CM, ವಿಶೇಷ, ಚಟುವಟಿಕೆಗಳು



[08/07, 11:48 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹತ್ವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ವಿ ಸೋಮಣ್ಣ, ಶಾಸಕ ಆಯನೂರು ಮಂಜುನಾಥ,  ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ. ಎಲ್ ಭೈರಪ್ಪ, ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ  ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ಮತ್ತು ಇತರರು ಉಪಸ್ಥಿತರಿದ್ದರು.
[08/07, 1:48 PM] Gurulingswami. Holimatha. Vv. Cm: *ನಿವೃತ್ತ ಸರ್ಕಾರಿ ನೌಕರರಿಗೆ*
*ಆರೋಗ್ಯ ಯೋಜನೆ ವಿಸ್ತರಣೆ*: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜುಲೈ 08: ನಿವೃತ್ತ ಸರ್ಕಾರಿ ನೌಕರರಿಗೆ
ಆರೋಗ್ಯ ಯೋಜನೆಯ  ವಿಸ್ತರಣೆ ಮಾಡುವುದಾಗಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಅವರು ಇಂದು  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ  ಆಯೋಜಿಸಿದ್ದ  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ  ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ  ಮಾತನಾಡಿದರು.


ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ  ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದರು.  ನಿವೃತ್ತ ನೌಕರರು ನಿರಂತರವಾಗಿ  ಕ್ರಿಯಾಶೀಲರಾಗಿದ್ದು ,  ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಿ ಕೆಲಸ ಮಾಡಬೇಕು. 
ಮಾನವೀಯತೆ ಇರುವ ನೌಕರರಿದ್ದರೆ ಬಡವರ ಕಷ್ಟ ಕಾರ್ಪಣ್ಯ ದೂರ ಮಾಡಲು ಸಾಧ್ಯ. ಇದರ ತಳಹದಿಯ ಮೇಲೆ ಆಡಳಿತ ನಡೆಯಬೇಕು. ಮತ್ತೊಬ್ಬರ ಬಗ್ಗೆ ಪ್ರೀತಿ, ವಿಶ್ವಾಸ, ಅನುಕಂಪವಿದ್ದಾಗ ನ್ಯಾಯ ಕೊಡಲು ಸಾಧ್ಯ. 6 ಕೋಟಿಗಿಂತ ಹೆಚ್ಚು ಜನಸಂಖ್ಯೆ ನಮ್ಮ ಕೈಗೆ ಜವಾಬ್ದಾರಿ ಕೊಟ್ಟಿದೆ. 6 ಲಕ್ಷಕ್ಕೂ ಹೆಚ್ಚಿರುವ ಸರ್ಕಾರಿ ನೌಕರರು ಹಾಗೂ ಆಡಳಿತ ಮಾಡುವ ಜನಪ್ರತಿನಿಧಿಗಳ ಕೈಯಲ್ಲಿ ಜವಾಬ್ದಾರಿ ಇದೆ. ನಾವೆಲ್ಲ ಜನರ ವಿಶ್ವಾಸದ  ಟ್ರಸ್ಟಿಗಳು. ನಮ್ಮ ಮೇಲಿರುವ ವಿಶ್ವಾಸಕ್ಕೆ ಅರ್ಹರಾಗಿ ನಾವು ನಡೆದುಕೊಳ್ಳಬೇಕು. ಆಗ ನಾವು ಈ ಸ್ಥಾನದಲ್ಲಿ ಕುಳಿತಿದ್ದಕ್ಕೆ ಸಾರ್ಥಕವಾಗುತ್ತದೆ. ಈ ಮನೋಭಾವ ಸರ್ಕಾರಿ ನೌಕರರಿಗೆ ಬಂದರೆ ಕರ್ನಾಟಕ ವಿಶ್ವದಲ್ಲಿಯೇ ನಂಬರ್ ಒನ್ ಆಗಲು ಸಾಧ್ಯ ಎಂದರು.

