[03/06, 10:44 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಜನತಾದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
[03/06, 11:38 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯಲ್ಲಿ ಆಯವ್ಯಯ ಘೋಷಣೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ನಡೆಸಿದರು. ನಗರಾಭಿವೃದ್ಧಿ ಸಚಿವ ಬಿ. ಎ. ಬಸವರಾಜ, ಪೌರಾಡಳಿತ ಸಚಿವ ಎಂ ಟಿ ಬಿ ನಾಗರಾಜ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[03/06, 11:41 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯಲ್ಲಿ ಆಯವ್ಯಯ ಘೋಷಣೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ನಡೆಸಿದರು. ನಗರಾಭಿವೃದ್ಧಿ ಸಚಿವ ಬಿ. ಎ. ಬಸವರಾಜ, ಪೌರಾಡಳಿತ ಸಚಿವ ಎಂ ಟಿ ಬಿ ನಾಗರಾಜ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[03/06, 12:49 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯವ್ಯಯ ಅನುಷ್ಠಾನ ಕುರಿತು ಪರಿಶೀಲನೆ ನಡೆಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಅರುಂಧತಿ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.
[03/06, 1:09 PM] Gurulingswami. Holimatha. Vv. Cm: ಅಪಘಾತದಲ್ಲಿ ಸಜೀವ ದಹನ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ
ಬೆಂಗಳೂರು, ಜೂನ್ 3 :
ಕಲಬುರಗಿ ಹೊರವಲಯ ಕಮಲಾಪುರ ಬಳಿ ಇಂದು ಭೀಕರ ಅಪಘಾತ ನಡೆದು ಬಸ್ ನಲ್ಲಿದ್ದ 7 ಪ್ರಯಾಣಿಕರು ಸಜೀವ ದಹನರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು
ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸಿರುವ ಮುಖ್ಯಮಂತ್ರಿಗಳು, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
[03/06, 1:46 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಚಿವ ಬಿ. ಶ್ರೀರಾಮುಲು , ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್,
ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಸಾರಿಗೆ ಇಲಾಖೆ ಆಯುಕ್ತ ಟಿ.ಹೆಚ್.ಎಂ. ಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಸತ್ಯವತಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[03/06, 5:45 PM] Gurulingswami. Holimatha. Vv. Cm: ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಜೂನ್ 3-
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಮೂರು ವರ್ಷಗಳ ಬದಲಾಗಿ ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಅವರು ಇಂದು ಇಂದು ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗಳನ್ನು ಅನುಮೋದಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಒಟ್ಟು 3885 ಕೋಟಿ ರೂ. ಅಂದಾಜು ವೆಚ್ಚದ ಈ ಯೋಜನೆಯನ್ನು 2024ರಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಐದು ವರ್ಷಗಳಲ್ಲಿ ರಾಜ್ಯದ ಪಾಲೂ ಸೇರಿದಂತೆ ಒಟ್ಟು 9260 ಕೋಟಿ ರೂ. ವೆಚ್ಚದಲ್ಲಿ 287 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ, ತಾಂತ್ರಿಕವಾಗಿ ಕಾರ್ಯಸಾಧ್ಯವಾಗಿರುವ ನಗರ ಸ್ಥಳೀಯ ಸಂಸ್ಥೆಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿ ಕಾಮಗಾರಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ನಗರ ಪ್ರದೇಶದ ಬಡಜನರಿಗೆ ಉತ್ತಮ ಸೌಲಭ್ಯ ಒದಗಿಸಲು ಸೂಚಿಸಿದ ಮುಖ್ಯಮಂತ್ರಿಗಳು, ನಗರ ಪ್ರದೇಶದ ಸರಳ ನಿಯಮಗಳೊಂದಿಗೆ ವಸತಿ ಯೋಜನೆ ರೂಪಿಸಲು ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ 6000 ಪೌರ ಕಾರ್ಮಿಕರ ನೇಮಕಕ್ಕೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ನೇಮಕಾತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಹಾಗೂ ರೋಸ್ಟರ್ ವಿನಾಯಿತಿ ನೀಡಲು ಕ್ರಮ ವಹಿಸುವಂತೆ ತಿಳಿಸಿದರು.
