imp congress news

[16/06, 12:48 PM] Ravi Gowda. Kpcc. official: ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.)
ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಧ್ರುವನಾರಾಯಣ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಪಿ ಟಿ ಪರಮೇಶ್ವರ ನಾಯಕ್, ಎಚ್ ಸಿ ಮಹದೇವಪ್ಪ ಮತ್ತಿತರ ಮುಖಂಡರು ಭಾಗವಹಿಸಿದ್ದರು.
[16/06, 1:24 PM] Ravi Gowda. Kpcc. official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್ ಸೇರಿದಂತೆ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಕ್ವೀನ್ಸ್ ರಸ್ತೆಯ ಬಾಳೆಕುಂದ್ರಿ ವೃತ್ತದ ಬಳಿ ಪೊಲೀಸರು ಗುರುವಾರ ವಶಕ್ಕೆ ಪಡೆದರು.
[16/06, 1:46 PM] Ravi Gowda. Kpcc. official: *ರಾಜಭವನ ಮುತ್ತಿಗೆ ಪ್ರತಿಭಟನೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ಭಾಷಣ, ಮಾಧ್ಯಮ ಪ್ರತಿಕ್ರಿಯೆ:*

ದೇಶದಲ್ಲಿ ಆಗುತ್ತಿರುವ ಅನ್ಯಾಯ, ಪ್ರಜಾಪ್ರಭುತ್ವದ ಕಗ್ಗೊಲೆ, ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನೀತಿ ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆದಿದೆ. ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿ, ಮಾನಸಿಕ ಕಿರುಕುಳ ನೀಡಿ, ಬಂಧಿಸಲು ಯತ್ನಿಸುತ್ತಿದ್ದಾರೆ. 

ನಮ್ಮ ನಾಯಕರು ದೇಶವನ್ನು ಒಗ್ಗೂಡಿಸಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ 'ಭಾರತ ಜೋಡೋ' ಪಾದಯಾತ್ರೆಯನ್ನು ಘೋಷಿಸಿದ ನಂತರ, ಅವರ ಯಾತ್ರೆ ಯಶಸ್ವಿಯಾಗಿ ಅವರ ಖ್ಯಾತಿ ಎಲ್ಲಿ ಹೆಚ್ಚುತ್ತದೆಯೋ, ಎಲ್ಲಿ ನಮ್ಮ ಸರ್ಕಾರ ಅಪಾಯಕ್ಕೆ ಸಿಲುಕುತ್ತದೆಯೋ ಎಂದು ಭಯಭೀತರಾಗಿ ಕೇಂದ್ರ ಸರಕಾರ ಈ ಕೆಲ್ಸಕ್ಕೆ ಕೈ ಹಾಕಿದೆ. ನಮ್ಮ ನಾಯಕರ ತ್ಯಾಗ ಹಾಗೂ ಹೋರಾಟದ ಹೆಸರು ಹಾಳು ಮಾಡಲು ಪ್ರಯತ್ನಿಸುತ್ತಿದೆ.

ನೆಹರೂ ಕುಟುಂಬ ದೇಶಕ್ಕಾಗಿ ಅಲಹಬಾದ್ ನಲ್ಲಿ ₹20 ಸಾವಿರ ಕೋಟಿ ರು. ಮೊತ್ತದ ಆಸ್ತಿ ದಾನ ಮಾಡಿದೆ. ಯಂಗ್ ಇಂಡಿಯಾ ಹಾಗೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಸಂಸ್ಥೆ ಅವರ ಸ್ವಂತ ಆಸ್ತಿ ಎಂದು ಘೋಷಿಸಿಲ್ಲ. ಇದು ಕಾಂಗ್ರೆಸ್ ಕಾರ್ಯಕರ್ತರ ಆಸ್ತಿ. ಪಕ್ಷದ ಆಚಾರ, ವಿಚಾರವನ್ನು ಪ್ರಚಾರ ಮಾಡಲು ಈ ಪತ್ರಿಕೆ ನಡೆಸುತ್ತಿದ್ದಾರೆ. ಅವರು ಈ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದಾರೆ ಅಷ್ಟೇ.

ನೆಹರೂ ಅವರು ಜೈಲಿಗೆ ಹೋಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ದಾರೆ. ಇಂತಹವರಿಗೆ ಈ ರೀತಿ ಕಿರುಕುಳ ನೀಡುವುದನ್ನು ಜನ ಸಹಿಸುವುದಿಲ್ಲ.

