ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದ್ದು, ನಾಳೆ ಸಂಜೆ 5 ಗಂಟೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಿದ್ದಾರೆ.ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ತಡರಾತ್ರಿ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸಿಎಂ ಉದ್ಧವ್ ಠಾಕ್ರೆ ಅವರನ್ನು ಕೇಳುವಂತೆ ಕೋರಿ ಪತ್ರವನ್ನು ಸಲ್ಲಿಸಿದರು.
ಇದರ ಬೆನ್ನಲ್ಲೇ ನಾಳೆ ಸಂಜೆ 5 ಗಂಟೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಿದ್ದಾರೆ.
Post a Comment