ಪೌರ ಕಾರ್ಮಿಕರಿಗೆ 2000 ರೂ. ಹಾರ್ಡ್‍ಷಿಪ್ ಭತ್ಯೆ ನೀಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ರಾಜ್ಯದ ಎಲ್ಲ ವಿಭಾಗಗಳಲ್ಲಿ ಎಲ್ಲ ಸೌಕರ್ಯಗಳನ್ನೂ ಒಳಗೊಂಡ Integrated township ಅನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸುವ ಯೋಜನೆ ಅನುಷ್ಠಾನಕ್ಕೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಎಲ್ಲ ವಿಭಾಗಗಳಿಂದ ಸ್ವೀಕರಿಸಲಾದ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಗೆ ಕೂಡಲೇ ಸಲಹೆಗಾರರನ್ನು ನೇಮಕ ಮಾಡಿಕೊಳ್ಳಬೇಕು. ಈ ಯೋಜನೆಗೆ ಸಂಬಂಧ ಪಟ್ಟ ಎಲ್ಲ ಇಲಾಖೆಗಳ ಅಭಿಪ್ರಾಯ ಪಡೆದು ಟೌನ್‍ಷಿಪ್ ನ ರೂಪುರೇಷೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ್, ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆಯುಕ್ತ ಕೆ.ಪಿ. ಮೋಹನ್ ರಾಜ್, ಪೌರಾಡಳಿತ ಇಲಾಖೆ ನಿರ್ದೇಶಕರಾದ ಎಂ.ಎಸ್. ಅರ್ಚನಾ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[03/06, 5:58 PM] Gurulingswami. Holimatha. Vv. Cm: ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ನೂತನ ಪದಾಧಿಕಾರಿಗಳು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪೂರ ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
[03/06, 6:00 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಬಿಹಾರ ರಾಜ್ಯದ ಉಪಮುಖ್ಯಮಂತ್ರಿ ಶ್ರೀಮತಿ ರೇಣು ದೇವಿ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
[03/06, 6:04 PM] Gurulingswami. Holimatha. Vv. Cm: *ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ: ಕೆಎಎಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿವಿಮಾತು*
ಬೆಂಗಳೂರು, ಜೂನ್ 3-
ಸರ್ಕಾರದ ಯೋಜನೆಗಳನ್ನು ಅರ್ಹ ಬಡವರಿಗೆ, ದೀನ ದಲಿತರಿಗೆ ಮತ್ತು ಮಹಿಳೆಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಎ ಎಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.
ಅವರು ಇಂದು ತಮ್ಮನ್ನು ಭೇಟಿ ಮಾಡಿದ ಕೆ ಎ ಎಸ್ ಅಧಿಕಾರಿಗಳ ಸಂಘದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.
ಕೆಎಎಸ್ ಅಧಿಕಾರಿಗಳು ರಾಜ್ಯದ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಅರಿವು ಹೊಂದಿದ್ದು, ಕಾಳಜಿಯನ್ನೂ ವಹಿಸುತ್ತಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುತ್ತಾರೆ. ನಿಮ್ಮ ಈ ಒಳ್ಳೆಯ ಕೆಲಸವನ್ನು ಮುಂದುವರೆಸಿ ಎಂದು ತಿಳಿಸಿದರು.
ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅತ್ಯುತ್ತಮವಾಗಿ ಕೆಲಸ ಮಾಡಿ. ಸರ್ಕಾರಕ್ಕೆ ಒಳ್ಳೆ ಹೆಸರು ಬರುವ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.
