ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಬರ್ಬರವಾಗಿ ಕೊಚ್ಚಿ ಕೊಲೆ

 ಮಂಗಳೂರು: ಕರಾವಳಿ ಪ್ರದೇಶದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳ್ಳಾರೆ ಪೇಟೆಯಲ್ಲಿ ನಿಂತಿದ್ದಾಗ ಕೇರಳದಲ್ಲಿ ರಿಜಿಸ್ಟರ್​ ಆಗಿರೋ ಬೈಕ್​ ಮೇಲೆ ಬಂದ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.ಯಾರೋ ಅಪರಿಚಿತ ತಂಡದಿಂದ ದಾಳಿ ನಡೆದಿರೋ ಶಂಕೆ ವ್ಯಕ್ತವಾಗಿದೆ. ದಾಳಿಗೆ ಒಳಗಾದ ಕೂಡಲೇ ಪ್ರವೀಣ್ ಅವರನ್ನು​​ ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಯ್ತು. ಈಗ ಚಿಕಿತ್ಸೆ ಫಲಿಸದೇ ಪ್ರವೀಣ್​​ ಸಾವನ್ನಪ್ಪಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

Post a Comment

Previous Post Next Post