ಜುಲೈ 05, 2022,, 10ರಂದು ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬೆಂಗಳೂರು
ಪ್ರವಾಸ
,
2:28PM
ಪಾಟ್ನಾ: ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮುಂಬರುವ ಚುನಾವಣೆಯಲ್ಲಿ ಬೆಂಬಲ ಕೋರಲು ಎನ್‌ಡಿಎ ಪಾಲುದಾರರನ್ನು ಭೇಟಿ ಮಾಡಿದ್ದಾರೆ
ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮುಂಬರುವ ಚುನಾವಣೆಯಲ್ಲಿ ತಮ್ಮ ಬೆಂಬಲವನ್ನು ಪಡೆಯಲು ಎನ್‌ಡಿಎ ಮೈತ್ರಿಕೂಟದ ಪಾಲುದಾರರ ನಾಯಕರನ್ನು ಭೇಟಿ ಮಾಡಲು ಇಂದು ಪಾಟ್ನಾದಲ್ಲಿದ್ದಾರೆ. ಮುರ್ಮು ಹಿರಿಯ ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಶ್ರೀ ಕುಮಾರ್ ಅವರನ್ನು ಭೇಟಿ ಮಾಡುವುದರ ಜೊತೆಗೆ, ಶ್ರೀಮತಿ ಮುರ್ಮು ಅವರು ಎನ್‌ಡಿಎ ಮಿತ್ರಪಕ್ಷಗಳ ಸಂಸದರು ಮತ್ತು ಶಾಸಕರೊಂದಿಗೆ ಸಭೆಗಳನ್ನು ನಡೆಸಿದರು. ಇದಕ್ಕೂ ಮುನ್ನ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಜಯ್ ಕುಮಾರ್ ಜೈಸ್ವಾಲ್ ಮತ್ತು ರಾಜ್ಯ ಸಂಪುಟ ಸಚಿವರು ಸೇರಿದಂತೆ ಬಿಜೆಪಿ ನಾಯಕರು ಇಂದು ಬೆಳಿಗ್ಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಮುರ್ಮು ಅವರನ್ನು ಸ್ವಾಗತಿಸಿದರು.
ಬಿಹಾರದಲ್ಲಿ, ಜೆಡಿಯು ಸೇರಿದಂತೆ ಎಲ್ಲಾ ಎನ್‌ಡಿಎ ಮಿತ್ರಪಕ್ಷಗಳು, ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ- ಸೆಕ್ಯುಲರ್ (ಎಚ್‌ಎಎಂ-ಎಸ್) ಈಗಾಗಲೇ ಮುರ್ಮುಗೆ ತಮ್ಮ ಬೆಂಬಲವನ್ನು ಘೋಷಿಸಿವೆ. ಜಮುಯಿ ಸಂಸದ ಚಿರಾಗ್ ಪಾಸ್ವಾನ್ ಮತ್ತು ಅವರ ಪಕ್ಷದ ಎಲ್‌ಜೆಪಿ (ರಾಮ್‌ವಿಲಾಸ್) ಮತ್ತು ಕೇಂದ್ರ ಸಚಿವ ಪಶುಪತಿ ಕುಮಾರ್ ಪಾರಸ್ ನೇತೃತ್ವದ ರಾಷ್ಟ್ರೀಯ ಲೋಕ ಜನಶಕತಿ ಪಕ್ಷವು ಜುಲೈ 18 ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.
05-07-2022
ಪ್ರಕಟಣೆಯ ಕೃಪೆಗಾಗಿ
10ರಂದು ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ರಾಜ್ಯ ಪ್ರವಾಸ
ಬೆಂಗಳೂರು: ಬಿಜೆಪಿ ನೇತೃತ್ವದ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು 10-7-2022ರಂದು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ಜನಪ್ರತಿನಿಧಿಗಳ ಜೊತೆ ಸಭೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮತ್ತು ಪಾಂಡಿಚೇರಿಯ ಉಸ್ತುವಾರಿ ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರು ಸರಳತೆಯನ್ನು ಮೈಗೂಡಿಸಿಕೊಂಡವರು. ಬುಡಕಟ್ಟು ಜನಾಂಗಕ್ಕೆ ಸೇರಿದ ಅವರು, ಎರಡು ದಶಕಕ್ಕೂ ಹೆಚ್ಚು ಕಾಲ ರಾಜಕೀಯ ಮತ್ತು ಸಾಂವಿಧಾನಿಕ ಹುದ್ದೆಗಳಲ್ಲಿ ಮೇಲೇರುತ್ತಲೇ ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಒಡಿಶಾದ ಮಯೂರ್‍ಗಂಜ್‍ನಲ್ಲಿ ಶಾಲಾ ಶಿಕ್ಷಣ, ಭುವನೇಶ್ವರದಲ್ಲಿ ಕಾಲೇಜು ಶಿಕ್ಷಣ ಪೂರೈಸಿದ ಅವರು ಕಲಾ ಪದವಿ ಪಡೆದಿದ್ದಾರೆ. ಶಿಕ್ಷಣದ ನಂತರ ಒಡಿಶಾ ಸರಕಾರದ ನೀರಾವರಿ ಇಲಾಖೆಯಲ್ಲಿ ನೌಕರಿ, ಆನಂತರ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಅವರಿಗಿದೆ. ಇದರ ಮಧ್ಯೆಯೇ 1997ರಲ್ಲಿ ಅವರು ಒಡಿಶಾದ ರಾಯ್‍ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯೂ ಆದರು. ಅದರ ನಂತರ ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್‍ರಂಗಪುರ ಕ್ಷೇತ್ರದಿಂದ ಕಣಕ್ಕೆ ಇಳಿದು ಆರಿಸಿ ಬಂದರು. ಬಿಜೆಡಿ–ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು. 2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು ಎಂದು ತಿಳಿಸಿದ್ದಾರೆ.
2013ರಲ್ಲಿ ಬಿಜೆಪಿಯ ಪರಿಶಿಷ್ಟ ಪಂಗಡ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಅವರು ಆಯ್ಕೆಯಾದರು. ನಂತರ 2015ರಲ್ಲಿ ಜಾಖರ್ಂಡ್‍ನ ರಾಜ್ಯಪಾಲೆಯಾಗಿ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲಿನ ಮೊದಲ ಮಹಿಳಾ ರಾಜ್ಯಪಾಲರು ಎಂಬ ಹೆಗ್ಗಳಿಕೆ, ರಾಜ್ಯಪಾಲರ ಹುದ್ದೆಗೆ ಏರಿದ ಒಡಿಶಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜಾರ್ಖಂಡ್‍ನ ರಾಜ್ಯಪಾಲರಾಗಿ ಪೂರ್ಣಾವಧಿಯನ್ನು ಪೂರೈಸಿದ ಮೊದಲಿಗರು ಎಂಬ ಹೆಗ್ಗಳಿಕೆಯೂ ಅವರಿಗೆ ಇದೆ ಎಂದು ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.
Post a Comment