ಲಾಭ ದೊರೆತಿದೆ. ಈ ವರ್ಷ 14 ಲಕ್ಷ ಮಕ್ಕಳಿಗೆ ನೀಡುವ ಗುರಿ ಇದೆ.  5 ಲಕ್ಷ ಹೆಣ್ಣುಮಕ್ಕಳಿಗೆ ಉದ್ಯೋಗ ಕೊಡುವ  ಕಾರ್ಯಕ್ರಮವನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ ಹಾಗೂ ಈ ವರ್ಷ ಪ್ರಾರಂಭಿಸಲಾಗಿದೆ. ದುಡಿಮೆಯಲ್ಲಿ ಆರ್ಥಿಕತೆ ಇದೆ.  ಜನರ ದುಡಿಮೆಯೇ ಆರ್ಥಿಕತೆ. ಇದನ್ನು ನಂಬಿ ಕೆಲಸ ಮಾಡಲಾಗುತ್ತಿದೆ.  ದುಡಿಯುವವರು ದೊಡ್ಡವರಾಗುತ್ತಾರೆ.  ದುಡಿಯುವ ಸಮಾಜವನ್ನು ಕಟ್ಟಬೇಕೆನ್ನುವುದು ಸರ್ಕಾರದ ಧ್ಯೇಯ ಎಂದರು.

*ಸಮಾನತೆಯ ಸಮಾಜ ನಿರ್ಮಾಣವಾಗಬೇಕು.*
ಸಮಾನತೆಯ ಸಮಾಜ ನಿರ್ಮಾಣವಾಗಬೇಕು. ಸಾಮಾಜಿಕ ನ್ಯಾಯ ಭಾಷಣದ ಸರಕಾಗಿದೆ. ಇಷ್ಟು ವರ್ಷ ಮಾತನಾಡಿದ್ದು ಆಗಿದೆ. ಸಮಾನತೆಗೆ ಬೇಕಾಗಿರುವ ಕಾರ್ಯಕ್ರಮವನ್ನು ರೂಪಿಸಿ ಜನರಿಗೆ ಮುಟ್ಟಿಸುವ ಕೆಲಸವಾಗಬೇಕಿದೆ.  ಆದ್ದರಿಂದ ಇಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಗೆ ತಂದು ಅವರೂ ಸ್ವಾವಲಂಬನೆಯ ಸ್ವಾಭಿಮಾನಿ ಬದುಕು ಬದಕಬೇಕೆನ್ನುವುದು ನಮ್ಮ ಗುರಿ. ಅದಕ್ಕಾಗಿ ಶಿಕ್ಷಣ, ಆರೋಗ್ಯಕ್ಕೆ ಅತಿ ಹೆಚ್ಚು ಒತ್ತು ನೀಡಲಾಗಿದೆ. 100 ಅಂಬೇಡ್ಕರ್  ವಿದ್ಯಾರ್ಥಿನಿಲಯ ಹಾಗೂ 50 ಹಿಂದುಳಿದ ವರ್ಗಗಳ ಹಾಸ್ಟಲ್‍ಗಳನ್ನು ಕನಕದಾಸರ ಹೆಸರಿನಲ್ಲಿ ಪ್ರಾರಂಭಿಸಲಾಗುತ್ತಿದೆ.  ದೊಡ್ಡ ನಗರಗಳಲ್ಲಿ 1000 ವಿದ್ಯಾರ್ಥಿಗಳ ಕ್ಲಸ್ಟ್‍ರ್ ನ್ನು ನಿರ್ಮಿಸಲಾಗುತ್ತಿದೆ.  ಮುಂಬರು ದಿನಗಳಲ್ಲಿ ದೊಡ್ಡ ಪ್ರಮಾಣದ ಬದಲಾವಣೆಯನ್ನು ತರಲಾಗುವುದು. ಎಸ್.ಸಿ/ಎಸ್.ಟಿ  ವರ್ಗದವರಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಘೋಷಣೆ ಮಾಡಲಾಗಿದೆ.  ಇದುವರೆಗೂ ಯಾವ ಸರ್ಕಾರವೂ ಈ ಕೆಲಸವನ್ನು ಮಾಡಿಲ್ಲ. ಅವರಿಗೆ 2 ಲಕ್ಷ ರೂ.ಗಳನ್ನು  ಗೃಹ ನಿರ್ಮಾಣಕ್ಕೆ ನೀಡಲಾಗಿದೆ.  3000 ಕಿಮಿ ರಸ್ತೆ, ರೈಲು, ಹಾಸನ – ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುವುದು. ಅಭಿವೃದ್ಧಿಯ ಪಥ ನಿರಂತರವಾಗಿ ಸಾಗಲು ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.
[18/05, 7:12 PM] Gurulingswami. Holimatha. Vv. Cm: *ಮಾಧ್ಯಮ ಆಹ್ವಾನ*

ಬೆಂಗಳೂರು, ಮೇ 18: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ದಿನಾಂಕ 19. 5.2022 ರಂದು  ಬೆಳಿಗ್ಗೆ 9.00  ಗಂಟೆಗೆ ಬೆಂಗಳೂರು ನಗರ ಪ್ರದಕ್ಷಿಣೆ ಕೈಗೊಂಡು ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಮಾಧ್ಯಮದವರನ್ನು ಆಹ್ವಾನಿಸಲಾಗಿದೆ. ಬೆಳಿಗ್ಗೆ  9.00  ಗಂಟೆಗೆ ನಗರ ಪ್ರದಕ್ಷಿಣೆ ಆರಂಭವಾಗಲಿದೆ. ಮಾಧ್ಯಮದವರು ಬೆಳಿಗ್ಗೆ 8.30 ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸುವಂತೆ ಕೋರಲಾಗಿದೆ.   ( ಬೆಳಗಿನ  ಉಪಹಾರದ ವ್ಯವಸ್ಥೆ ಇರುತ್ತದೆ)  ಮಾಧ್ಯಮದವರಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ.
[18/05, 7:19 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರಿನಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿಗೆ ಭೇಟಿ ನೀಡಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಸಿ ಟಿ ರವಿ , ಕುಮಾರಸ್ವಾಮಿ , ಪ್ರಾಣೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿಎನ್ ಜೀವರಾಜ್ ಮತ್ತು ಇತರರು ಉಪಸ್ಥಿತರಿದ್ದರು.
[18/05, 7:38 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರಿನ ಬಸವ ತತ್ವ ಪೀಠ ಹಾಗೂ ಬಸವ ಮಂದಿರ ವತಿಯಿಂದ ಚಂದ್ರಶೇಖರ  ಸ್ವಾಮೀಜಿಯವರ 167 ನೇ ಜಯಂತಿ ಹಾಗೂ ಜಯ ಚಂದ್ರಶೇಖರ ಸ್ವಾಮಿಗಳ 26ನೇ ಸಂಸ್ಕರಣೆ ಅಂಗವಾಗಿ ಆಯೋಜಿಸಲಾಗಿದ್ದ ಬಸವ ತತ್ವ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಸಿಟಿ ರವಿ, ಬೆಳ್ಳಿ ಪ್ರಕಾಶ್ , ಆಯನೂರು ಮಂಜುನಾಥ್ ಮತ್ತು ಇತರರು ಉಪಸ್ಥಿತರಿದ್ದರು.

Post a Comment

Previous Post Next Post