*ಆಡಳಿತಕ್ಕೆ ಅನುಭವದ ಮಾರ್ಗದರ್ಶನ ಅಗತ್ಯ*
ಆಡಳಿತ ನಡೆಸಲು ನಿವೃತ್ತ ನೌಕರರ  ವಿದೆ. ತಿಳಿದುಕೊಳ್ಳುವ ಹಸಿವಿರುವವನು ಬೆಳೆಯುತ್ತಾನೆ. ಸರ್ಕಾರ ನಿವೃತ್ತ ನೌಕರರ ಸೇವೆಯನ್ನು ಆಗಾಗ್ಗೆ ಬಳಸಿಕೊಳ್ಳುತ್ತದೆ. ನಿವೃತ್ತರಾದೆವು ಎಂದು ನಿರಾಸೆಯಾಗಬೇಕಿಲ್ಲ. ಈ ಸರ್ಕಾರ ನಿಮ್ಮ ಬಗ್ಗೆ ಗೌರವ ಇಟ್ಟು ಕೊಂಡಿದೆ ಎಂದರು. ನಿಮ್ಮ ಬೆಲೆ ನಮಗೆ ತಿಳಿದಿದೆ. ಇಷ್ಟು ದೊಡ್ಡ ಅನುಭವವುಳ್ಳ ಮಾನವ ಶಕ್ತಿ, ರಾಜ್ಯ ಕಟ್ಟಲು ಉಪಯೋಗವಾಗುತ್ತದೆ. ನಿವೃತ್ತಿ ಎನ್ನುವುದು ಸರ್ಕಾರದ ಕಾನೂನಿನ ಅನುಸಾರವಿದೆ. ವ್ಯಕ್ತಿಗೆ ನಿವೃತ್ತಿ ಎನ್ನುವುದು ಮನಸ್ಥಿತಿ. ಕೆಲವರು ನೌಕರಿಯಲ್ಲಿದ್ದೆ ನಿವೃತ್ತಿಯಾಗುತ್ತಾರೆ. ಮನಾಸಿಕವಾಗಿ ನಿವೃತ್ತ ರಾಗುತ್ತಾರೆ. ಇನ್ನು ಕೆಲವು ನಿವೃತ್ತ ನೌಕರರು ಇತರರಿಗೆ ಮಾರ್ಗದರ್ಶನ ಮಾಡುತ್ತಾರೆ. ಈಗಲೂ ಕ್ರಿಯಾಶೀಲರಾಗಿದ್ದಾರೆ. ಮಾನಸಿಕವಾಗಿ ನಿವೃತ್ತರಾಗದವರು ಜೀವನದಲ್ಲಿ ಎಂದೂ ನಿವೃತ್ತ ರಾಗುವುದಿಲ್ಲ. ಸಮಾಜದ ಅಭಿವೃದ್ಧಿಗೆ ನಿವೃತ್ತ ನೌಕರರು ಕೊಡುಗೆ ನೀಡಬಹುದು.   ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲು ಅವಕಾಶವಿದೆ. ರಾಜಕಾರಣಕ್ಕೆ ವಿದ್ಯಾರ್ಹತೆ ಹಾಗೂ ನಿವೃತ್ತಿ ಎರಡೂ ಇಲ್ಲ. ಹಾಗಾಗಿ ಕೆಲವು ನೌಕರರು ನಿವೃತ್ತಿಯ ನಂತರ ರಾಜಕಾರಣಕ್ಕೆ  ಸೇರುತ್ತಾರೆ. ರಾಜಕಾರಣವನ್ನು ಪ್ರಾಮಾಣಿಕತೆಯಿಂದ,  ಮಾನವೀಯತೆಯಿಂದ, ಒತ್ತಡದ ನಡುವೆಯೂ ಆತ್ಮಸಾಕ್ಷಿಗೆ ತಕ್ಕಂತೆ ಮಾಡಿದರೆ ಸಂತೋಷ ಹಾಗೂ  ತೃಪ್ತಿ ಇರುತ್ತದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. 

*ಪ್ರಗತಿಯ ಚಕ್ರ ತಿರುಗಲು ಪ್ರಾಮಾಣಿಕವಾಗಿ ಸೇವೆ ಅಗತ್ಯ*
ಕರ್ನಾಟಕ ರಾಜ್ಯದ ಆಡಳಿತ ಉತ್ತಮವಾಗಿದೆ ಎಂಬ ಹೆಸರಿದ್ದರೆ, ಅದರಲ್ಲಿ ನಿವೃತ್ತ ನೌಕರರ ಪಾತ್ರ ದೊಡ್ಡದಿದೆ. ಇತ್ತೀಚಿನ ದಿನಗಳಲ್ಲಿ ನೌಕರರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ, ಆದರೆ ಹತ್ತಿರದಿಂದ ನೋಡಿದಾಗ ಅವರ ಸೇವೆ ವ್ಯವಸ್ಥಿತ ಆಡಳಿತಕ್ಕೆ ಎಡೆ ಮಾಡಿಕೊಟ್ಟಿದೆ. ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರು ಸರ್ಕಾರದ ಎರಡು ಕಣ್ಣುಗಳಂತೆ ಅವರ ಬಗ್ಗೆ ಅಪಾರ ಗೌರವವಿದೆ. ಆಡಳಿತ ಚಕ್ರ ಸುಗಮವಾಗಿ ಸಾಗಲು ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಸಾಧ್ಯ. ಇಲ್ಲದಿದ್ದರೆ ಪ್ರಗತಿಯ ಚಕ್ರ ಮುಂದುವರೆಯುವುದಿಲ್ಲ.  ನಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ನಡೆದರೆ ಸುಲಭವಾಗಿ ಆಡಳಿತ ಚಕ್ರ ಮುಂದುವರೆಯುತ್ತದೆ. 800 ವರ್ಷಗಳ ಹಿಂದೆಯೇ ಆಡಳಿತ ಹೇಗಿರಬೇಕೆಂದು ಶಿಲಾಶಾಸನಗಳು ಬರೆಸಿದ್ದ ರಾಜ್ಯದಲ್ಲಿ ಉತ್ತಮ ಆಡಳಿತವಿರಬೇಕು. ಇಡೀ ದೇಶದಲ್ಲಿ ಕರ್ನಾಟಕಕ್ಕೆ  ಒಳ್ಳೆಯ ಹೆಸರಿದೆ. 