ಕೆ.ಎ.ಎಸ್. ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷ ರವಿ ತಿರ್ಲಾಪೂರ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
[03/06, 6:06 PM] Gurulingswami. Holimatha. Vv. Cm: ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು, ಜೂನ್ 3-
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಮೂರು ವರ್ಷಗಳ ಬದಲಾಗಿ ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಅವರು ಇಂದು ಇಂದು ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗಳನ್ನು ಅನುಮೋದಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಒಟ್ಟು 3885 ಕೋಟಿ ರೂ. ಅಂದಾಜು ವೆಚ್ಚದ ಈ ಯೋಜನೆಯನ್ನು 2024ರಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಐದು ವರ್ಷಗಳಲ್ಲಿ ರಾಜ್ಯದ ಪಾಲೂ ಸೇರಿದಂತೆ ಒಟ್ಟು 9260 ಕೋಟಿ ರೂ. ವೆಚ್ಚದಲ್ಲಿ 287 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ, ತಾಂತ್ರಿಕವಾಗಿ ಕಾರ್ಯಸಾಧ್ಯವಾಗಿರುವ ನಗರ ಸ್ಥಳೀಯ ಸಂಸ್ಥೆಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿ ಕಾಮಗಾರಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ನಗರ ಪ್ರದೇಶದ ಬಡಜನರಿಗೆ ಉತ್ತಮ ಸೌಲಭ್ಯ ಒದಗಿಸಲು ಸೂಚಿಸಿದ ಮುಖ್ಯಮಂತ್ರಿಗಳು, ನಗರ ಪ್ರದೇಶದ ಸರಳ ನಿಯಮಗಳೊಂದಿಗೆ ವಸತಿ ಯೋಜನೆ ರೂಪಿಸಲು ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ 6000 ಪೌರ ಕಾರ್ಮಿಕರ ನೇಮಕಕ್ಕೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ನೇಮಕಾತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಹಾಗೂ ರೋಸ್ಟರ್ ವಿನಾಯಿತಿ ನೀಡಲು ಕ್ರಮ ವಹಿಸುವಂತೆ ಸಿಎಂ ತಿಳಿಸಿದರು.
ಪೌರ ಕಾರ್ಮಿಕರಿಗೆ 2000 ರೂ. ಹಾರ್ಡ್‍ಷಿಪ್ ಭತ್ಯೆ ನೀಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ರಾಜ್ಯದ ಎಲ್ಲ ವಿಭಾಗಗಳಲ್ಲಿ ಎಲ್ಲ ಸೌಕರ್ಯಗಳನ್ನೂ ಒಳಗೊಂಡ Integrated township ಅನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸುವ ಯೋಜನೆ ಅನುಷ್ಠಾನಕ್ಕೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಎಲ್ಲ ವಿಭಾಗಗಳಿಂದ ಸ್ವೀಕರಿಸಲಾದ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಗೆ ಕೂಡಲೇ ಸಲಹೆಗಾರರನ್ನು ನೇಮಕ ಮಾಡಿಕೊಳ್ಳಬೇಕು. ಈ ಯೋಜನೆಗೆ ಸಂಬಂಧ ಪಟ್ಟ ಎಲ್ಲ ಇಲಾಖೆಗಳ ಅಭಿಪ್ರಾಯ ಪಡೆದು ಟೌನ್‍ಷಿಪ್ ನ ರೂಪುರೇಷೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ್, ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆಯುಕ್ತ ಕೆ.ಪಿ. ಮೋಹನ್ ರಾಜ್, ಪೌರಾಡಳಿತ ಇಲಾಖೆ ನಿರ್ದೇಶಕರಾದ ಎಂ.ಎಸ್. ಅರ್ಚನಾ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[03/06, 6:20 PM] Gurulingswami. Holimatha. Vv. Cm: *ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ: ಸಾರಿಗೆ ನಿಗಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ*
ಬೆಂಗಳೂರು, ಜೂನ್ 3-
ರಾಜ್ಯದ ಎಲ್ಲ ಸಾರಿಗೆ ನಿಗಮಗಳು ಕಾರ್ಯಾಚರಣೆ ಮತ್ತು ಇತರ ಮೂಲಗಳಿಂದಲೂ ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
ಅವರು ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈ ಸೂಚನೆ ನೀಡಿದರು.
ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ರಚಿಸಲಾದ ತಜ್ಞರ ಸಮಿತಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅದರೊಂದಿಗೆ ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದ ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ, ವಿಜಯಪುರ, ಬೀದರ್, ಯಾದಗಿರಿ ಮತ್ತು ದಾವಣಗೆರೆಗಳಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥಗಳ ನಿರ್ಮಾಣಕ್ಕೆ ಈಗಾಗಲೇ ತಾತ್ವಿಕ ಅನುಮೋದನೆ ನೀಡಲಾಗಿದೆ. ಶೀಘ್ರವೇ ಡಿ.ಪಿ.ಆರ್. ಗೆ ಅನುಮೋದನೆ ಪಡೆದು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯ ಇತರ ಮುಖ್ಯಾಂಶಗಳು:
ರಾಜ್ಯದ ಹೆದ್ದಾರಿಗಳ ಅಕ್ಕಪಕ್ಕ ಪ್ರಯಾಣಿಕರಿಗೆ ಅತ್ಯುತ್ತಮ ಮೂಲಸೌಕರ್ಯ ಒದಗಿಸುವಂತೆ ಸೂಚಿಸಿದರು. ಈ ಸಂಕೀರ್ಣಗಳ ಬ್ರ್ಯಾಂಡಿಂಗ್ ಆಗಬೇಕು. ಹಾಗೂ ಅತ್ಯುತ್ತಮವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
2022-23ನೇ ವರ್ಷದಲ್ಲಿ ಸಾರಿಗೆ ಇಲಾಖೆಯ ತೆರಿಗೆ ಸಂಗ್ರಹ ಉತ್ತಮಗೊಂಡಿದ್ದು, ಶೇ. 103.73 ರಷ್ಟು ಸಾಧನೆಯಾಗಿದೆ.
ರಾಜ್ಯದಲ್ಲಿ 30 ಸಾವಿರ ರೂ. ಗಳಿಗಿಂತ ಹೆಚ್ಚು ತ್ರೈಮಾಸಿಕ ತೆರಿಗೆ ಪಾವತಿಸುವ ಸಾರಿಗೆ ವಾಹನಗಳಿಗೆ ಮಾಹೆಯಾನ ತೆರಿಗೆ ಪಾವತಿಸಲು ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಯೋಜನೆಯಿಂದ 45,405 ವಾಹನ ಮಾಲೀಕರು ಉಪಯೋಗ ಪಡೆದುಕೊಂಡಿದ್ದಾರೆ.
ಮೋಟಾರು ವಾಹನ ತೆರಿಗೆ ಪಾವತಿಯನ್ನು ತೆರಿಗೆ ಅವಧಿ ಮುಕ್ತಾಯದ ನಂತರ ನೀಡಿರುವ 15 ದಿನಗಳ ಕಾಲಾವಧಿಯನ್ನು ಕಾನೂನು ತಿದ್ದುಪಡಿ ಮೂಲಕ ಒಂದು ತಿಂಗಳಿಗೆ ವಿಸ್ತರಿಸಲಾಗಿದೆ. 1.07 ಲಕ್ಷ ವಾಹನಗಳ ಮಾಲೀಕರು ಈ ಯೋಜನೆಯ ಅನುಕೂಲ ಪಡೆದಿದ್ದಾರೆ.
ಶಿಗ್ಗಾಂವಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಬೇಗನೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳಿಗೆ ರೈತ ವಿದ್ಯಾನಿಧಿ ಮಾದರಿಯ ವಿದ್ಯಾರ್ಥಿ ವೇತನ ನೀಡಲು ಸಿದ್ಧತೆ ನಡೆಸಲಾಗಿದೆ. ಇ-ಆಡಳಿತ ಇಲಾಖೆಯೊಂದಿಗೆ ಸಮಾಲೋಚಿಸಲು ಸಭೆ ಕರೆಯಲಾಗುವುದು ಎಂದು ತಿಳಿಸಿದರು.
