ಬೆಂಗಳೂರು : ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕಾಲೇಜು ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಅದ್ರಂತೆ, ಕಾಲೇಜು ಸೇರುವ ವಿದ್ಯಾರ್ಥಿನಿಯರು ಇನ್ಮುಂದೆ ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ.ಈ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ರಾಜ್ಯದ ಎಲ್ಲ ಸರ್ಕಾರಿ ಪದವಿಅ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 2019-20ನೇ ಸಾಲಿನಿಂದ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿ, ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಚಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ, ಪ್ರಾಂಶುಪಾಲರ ಖಾತೆಗೆಜಮೆ ಮಾಡಲು ಅನುಮತಿ ನೀಡಲಾಗುತ್ತಿತ್ತು.
Big news: ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ರಿಂದ ʻರಾಜ್ಯ & ಕೇಂದ್ರಾಡಳಿತ ಪ್ರದೇಶಗಳ ಮೌಲ್ಯಮಾಪನ ವರದಿ ಬಿಡುಗಡೆʼ
ಆದ್ರೆ, ಸಧ್ಯ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 456 ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಈ ಮೂಲಕ ಇನ್ಮುಂದೆ ಸರ್ಕಾರವೇ ಶುಲ್ಕ ಪಾವತಿ ಮಾಡಲಿದೆ. ಕಾಲೇಜಿನ ಪ್ರಾಂಶುಪಾಲರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇದರಿಂದ ದಾಖಲಾತಿ ವೇಳೆ ವಿದ್ಯಾರ್ಥಿನಿಯರು ಉಚಿತವಾಗಿ ಕಾಲೇಜಿಗೆ ದಾಖಲಾಗಬಹುದಾಗಿದೆ.
Post a Comment