*ಜನಪರವಾಗಿ ಕೆಲಸ ಮಾಡಬೇಕು*
ಆಧುನಿಕ ತಂತ್ರಜ್ಞಾನ, ತಂತ್ರಾಂಶ ಬಳಕೆ, ಇನ್ನಷ್ಟು ಪ್ರಾಮಾಣಿಕವಾಗಿ, ದಕ್ಷತೆಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ಜನಪರವಾಗಿ ಕೆಲಸ ಮಾಡಬೇಕು. ಕೆಲಸ ಮಾಡಬಾರದು ಎಂದು ತೀರ್ಮಾನ ಮಾಡಿದರೆ ಅದಕ್ಕೆ ಕಾರಣಗಳನ್ನು ಹುಡುಕುತ್ತೇವೆ.  ಬಡವರಿಗೆ, ದೀನದಲಿತರಿಗೆ, ಕಷ್ಟದಲ್ಲಿರುವವರಿಗೆ   ಕೆಲಸ ಮಾಡಲು ಒಂದು ಕಾರಣ ಇದ್ದರೆ ಸಾಕು. ಅದು ಮಾನದಂಡವಾಗಬೇಕು. ಕಾನೂನಿನ ಚೌಕಟ್ಟಿನಲ್ಲಿ ನಮ್ಮದೇ ಮಾನದಂಡಗಳನ್ನು ಹಾಕಿಕೊಳ್ಳುವ ಅಗತ್ಯವಿದೆ. ಬಡವರ ಪರವಾದ ದೃಷ್ಟಿಯಿರಬೇಕು. ಕರುಣೆ ಆಡಳಿತದಲ್ಲಿ ಮುಖ್ಯ. ಜಾಗತೀಕರಣದ, ಉದಾರೀಕರಣ, ಖಾಸಗೀಕರಣ ವಾದ ಬಳಿಕ ಅಂತ:ಕರಣ ಮರೆತ್ತಿದ್ದೇವೆ. ಆಡಲಿತವೂ ಮಾರುಕಟ್ಟೆ ಕೇಂದ್ರೀಕೃತವಾಗುತ್ತಿದೆ. ಮಾರುಕಟ್ಟೆ ಯಲ್ಲಿ ಮಾನವೀಯತೆ ದೊರೆಯುವುದು ವಿರಳ. ನಮ್ಮ ಮನದಾಳದಲ್ಲಿ, ನಿರ್ಣಯಗಳಲ್ಲಿ ಮಾನವೀಯತೆ ಇರಬೇಕು. ಆಗ ಮಾತ್ರ ಕಲ್ಯಾಣ ರಾಜ್ಯವಾಗಿ ಬೆಳೆಯಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[08/07, 3:02 PM] Gurulingswami. Holimatha. Vv. Cm: *ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜುಲೈ 08:

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. 

 ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. 

ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ?
ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ  ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು‌. ಆ ಹಣ ಎಲ್ಲಿ ಎಂದು ಕೇಳಿದ ಸಿಎಂ,  ಎಂದಿನಂತೆಯೇ ಇದು ಕೂಡ  ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[08/07, 3:23 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರವಾಹ ಪರಿಸ್ಥಿತಿ ಕುರಿತು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಸುನಿಲ್ ಕುಮಾರ್, ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ,  ಅಭಿವೃದ್ಧಿ ಆಯುಕ್ತರು ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ, ಆರ್ ಡಿ ಪಿ ಆರ್ ಇಲಾಖೆ ಎಸಿಎಸ್ ಅತೀಕ್  ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[08/07, 4:37 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ಇರುವ ಏರೋಸ್ಪೇಸ್ ಪಾರ್ಕ್ ಕೈಗಾರಿಕೆ ಪ್ರದೇಶದಲ್ಲಿ ನೂತನ ಸ್ಯಾಫ್ರಾನ್ ಎಚ್ಎಎಲ್ ಏರ್‌ಕ್ರಾಫ್ಟ್ ಎಂಜಿನ್ ನಿರ್ಮಾಣ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ಎಚ್ಎಎಲ್ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್ ಮಾಧವನ್, ಸ್ಯಾಫರಾನ್ ಸಿಇಒಗಳಾದ ಆಲಿವರ್ ಆಂಡ್ರಿಸ್, ಜೀನ್ ಪಾಲ್ ಆಲರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
[08/07, 4:39 PM] Gurulingswami. Holimatha. Vv. Cm: *ಭಾರತದಲ್ಲಿಯೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಕರ್ನಾಟಕದಲ್ಲಿ ಆಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜುಲೈ 8 :

 ಮುಂದಿನ ದಿನಗಳಲ್ಲಿ ಭಾರತದಲ್ಲಿಯೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಕರ್ನಾಟಕದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಹಾಗೂ ಬಿಕ್ವೆಸ್ಟ್ ಕನ್ಸಲ್ಟೆನ್ಸಿ ಮತ್ತು ಇಂಜಿನಿಯರಿಂಗ್ ಪ್ರೈ.ಲಿ. ಸಹಯೋಗದೊಂದಿಗೆ ಆಯೋಜಿಸಿರುವ ಕರ್ನಾಟಕದಲ್ಲಿ ಎಥನಾಲ್ ಉತ್ಪಾದನೆಯ ನಿಯಮ, ಆವಿಷ್ಕಾರ ಹಾಗೂ ಸ್ಥಿರತೆಯ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು   ಮಾತನಾಡಿದರು.