ಪಕ್ಷದ ಕಚೇರಿ ನಮ್ಮ ದೇವಾಲಯ. ಇದಕ್ಕೆ ಪ್ರವೇಶ ನೀಡಲು ಅವಕಾಶ ನೀಡದ ಬಿಜೆಪಿಯ ನೀಚ ಸರ್ಕಾರದ ನಡೆ ಖಂಡಿಸಿ ರಾಜಭವನ ಮುತ್ತಿಗೆ ಹಾಕುತ್ತಿದ್ದೇವೆ. ನಮ್ಮ ಆಕ್ರೋಶ, ಧ್ವನಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹಾಗೂ ಕಾರ್ಯಕರ್ತರ ಪರವಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಉಳಿಸಲು ಈ ಹೋರಾಟ. ಕೇಂದ್ರ ತನಿಖಾ ಸಂಸ್ಥೆಗಳು ಬಿಜೆಪಿಯ ಕೈಗೊಂಬೆಯಾಗಬಾರದು ಎಂದು ಆಗ್ರಹಿಸಿ ಈ ಹೋರಾಟ ಮಾಡುತ್ತಿದ್ದೇವೆ.

ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಪದಾಧಿಕಾರಿಗಳು ಪ್ರತಿಭಟನೆ ಮಾಡಬೇಕು. ಅಲ್ಲಿರುವ ಕೇಂದ್ರ ಸರ್ಕಾರದ ಕಚೇರಿ ಮುಂದೆ ಪ್ರತಿಭಟನೆ ಮಾಡಬೇಕು.

*ಮಾಧ್ಯಮಗಳ ಪ್ರಶ್ನೋತ್ತರ:*

ರಾಹುಲ್ ಅವರನ್ನು ವಿಚಾರಣೆಗೆ ಕರೆದಿದ್ದಕ್ಕೆ ಕಾಂಗ್ರೆಸ್ ನವರಿಗೆ ಭಯ ಯಾಕೆ ಎಂಬ ಬಿಜೆಪಿ ಪ್ರಶ್ನೆ ಬಗ್ಗೆ ಕೇಳಿದಾಗ, ‘ಅವರು ಸುಳ್ಳು ಕೇಸ್ ಗಳನ್ನು ಹಾಕಿ ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದು, ನಿಮ್ಮ ಈ ಬೆದರಿಕೆಗಳಿಗೆ, ಷಡ್ಯಂತ್ರಗಳಿಗೆ ಕಾಂಗ್ರೆಸ್ ಪಕ್ಷ ಹೆದರುವುದಿಲ್ಲ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ, ಯಂಗ್ ಇಂಡಿಯಾ ಎಲ್ಲವೂ ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಿ ದೇಣಿಗೆ ನೀಡಿದ್ದಾರೆ. ಅದನ್ನು ಕೇಳಲು ಅವರು ಯಾರು? ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ’ ಎಂದು ಸವಾಲೆಸೆದರು.

ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕ ಹಾಗೂ ಆರೋಗ್ಯ ಸಚಿವರ ಮೇಲೆ ಮೊದಲು ಪ್ರಕರಣ ದಾಖಲಿಸಲಿ. ಕೇವಲ ನಮ್ಮ ವಿರುದ್ಧ ಕೇಸು ದಾಖಲಿಸುತ್ತಿದ್ದಾರೆ. ರಾಜ್ಯ ಮಂತ್ರಿಗಳು ಹಾಗೂ ಕೇಂದ್ರ ಮಂತ್ರಿಗಳು ನಿಯಮ ಉಲ್ಲಂಘಿಸಿದ್ದಕ್ಕೆ ಯಾಕೆ ಕೇಸ್ ಹಾಕಿಲ್ಲ? ವಿಧಾನಸೌಧದಲ್ಲಿ ಪರಿಷತ್ ಸದಸ್ಯರ ಪ್ರಮಾಣವಚನ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆಯಾಗಿದ್ದಕ್ಕೆ ಯಾಕೆ ಪ್ರಕರಣ ದಾಖಲಿಸಿಲ್ಲ? ಬಿಜೆಪಿಯ ಅನೇಕ ಪ್ರಕರಣಗಳಲ್ಲಿ ಕೇಸ್ ದಾಖಲಿಸಿಲ್ಲ. ನಮಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡುವ ಹಕ್ಕು ಇದೆ. ಈ ದೇಶಕ್ಕೆ ಸ್ವಾತಂತ್ರ ಬಂದಿದ್ದೇ ಹೋರಾಟದ ಮೂಲಕ’ ಎಂದರು.

*ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕುರಿತ ಪ್ರತಿಕ್ರಿಯೆ:*

‘ಬೆಳಗಾವಿ ಶಿಕ್ಷಕರು, ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರದ ಪದವೀದರರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ. ಈ ಹಿಂದೆ ಚುನಾಯಿತ ಪ್ರತಿನಿಧಿಗಳು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದರು. ಇಂದು ಶಿಕ್ಷಕರು ಹಾಗೂ ಪಧವಿದರರು 4 ಕ್ಷೇತ್ರಗಳ ಪೈಕಿ 2 ರಲ್ಲಿ ಗೆಲುವು ತಂದುಕೊಟ್ಟಿದ್ದಾರೆ. ಈ ಎಲ್ಲ ಪ್ರಜ್ಞಾವಂತ ಮತದಾರರು ರಾಜ್ಯಕ್ಕೆ ಮುಂದಿನ ಭವಿಷ್ಯ ಕಾಂಗ್ರೆಸ್ ಎಂದು ತೋರಿಸಿದ್ದಾರೆ. ಮತ ಕೊಟ್ಟ ಎಲ್ಲರಿಗೂ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.
[16/06, 1:46 PM] Ravi Gowda. Kpcc. official: *ರಾಜಭವನ ಚಲೋ ಪ್ರತಿಭಟನೆ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಾತುಗಳು:*

ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ನೀತಿ ಖಂಡಿಸಿ ಪ್ರತಿಭಟಿಸಲು, ಎಲ್ಲ ರಾಜ್ಯಗಳಲ್ಲೂ ರಾಜಭವನ ಮುತ್ತಿಗೆ ಹಾಕಲು ಕಾಂಗ್ರೆಸ್ ಪಕ್ಷ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಕೆಪಿಸಿಸಿ ವತಿಯಿಂದ ರಾಜಭವನ ಮುತ್ತಿಗೆ ಹಾಕಿ, ನಮ್ಮ ಆಕ್ರೋಶ ವ್ಯಕ್ತಪಡಿಸಿ, ಈ ನೆಲದ ಕಾನೂನು ಉಳಿಸಿ, ಸಂವಿಧಾನ ಉಳಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೇಂದ್ರದ ಬಿಜೆಪಿ ಸರ್ಕಾರ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಹಣಕಾಸು ಅವ್ಯವಹಾರದ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ನಮ್ಮ ನಾಯಕರಿಗೆ ಮಾನಸಿಕ ಕಿರುಕುಳ ನೀಡುತ್ತಿದೆ. ನಾವೆಲ್ಲರೂ ಈ ಸಂದರ್ಭದಲ್ಲಿ ಅವರ ಬೆನ್ನಿಗೆ ನಿಲ್ಲಬೇಕಾಗಿದೆ.

ತನಿಖೆ ಮಾಡಲು ನಮ್ಮ ವಿರೋಧ ಇಲ್ಲ. ಆದರೆ ದುರುದ್ದೇಶದಿಂದ ಷಡ್ಯಂತ್ರ ರೂಪಿಸಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವರ್ಚಸ್ಸು ಹಾಳು ಮಾಡಲು ಸುಳ್ಳು ಪ್ರಕರಣ ದಾಖಲಿಸಿರುವುದು ಖಂಡನೀಯ. 

ಉದಯಪುರ ಸಂಕಲ್ಪ ಶಿಬಿರದಲ್ಲಿ ಎಐಸಿಸಿ ‘ಭಾರತ್ ಜೋಡೋ’ ಎಂಬ ಪಾದಯಾತ್ರೆಯನ್ನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮಾಡಲು ತೀರ್ಮಾನಿಸಲಾಗಿದ್ದು, ಇದನ್ನು ಮಾಡಿದರೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವರ್ಚಸ್ಸು ಹೆಚ್ಚುತ್ತದೆ ಎಂದು ಬಿಜೆಪಿ ಈ ಕುತಂತ್ರ ಮಾಡಿದೆ. ಈ ವಿಚಾರವನ್ನು ಜನರಿಗೆ ತಿಳಿಸಬೇಕು. 

ದೇಶದಲ್ಲಿ ಅನೇಕ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕೂಡ ಮಾಡಿದೆ. ಕಾಂಗ್ರೆಸ್ ಯಾವತ್ತೂ ದ್ವೇಷದ ರಾಜಕಾರಣ ಮಾಡಿಲ್ಲ. ಬಿಜೆಪಿ ದ್ವೇಷದ ರಾಜಕಾರಣ ಆರಂಭಿಸಿದೆ. ಆಮೂಲಕ ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕುತ್ತೇವೆ, ಕಾರ್ಯಕರ್ತರ ಮನಸ್ಥೈರ್ಯ ಕುಗ್ಗಿಸುತ್ತೇವೆ, ಆಮೂಲಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಅವರ ವರ್ಚಸ್ಸು ಕಡಿಮೆ ಮಾಡುತ್ತೇವೆ ಎಂಬ ಕೆಟ್ಟ ಆಲೋಚನೆಯಿಂದ ಸುಳ್ಳು ಕೇಸು ದಾಖಲಿಸಿದ್ದಾರೆ.