ಸಚಿವ ಬಿ. ಶ್ರೀರಾಮುಲು , ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಸಾರಿಗೆ ಇಲಾಖೆ ಆಯುಕ್ತ ಟಿ.ಹೆಚ್.ಎಂ. ಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಸತ್ಯವತಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[03/06, 6:35 PM] Gurulingswami. Holimatha. Vv. Cm: ಬೆಂಗಳೂರು ಸರ್ಕಾರಿ ಆರೋಗ್ಯ ಸೇವೆ ಸುಧಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು, ಜೂನ್ 3-
ಬೆಂಗಳೂರು ನಗರದ ಸರ್ಕಾರಿ ಆರೋಗ್ಯ ಸೇವಾ ವ್ಯವಸ್ಥೆಯನ್ನು ಉತ್ತಮ ಪಡಿಸುವ ಅಗತ್ಯವಿದ್ದು, ಇದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿಯೇ ಬೆಂಗಳೂರು ನಗರ ಆರೋಗ್ಯ ಸೇವಾ ವಿಭಾಗವನ್ನು ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
ಅದರ ಜತೆ ರಾಜ್ಯದಲ್ಲಿ ಸಾಮಾನ್ಯ ರೊಇಗ ರುಜಿನೆಗಳಿಗೆ ಉತ್ತಮ ಚಿಕಿತ್ಸೆ ನೀಡುವ ಉದ್ದೇಶದ ಒಟ್ಟು ೪೩೮ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.
ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯವ್ಯಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಬೆಂಗಳೂರು ನಗರದಲ್ಲಿ ಆರೋಗ್ಯ ಸೇವಾ ಸೌಲಭ್ಯಗಳನ್ನು ಉನ್ನತೀಕರಿಸಬೇಕಾಗಿದೆ. ನಿರ್ವಹಣೆಯಲ್ಲೂ ಸುಧಾರಣೆಯಾಗಬೇಕಿದೆ. ನಗರ ವೇಗವಾಗಿ ಬೆಳೆಯುತ್ತಿದ್ದು, ಆರೋಗ್ಯ ಸೇವೆಗಳನ್ನೂ ಅದಕ್ಕೆ ಅನುಗುಣವಾಗಿ ಒದಗಿಸಬೇಕಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಂಬಂಧಿಸಿದಂತೆ, ಬೆಂಗಳೂರಿನಲ್ಲಿ 200 ಹಾಗೂ ಇತರ ತಾಲ್ಲೂಕುಗಳಲ್ಲಿ 238 ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಕ್ರಮ ವಹಿಸಿ. ಅಲ್ಲಿ ಜನರ ಸಾಮಾನ್ಯ ರೋಗಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಶುಚಿ ಯೋಜನೆಯಡಿ ಉಚಿತವಾಗಿ ವಿತರಿಸುವ ಸ್ಯಾನಿಟರಿ ಪ್ಯಾಡ್ ಗಳನ್ನು ಸ್ವಸಹಾಯ ಸಂಘಗಳಿಂದ ಖರೀದಿಸುವಂತೆ ಸೂಚಿಸಿದರು. ಜೊತೆಗೆ ಈ ಸ್ಯಾನಿಟರಿ ಪ್ಯಾಡ್ ಗಳ ಮಾನದಂಡಗಳ ಕುರಿತು ಸ್ವಸಹಾಯ ಸಂಘಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆಯೂ ಸೂಚಿಸಿದರು.
ನಿಮ್ಹಾನ್ಸ್ ಸಹಯೋಗದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಜಾರಿಗೊಳಿಸುತ್ತಿರುವ ಮೆದುಳಿನ ಆರೋಗ್ಯ ಕಾರ್ಯಕ್ರಮವನ್ನು ಧಾರವಾಡದ ಡಿಮ್ಹಾನ್ಸ್ ಸಹಯೋಗದಲ್ಲಿ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿಯೂ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಇಲಾಖೆಯ ಇತರ ಯೋಜನೆಗಳನ್ನು ಸಹ ನಿಗದಿತ ಕಾಲಾವಧಿಯಲ್ಲಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಅರುಂಧತಿ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.
[03/06, 6:41 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಪದಾಧಿಕಾರಿಗಳು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಹರೀಶ್, ಚಿತ್ರರಂಗದ ಹಿರಿಯರಾದ ಜೈಜಗದೀಶ್, ಸುಂದರ ರಾಜ್ , ಪ್ರಮೀಳಾ ಜೋಷಾಯ್ ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
Post a Comment