ಕರ್ನಾಟಕದ 32 ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆಯನ್ನು ಕೈಗೆತ್ತಿಕೊಂಡಿದೆ. ಇನ್ನೂ 60 ಸಕ್ಕರೆ ಕಾರ್ಖಾನೆಗಳು ಅನುಮತಿ ಪಡೆಯುವ ಹಂತದಲ್ಲಿವೆ. ಎಥನಾಲ್ ರಾಜ್ಯಸರ್ಕಾರ ಎಥನಾಲ್ ನೀತಿಯನ್ನು ರೂಪಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಎಥನಾಲ್ ಉತ್ಪಾದನೆಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುವುದು. ಒಂದೂವರೆ ವರ್ಷದಲ್ಲಿ  ಕರ್ನಾಟಕದಲ್ಲಿ ಎಥನಾಲ್ ಉತ್ಪಾದನೆಯನ್ನು ಶೇ. 20 ರಷ್ಟು  ಹೆಚ್ಚಿಸಲಾಗುವುದು. ಕೇವಲ ಕಬ್ಬಿನಿಂದ ಮಾತ್ರವಲ್ಲ, ಭತ್ತ, ಜೋಳ ಹಾಗೂ ಗೋಧಿಯ ಹೊಟ್ಟಿನಿಂದ ತಯಾರಿಸಬಹುದಾಗಿದೆ ಎಂದರು.

*ಇಂಧನ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರತೆಯನ್ನು ಸಾಧಿಸಬೇಕಿದೆ :*
ಎಥನಾಲ್ ಉತ್ಪಾದನೆಯಲ್ಲಿ ಇನ್ನಷ್ಟು ಸಂಶೋಧನೆಗಳಾಗಬೇಕು. ಈಗ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಹಸಿರು ಇಂಧನದ ಬಹಳ ಮುಖ್ಯ.  ಭಾರತದ ಶೇ. 43 ರಷ್ಟು ನವೀಕರಿಸಬಹುದಾದ ಇಂಧನವನ್ನು ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ. ಮೂರು ದೊಡ್ಡ ಸಂಸ್ಥೆಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ., ಸಮುದ್ರದ ನೀರಿನಿಂದ ಅಮೋನಿಯಾವನ್ನು ಉತ್ಪಾದಿಸುವ ನಿಟ್ಟಿನಲ್ಲಿ 1 ಲಕ್ಷ 30 ಸಾವಿರ ಕೋಟಿಯಷ್ಟು ಬಂಡವಾಳ ಕರ್ನಾಟಕಕ್ಕೆ ಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನವೀಕರಿಸಬಹುದಾದ ಇಂಧನಗಳ ಉತ್ಪಾದನೆಗೆ ವಿಶೇಷ ನೀತಿಗಳು, ಅನೇಕ ಪ್ರೋತ್ಸಾಹಕಗಳನ್ನು ನೀಡುತ್ತಿದ್ದು, ಮುಂದಿನ ದಿನಗಳಲ್ಲಿ  ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಕಾರ್ಖಾನೆಗಳು ಕರ್ನಾಟಕದಲ್ಲಿ ತಲೆಎತ್ತಲಿವೆ. ಪ್ರಧಾನಿ ಮೋದಿಯವರ ಕನಸಿನಂತೆ ಭಾರತ ದೇಶ ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಬೇಕಿದೆ. ಈ ರೀತಿ 5 ಟ್ರಿಲಿಯನ್ ಆರ್ಥಿಕತೆಯ ಗುರಿಯನ್ನು ಸಾಧಿಸಬಹುದಾಗಿದೆ ಎಂದರು.

