ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶ್ರೀ ಬಾಲಗಂಗಾಧರ ತಿಲಕ್ ಜನ್ಮದಿನ ಆಚರಣೆ

23.07.2022
   ಪ್ರಕಟಣೆಯ ಕೃಪೆಗಾಗಿ
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶ್ರೀ ಬಾಲಗಂಗಾಧರ ತಿಲಕ್ ಜನ್ಮದಿನ ಆಚರಣೆ 
ಬೆಂಗಳೂರು: ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸಮಾಜ ಸುಧಾರಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ಶ್ರೀ ಬಾಲಗಂಗಾಧರ ತಿಲಕ್ ಅವರ 166ನೇ ಜನ್ಮದಿನವನ್ನು ಆಚರಿಸಲಾಯಿತು. 
ಶ್ರೀ ಬಾಲಗಂಗಾಧರ ತಿಲಕ್ ಅವರ ಭಾವಚಿತ್ರಕ್ಕೆ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.ವಿ, ನಿಕಟಪೂರ್ವ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಅವರು ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

Post a Comment

Previous Post Next Post