ಸತತ ಮೂರು ದಿನಗಳ ಕಾಲ 30 ಗಂಟೆಗಳ ವಿಚಾರಣೆ ಮಾಡಿ ಮತ್ತೆ ಸಮನ್ಸ್ ನೀಡಿದ್ದಾರೆ. ಸರ್ಕಾರ ಕೇಂದ್ರ ತನಿಖಾ ಸಂಸ್ಥೆ ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ. ಇವರ ದೌರ್ಜನ್ಯ ಹೇಗಿದೆ ಎಂದರೆ ದೆಹಲಿಯ ಕಾಂಗ್ರೆಸ್ ಕಚೇರಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಪಕ್ಷದ ಪದಾಧಿಕಾರಿಗಳು, ಸಂಸದರು ಹೋಗಲು ಅವಕಾಶ ನೀಡುತ್ತಿಲ್ಲ. ಹೋದರೆ ಅವರನ್ನು ಬಂಧಿಸುತ್ತಿದ್ದಾರೆ. ಬ್ರಿಟೀಷರ ಕಾಲದಲ್ಲೂ ಇಂತಹ ಘಟನೆ, ಪ್ರಜಾಪ್ರಭುತ್ವ ವಿರೋಧಿ ಘಟನೆ ನಡೆದಿರಲಿಲ್ಲ. 


ಇಡೀ ಪಕ್ಷದ ಕಚೇರಿಯನ್ನು ಪೊಲೀಸರು ಆಕ್ರಮಿಸಿಕೊಂಡು ಅಲ್ಲಿ ಯಾರಿಗೂ ಅವಕಾಶ ನೀಡಿಲ್ಲ. ಇದಕ್ಕಿಂತ ನೀಚ ಕೆಲಸ ಬೇರೆ ಸಾಧ್ಯವಿಲ್ಲ. ನಾವು ಕಾಂಗ್ರೆಸಿಗರು ಈ ನೀಚ ಕೆಲಸ ಮುಂದುವರಿಸಲು ಬಿಟ್ಟರೆ ಇಡೀ ದೇಶ, ಸಮಾಜವನ್ನು ಹಾಳು ಮಾಡುತ್ತಾರೆ. ಪ್ರಜಾಪ್ರಭುತ್ವ ಹತ್ಯೆ ಕಗ್ಗೊಲೆಯಾಗಿದೆ. ಸವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲ. ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು. ಇದನ್ನು ತೆಗೆದುಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಪ್ರಜಾಪ್ರಭುತ್ವ, ಸಂವಿಧಾನ, ಕಾನೂನಿಗೆ ಬೆಲೆ ಕೊಡದೆ ನಡೆದುಕೊಳ್ಳುತ್ತಿದ್ದಾರೆ.

ನಮ್ಮ ಸಂಸದ ಡಿ.ಕೆ. ಸುರೇಶ್, ವೇಣುಗೋಪಾಲ್, ದಿನೇಶ್ ಗುಂಡೂರಾವ್ ಅವರನ್ನು ನಡೆಸಿಕೊಂಡ ರೀತಿ ನಾವು ನೋಡಿದ್ದೇವೆ. ದೇಶದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಪ್ರಜಾಪ್ರಭುತ್ವ ಕಗ್ಗೊಲೆಯಾಗಲು ಬಿಡಬಾರದು. ಸಂವಿಧಾನಕ್ಕೆ ಅಗೌರವಕ್ಕೆ ಅವಕಾಶ ನೀಡಬಾರದು. ಈ ನೆಲದ ಕಾನೂನು ನಾಶ ಮಾಡಲು ಅವಕಾಶ ನೀಡಬಾರದು. ಇವರಿಗೆ ತಕ್ಕ ಪಾಠವನ್ನು ಕಾಂಗ್ರೆಸ್ ಕಲಿಸಬೇಕಿದೆ. ಇಂದು ಕಾಂಗ್ರೆಸ್ ಪಕ್ಷಕ್ಕೆ ಆಗಿರುವ ಅನ್ಯಾಯ ನಾಳೆ ಬೇರೆ ಪಕ್ಷಗಳಿಗೆ ಆಗಲಿದೆ.  