*ಸಕ್ಕರೆ ಕಾರ್ಖಾನೆಗಳು ಕರ್ನಾಟಕದ ಆರ್ಥಿಕತೆಗೆ  ಕೊಡುಗೆ ನೀಡಿದೆ :*
ಕಬ್ಬಿನ ಬೆಳೆಯಿಂದ ಉತ್ಪನ್ನಗಳನ್ನು ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳು ಕರ್ನಾಟಕದ ಆರ್ಥಿಕತೆಗೆ ಬಹಳಷ್ಟು ಕೊಡುಗೆ ನೀಡುತ್ತಿವೆ. 72 ಸಕ್ಕರೆ ಕಾರ್ಖಾನೆಗಳು ಇಂದು ಲಕ್ಷಾತರ ಜನ ರೈತರಿಗೆ ಕೃಷಿಯಲ್ಲಿ ಲಾಭ ತಂದುಕೊಟ್ಟಿದೆ. ಕಬ್ಬಿನ ಪದಾರ್ಥಗಳ ಉತ್ಪಾದನೆಯಲ್ಲಿ ಹಲವಾರು ಬದಲಾವಣೆಗಳಾಗಿದ್ದು, ಅದನ್ನು ಅಳವಡಿಸಿಕೊಳ್ಳಬೇಕಿದೆ. ಕಬ್ಬಿನಿಂದ  ಮೊಲೆಸಿಸ್, ಬೆಗಾಸ್ ಉತ್ಪನ್ನದ ನಂತರ ಎಥನಾಲ್ ನ್ನು ಉತ್ಪಾದಿಸಲಾಗುತ್ತಿದೆ.  ಪ್ರಾರಂಭದಲ್ಲಿ ಕೇಂದ್ರ ಸರ್ಕಾರ  5% ಎಥನಾಲ್ ಉತ್ಪಾದನೆಗೆ ಅನುಮತಿ ನೀಡಿತ್ತು. ಫಾಸಿಲ್ ಫ್ಯೂಯಲ್ ಬಳಕೆ ಕಡಿಮೆ ಮಾಡುವುದರಿಂದ ವಿದೇಶ ವಿನಿಮಯ ಉಳಿತಾಯವಾಗುತ್ತದೆ. ಈ ಇಂಧನದ ಮಿತಬಳಕೆಯಿಂದ ದೇಶಕ್ಕೆ ಆರ್ಥಿಕ ಉಳಿತಾಯವಾಗುವುದಲ್ಲದೇ ಪರಿಸರ ಸಂರಕ್ಷಣೆಯನ್ನು ಮಾಡಿದಂತಾಗುತ್ತದೆ ಎಂದರು.

*ಪರಿಸರ ಸ್ನೇಹಿ ಇಂಧನದ ಉತ್ಪಾದನೆಗೆ ಪ್ರೋತ್ಸಾಹ :*
ವಾಹನಗಳು ಉಗುಳುವ ಹೊಗೆಯಿಂದ ಹೆಚ್ಚಿನ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಆದ್ದರಿಂದ ಪರಿಸರ ಸ್ನೇಹಿ ಇಂಧನದ ಅವಶ್ಯಕತೆ ಇದ್ದು, ಸ್ಪರ್ಧಾತ್ಮಕ ದರದಲ್ಲಿ ಲಭ್ಯವಾಗಬೇಕು. ಪರಿಸರ ಸ್ನೇಹಿ ಇಂಧನದ ಉತ್ಪಾದನೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು 248 ಕೋಟಿ ರೂ.ಗಳಷ್ಟು ಸಹಾಯಧನವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ. ಎಥನಾಲ್ ಗೆ ಬೇಡಿಕೆ ನಿರಂತರವಾಗಿರುತ್ತದೆ. ಎಥನಾಲ್ ಉತ್ಪಾದನೆಯಿಂದ ಸಕ್ಕರೆ ದರ ಸೇರಿದಂತೆ ಸರ್ಕಾರದ ಸಬ್ಸಿಡಿಗಳೂ ಹೆಚ್ಚಿ ಎಥನಾಲ್ ಉತ್ಪಾದನಾ ಸಂಸ್ಥೆಗಳಿಗೆ ಲಾಭವಾಗುತ್ತದೆ. ಸಕ್ಕರೆ ಸಂಸ್ಥೆಗಳು ರೈತನ ಹಿತರಕ್ಷಣೆಯನ್ನು ವಹಿಸಬೇಕು. ಬಹುಬೆಳೆ ಉತ್ಪಾದನೆ, ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದರು.

*ಕಬ್ಬಿನ ಉತ್ಪನ್ನಗಳು ಆರ್ಥಿಕತೆ ಅವಕಾಶ ನೀಡುತ್ತವೆ :*
ಸಕ್ಕರೆಯ ಅಂಶವಾದ ಗ್ಲೂಕೋಸ್ ಮತ್ತು ಸುಕ್ರೋಸ್‍ನ ಅಣುವಿನಲ್ಲಿ ಅಪಾರವಾದ ಶಕ್ತಿಯಿದೆ. ಅದರಲ್ಲಿ ಜೈವಿಕ ಅಣುವಿನ ಶಕ್ತಿಯಿದೆ. ಕಬ್ಬಿನಲ್ಲಿ ಗ್ಲೂಕೋಸ್ ವiತ್ತು ಸುಕ್ರೋಸ್ ಅಂಶಗಳು ಹೇರಳವಾಗಿವೆ.  ಸುಮಾರು 80 ಕ್ಕಿಂತ ಹೆಚ್ಚು ಪದಾರ್ಥಗಳನ್ನು ಕಬ್ಬಿನಿಂದ ತಯಾರಿಸಬಹುದಾಗಿದೆ. ಕಬ್ಬಿನ ಸಿಪ್ಪೆಯಿಂದ ಹಿಡಿದು ಪ್ರತಿಯೊಂದು ಭಾಗವೂ ಬಳಸಬಹುದಾಗಿದೆ. ಕಬ್ಬಿನಿಂದ ಉತ್ಪಾದನೆ, ಉತ್ಪನ್ನ ಹಾಗೂ ಆರ್ಥಿಕತೆಗೆ ಅವಕಾಶವನ್ನು ನೀಡುತ್ತದೆ. ಅತಿ ಹೆಚ್ಚು ನೀರು ಬೇಕಾಗುವ ಬೆಳೆ ಕಬ್ಬು. ನೀರಿನ ನಿರ್ಬಂಧ ಇಲ್ಲ, ಬೆಳೆ ಬೆಳೆಯಲು ತಾಂತ್ರಿಕ ಸಹಾಯವನ್ನು ಕೃಷಿ ಇಲಾಖೆ ನೀಡುತ್ತದೆ ಎಂದರು.
[08/07, 6:13 PM] Gurulingswami. Holimatha. Vv. Cm: ದಿನಾಂಕ 8-7-2022ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತ ಸಭೆಯ ಮುಖ್ಯಾಂಶಗಳು:
ಕ್ರ.ಸಂ. ವಿವರ ಹಾನಿಯ ಪ್ರಮಾಣ (ಜೂನ್ 1ರಿಂದ ಈವರೆಗೆ)
1. ಪ್ರವಾಹಪೀಡಿತ ಜಿಲ್ಲೆಗಳ ಸಂಖ್ಯೆ 13
2. ತಾಲ್ಲೂಕುಗಳು 17
3. ಗ್ರಾಮಗಳು 37
4. ಬಾಧಿತ ಜನಸಂಖ್ಯೆ 495
5. ರಕ್ಷಿಸಲಾದ ಜನರ ಸಂಖ್ಯೆ 90
6. ತೆರೆಯಲಾಗಿರುವ ಕಾಳಜಿ ಕೇಂದ್ರಗಳು 4
7. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರ ಸಂಖ್ಯೆ 90
8. ಮಾನವ ಜೀವ ಹಾನಿ 12
9. ಜಾನುವಾರು ಜೀವಹಾನಿ 65

• ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಒಟ್ಟು 735.59 ಕೋಟಿ ರೂ. ಲಭ್ಯವಿದೆ.
• ಸಭೆಯಲ್ಲಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಪ್ರವಾಹ ಮುನ್ನೆಚ್ಚರಿಕೆ ಕುರಿತು ಈ ಕೆಳಕಂಡ ಸೂಚನೆಗಳನ್ನು ನೀಡಲಾಯಿತು.
• ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು.
• ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಯನ್ನು ಆದ್ಯತೆ ಮೇರೆಗೆ ಕೈಗೊಂಡು ಸಂಚಾರ ಸಂಪರ್ಕ ಸಮರ್ಪಕವಾಗಿರುವಂತೆ ಎಚ್ಚರ ವಹಿಸಬೇಕು. ಭೂಕುಸಿತವಾದಲ್ಲಿ ಕೂಡಲೇ ರಸ್ತೆ ತೆರವುಗೊಳಿಸಬೇಕು.
..2

:: 2 ::
• ಮನೆ ಹಾನಿ ಯಾದಲ್ಲಿ ಮೊದಲು 10 ಸಾವಿರ ತುರ್ತು ಪರಿಹಾರ ಕೂಡಲೇ ಕೊಡಿ. ನಂತರ ಹಾನಿ ಪ್ರಮಾಣವನ್ನು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
• ಬೆಳೆಹಾನಿಯನ್ನೂ ಮಳೆ ನಿಂತ ಕೂಡಲೇ ಸಮೀಕ್ಷೆ ಮಾಡಿ ವರದಿ ಸಲ್ಲಿಸಲು ಸೂಚಿಸಲಾಯಿತು.
• ಜೀವ ಹಾನಿ, ಜಾನುವಾರು ಜೀವ ಹಾನಿ ಸಂಭವಿಸಿದಾಗ ತಕ್ಷಣ ಪರಿಹಾರ ವಿತರಿಸಲು ತಿಳಿಸಲಾಯಿತು.
• ಕಂದಾಯ, ಪೊಲೀಸ್, ಅಗ್ನಿಶಾಮಕ ಇಲಾಖೆ, ಮತ್ತು ಇತರ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ಸೂಚಿಸಲಾಯಿತು.
• ಎಸ್.ಡಿ.ಆರ್.ಎಫ್. / ಎನ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳವಂತೆ ಸೂಚಿಸಲಾಯಿತು.
• ಕಡಲ ಕೊರೆತ ಆದಲ್ಲಿ ತುರ್ತು ಕಾಮಗಾರಿ ಕೂಡಲೇ ಕೈಗೊಂಡು ಹೆಚ್ಚಿನ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಯಿತು.
• ಗ್ರಾಮ ಮಟ್ಟದ ಟಾಸ್ಕ್‍ ಫೋರ್ಸ್ ರಚಿಸಿ, ನೇರ ಸಂಪರ್ಕ ಹೊಂದಲು ತಿಳಿಸಲಾಗಿದೆ. ನಿಯಂತ್ರಣ ಕೊಠಡಿ ಸ್ಥಾಪಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸೂಚಿಸಲಾಯಿತು. ಪೊಲೀಸರು ಸೇವೆಗೆ ದಿನದ 24 ಗಂಟೆಯೂ ಲಭ್ಯರಿರಬೇಕು.
• ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ಸರಬರಾಜು ಅಡಚಣೆಯಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.
..3
:: 3 ::
• ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಪರಿಹಾರ ಕಾರ್ಯಗಳಿಗೆ ಸದ್ಬಳಕೆ ಮಾಡುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಯನ್ವಯ ಪರಿಹಾರ ನೀಡಿ. ತೊಡಕುಗಳಿದ್ದಾಗ, ವಿಶೇಷ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ವಿಭಾಗದ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
• ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಸುನಿಲ್ ಕುಮಾರ್, ನಾರಾಯಣಗೌಡ, ಕೋಟ ಶ್ರೀನಿವಾಸ ಪೂಜಾರಿ,  ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ,  ಅಭಿವೃದ್ಧಿ ಆಯುಕ್ತರು ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[08/07, 7:18 PM] Gurulingswami. Holimatha. Vv. Cm: *ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಪ್ರವಾಹ ಹಿನ್ನಲೆ: ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ*
*ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಆದ್ಯತೆ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಜುಲೈ 8-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. 
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ, ಮಲೆನಾಡು, ಹಾಗೂ ಬಯಲು ಸೀಮೆಯಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದ್ದು, ಜನ, ಜಾನುವಾರುಗಳಿಗೆ ತೊಂದರೆಯಾಗಿದೆ. 13 ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಇದ್ದು, 17 ತಾಲ್ಲೂಕುಗಳಲ್ಲಿ ಮಳೆ ಹಾವಳಿ ಹೆಚ್ಚಾಗಿದೆ. ಇದುವರೆಗೂ ಜೂನ್ 1 ರಿಂದ ಈವರೆಗೆ 12 ಜನ ಮೃತಪಟ್ಟಿದ್ದು, 65 ಜಾನುವಾರುಗಳಿಗೆ ಜೀವಹಾನಿಯಾಗಿದೆ ಎಂದು ತಿಳಿಸಿದರು.  
