ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ

 

ಜುಲೈ 01, 2022
4:51PM

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ ನಡೆಸಿದರು

@PBNS_India
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಕೃಷಿ ಸರಕುಗಳು, ರಸಗೊಬ್ಬರಗಳು ಮತ್ತು ಫಾರ್ಮಾ ಉತ್ಪನ್ನಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು ಹೇಗೆ ಪ್ರೋತ್ಸಾಹಿಸಬಹುದು ಎಂಬುದರ ಕುರಿತು ಅವರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಅಂತಾರಾಷ್ಟ್ರೀಯ ಇಂಧನ ಮತ್ತು ಆಹಾರ ಮಾರುಕಟ್ಟೆಗಳ ಸ್ಥಿತಿ ಸೇರಿದಂತೆ ಜಾಗತಿಕ ವಿಷಯಗಳ ಕುರಿತು ನಾಯಕರು ಚರ್ಚಿಸಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ
 ತೆಗೆದುಕೊಂಡ ನಿರ್ಧಾರಗಳ ಅನುಷ್ಠಾನದ ಬಗ್ಗೆಯೂ ಉಭಯ ನಾಯಕರು ಪರಿಶೀಲಿಸಿದರು.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಸಂದರ್ಭದಲ್ಲಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ದೀರ್ಘಕಾಲದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು. ಜಾಗತಿಕ ಮತ್ತು ದ್ವಿಪಕ್ಷೀಯ ವಿಷಯಗಳ ಕುರಿತು ನಿಯಮಿತವಾಗಿ ಸಮಾಲೋಚನೆ ನಡೆಸಲು ನಾಯಕರು ಒಪ್ಪಿಕೊಂಡರು.
।।।।।।। 

Post a Comment

Previous Post Next Post