ಇದು ದೇಶಕ್ಕೆ ಒದಗಿರುವ ಆಪತ್ತು. ಎಲ್ಲ ಬಿಜೆಪಿಯೇತ್ತರ ಪಕ್ಷಗಳು ಇದನ್ನು ಖಂಡಿಸಬೇಕು ಎಂದು ಮನವಿ ಮಾಡುತ್ತೇನೆ. ಮಮತಾ ಬ್ಯಾನರ್ಜಿ, ಶರದ್ ಪವಾರ್, ಸ್ಟಾಲಿನ್, ಕಮುನಿಷ್ಟ್ ಪಕ್ಷದವರಿರಬಹುದು, ಅಖಿಲೇಶ್ ಯಾದವ್ ಎಲ್ಲರೂ ಇದನ್ನು ಖಂಡಿಸಬೇಕಾಗುತ್ತದೆ. ಇದು ದೇಶದ ಮೇಲೆ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಮಾಡಿರುವ ಗದಾಪ್ರಹಾರ. 

ಹೀಗಾಗಿ ರಾಜ್ಯಪಾಲರಿಗೆ ಮನವಿ ಕೊಟ್ಟು, ರಾಜಭವನಿಗೆ ಮುತ್ತಿಗೆ ಹಾಕಿ, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಹಾಗೂ ಈ ದೇಶದ ಕಾನೂನು ಎತ್ತಿ ಹಿಡಿಯಲು ಮನವಿ ಮಾಡಲಾಗುವುದು..

ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಬೇಕು. ಪೊಲೀಸರು ತಡೆಯಬಹುದು. ಯಾರೂ ಎದೆಗುಂದುವ ಅಗತ್ಯವಿಲ್ಲ. ಪೊಲೀಸರು ಬಂಧಿಸಲಿ, ಜೈಲಿಗೆ ಹಾಕಲಿ ನೀವೆಲ್ಲರೂ ಗಟ್ಟಿಯಾಗಿ ನಿಲ್ಲಿ. ನೀವು ಧೈರ್ಯವಾಗಿರಿ. ನಾಳೆ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಎಲ್ಲ ಶಾಸಕರು, ಪದಾಧಿಕಾರಿಗಳು, ಸಂಸದರು ನಿಮ್ಮ ಜಿಲ್ಲೆಗೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ. ಕಾಂಗ್ರೆಸ್ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. 


ಬಿಜೆಪಿಯವರೇ ನೀವೇ ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಇರಲು ಸಾಧ್ಯವಿಲ್ಲ. ನಿಮ್ಮ ಕೇಡುಗಾಲ, ಅವನತಿ ಆಗಮಿಸುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ. ಬಿಜೆಪಿ ನಿರ್ಣಾಮವಾಗಲಿದೆ. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಿಮ್ಮ ಗೋಸುಂಬೆ ನಾಯಟ ರಾಜ್ಯದಲ್ಲಿ ನಡೆಯುವುದಿಲ್ಲ. ಜನರಿಗೆ ಅರ್ಥವಾಗಿದೆ. ನಾವು ಬಂಧನವಾದರೂ, ಜೈಲಿಗೆ ಹೋಗಲು ತಯಾರಾಗೋಣ.
[16/06, 5:04 PM] Ravi Gowda. Kpcc. official: *ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ* ಜಾರಿ ನಿರ್ದೇಶನಾಲಯವು *ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ನಾಯಕರಾದ ಶ್ರೀ ರಾಹುಲ್ ಗಾಂಧಿ* ಅವರಿಗೆ ಅನಗತ್ಯ ಕಿರುಕುಳ ನೀಡುವುದನ್ನು ವಿರೋಧಿಸಿ ಹಾಗೂ ದೆಹಲಿ ಪೊಲೀಸರ ದೌರ್ಜನ್ಯ ಖಂಡಿಸಿ  *ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್ ರವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು*.
ಈ ಸಂದರ್ಭದಲ್ಲಿ *ವಿಧಾನ ಪರಿಷತ್ ನ ಮಾಜಿ ಮುಖ್ಯ ಸಚೇತಕರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ  ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಬಲರಾಜ್, ಮೆಹರೋಝ್  ಖಾನ್, ಸತ್ಯನಾರಾಯಣ* ಮತ್ತಿತರರು ಉಪಸ್ಥಿತರಿದ್ದರು.

https://m.facebook.com/story.php?story_fbid=444077344389240&id=100063609345676

Post a Comment

Previous Post Next Post