ಉಸ್ತುವಾರಿ ಸಚಿವರೊಂದಿಗೆ ವೀಡಿಯೋ ಸಂವಾದದಲ್ಲಿ ಭೂ-ಕುಸಿತ ಉಂಟಾಗಿರುವ ಸ್ಥಳಗಳಲ್ಲಿ ಕೆಳಭಾಗದಲ್ಲಿರುವ ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಕೆಲವೆಡೆಗಳಲ್ಲಿ ಸಂಪೂರ್ಣ ಭೂಕುಸಿತವಾಗಿಲ್ಲ, ಭೂಮಿ ಸ್ವಲ್ಪ ಕುಸಿದಿದ್ದು ರಸ್ತೆ ಸಂಚಾರ ಸ್ಥಗಿತವಾಗಿದೆ. ಅದನ್ನು ಟಾಸ್ಕ್ ಪೋರ್ಸ್ ಗಳನ್ನು ರಚಿಸಿ ಕೂಡಲೇ  ತೆರವುಗೊಳಿಸಲು ಸೂಚನೆ ನೀಡಲಾಯಿತು ಎಂದರು.
ಮನೆ ಹಾನಿಯಾದಲ್ಲಿ ಭಾಗಶಃ ಅಥವಾ ನೀರು ನುಗ್ಗಿರುವ ಮನೆಗಳಿಗೆ ಮೊದಲು 10 ಸಾವಿರ ತುರ್ತು ಪರಿಹಾರ ಕೂಡಲೇ ನೀಡುವಂತೆ ಆದೇಶ ಮಾಡಿದ್ದು,  ನಂತರ ಹಾನಿ ಪ್ರಮಾಣವನ್ನು ವರದಿಯನ್ನು 2-3 ದಿನಗಳಲ್ಲಿ ಜಿಲ್ಲಾ ಪಂಚಾಯತ್ ನ ಇಂಜಿನಿಯರ್ ಗಳಿಂದ ಪಡೆದು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
ಮಳೆ ಪ್ರಮಾಣ ಕಡಿಮೆಯಾದ ನಂತರ ಬೆಳೆ ಹಾನಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಲು ಪಡೆದು ಪರಿಹಾರ ನೀಡುವಂತೆ ಸೂಚಿಸಲಾಯಿತು.
ಎಸ್.ಡಿ.ಆರ್.ಎಫ್/ಎನ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳವಂತೆ,  ಸೂಚಿಸಲಾಯಿತು.
ಮಳೆಯಿಂದ ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ರಸ್ತೆ ದುರಸ್ತಿಯನ್ನು ಆದ್ಯತೆ ಮೇರೆಗೆ ಕೈಗೊಂಡು ಸಂಚಾರ ಸಂಪರ್ಕ ಸಮರ್ಪಕವಾಗಿರುವಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದು, ಹಾನಿಯಾದ ಪ್ರಮಾಣದ ವರದಿಯನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ಸರಬರಾಜು ಅಡಚಣೆಯಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ. 
ಕಡಲ ಕೊರೆತ ಆದಲ್ಲಿ ತುರ್ತು ಕಾಮಗಾರಿ ಕೂಡಲೇ ಕೈಗೊಂಡು ಹೆಚ್ಚಿನ ಹಾನಿಯಾಗದಂತೆ ತಾತ್ಕಾಲಿಕವಾಗಿ ಕಡಲ ಕೊರೆತ ಆಗದಂತೆ ಕ್ರಮವಹಿಸಬೇಕು. ರಸ್ತೆಗಳು ಕೊರೆತ ಆಗಿದ್ದು, ಅವುಗಳನ್ನು ಪುನಃಸ್ಥಾಪಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ತಿಳಿಸಲಾಗಿದೆ. ಈ ಬಾರಿ ಸರ್ಕಾರವು ಶಾಶ್ವತವಾಗಿ ಕಡಲ ಕೊರೆತ ಆಗದಂತೆ ಒಂದು ವಿಶೇಷ ತಂತ್ರಜ್ಞಾನದ ಮೂಲಕ ತೆಡೆದು ಇನ್ನು ಮುಂದೆ ಶಾಶ್ವತ ಕಡಲ ಕೊರೆತ ಆಗದ ರೀತಿಯಲ್ಲಿ ಕ್ರಮವಹಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದೊಂದಿಗೆ  ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ರಚಿಸಿ, ನೇರ ಸಂಪರ್ಕ ಹೊಂದಲು ತಿಳಿಸಲಾಗಿದೆ. ನಿಯಂತ್ರಣ ಕೊಠಡಿ ಸ್ಥಾಪಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸೂಚಿಸಲಾಯಿತು. ಪೊಲೀಸರು ಸೇವೆಗೆ ದಿನದ 24 ಗಂಟೆಯೂ ಲಭ್ಯರಿರಬೇಕು.
ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಒಟ್ಟು 735.59 ಕೋಟಿ ರೂ. ಲಭ್ಯವಿದೆ. 
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು ಬೀದರ್ ಜಿಲ್ಲೆಯಲ್ಲಿ ರೇಡ್ ಅಲರ್ಟ್, ಕರಾವಳಿ ಪ್ರದೇಶ ಹಾಗೂ  ಹಾವೇರಿ ಜಿಲ್ಲೆಯಲ್ಲಿ ಆರೋಜ್ ಅಲರ್ಟ್ ಇದ್ದು, ಒಟ್ಟಾರೆ ವ್ಯಾಪಕವಾಗಿ  ಮುಂದಿನ 3-4 ದಿನಗಳಲ್ಲಿ  ಮಳೆಯಾಗುವಂತ ಸೂಚನೆಯನ್ನು ಹವಾಮಾನ  ಇಲಾಖೆಯವರು ತಿಳಿಸಿರುತ್ತಾರೆಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಕೊಯ್ನಾ ಡ್ಯಾಂ ಹಾಗೂ ಹೊರ ರಾಜ್ಯದ ಇತರೆ ಡ್ಯಾಂ ಗಳಲ್ಲಿ ಪೂರ್ಣ ಪ್ರಮಾಣದ ನೀರು ತುಂಬಿರುವುದಿಲ್ಲ. ರಾಜ್ಯದ ಘಟಪ್ರಭ, ಮಲಪ್ರಭ, ಹಿಡ್ಕಲ್ ಡ್ಯಾಂ ಹಾಗೂ ನವಿಲತೀರ್ಥದಲ್ಲಿ ಶೇಕಡಾ 50ರಷ್ಟು ಪ್ರಮಾಣ ನೀರು ತುಂಬಿದ್ದು, ಇನ್ನೂ ಶೇಕಡಾ 50ರಷ್ಟು ನೀರು ತುಂಬಲು ಬಾಕಿ ಇದೆ. ಹೀಗಾಗಿ ಹೊರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಎಚ್ಚರವಹಿಸುವಂತೆ ಸೂಚನೆ ನೀಡಿದ್ದು, ಅಂತರರಾಜ್ಯದ ಸಮಿತಿ ಇದ್ದು, ಹೊರ ರಾಜ್ಯ ಮತ್ತು ರಾಜ್ಯ ನೀರಾವರಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು

ಜೂನ್ 1 ರಿಂದ ಈವರೆಗೆ ಹಾನಿ ವಿವರ
ಕ್ರ.ಸಂ. ವಿವರ ಹಾನಿಯ ಪ್ರಮಾಣ (ಜೂನ್ 1ರಿಂದ ಈವರೆಗೆ)
1. ಪ್ರವಾಹಪೀಡಿತ ಜಿಲ್ಲೆಗಳ ಸಂಖ್ಯೆ 13
2. ತಾಲ್ಲೂಕುಗಳು 17
3. ಗ್ರಾಮಗಳು 37
4. ಬಾಧಿತ ಜನಸಂಖ್ಯೆ 495
5. ರಕ್ಷಿಸಲಾದ ಜನರ ಸಂಖ್ಯೆ 90
6. ತೆರೆಯಲಾಗಿರುವ ಕಾಳಜಿ ಕೇಂದ್ರಗಳು 4
7. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರ ಸಂಖ್ಯೆ 90
8. ಮಾನವ ಜೀವ ಹಾನಿ 12
9. ಜಾನುವಾರು ಜೀವಹಾನಿ 65
[08/07, 7:21 PM] Gurulingswami. Holimatha. Vv. Cm: *ವಿಜಯಪುರ ಜಿಲ್ಲೆಯಲ್ಲಿ ಶೈತ್ಯ ಸಂಗ್ರಹ ಸ್ಥಾಪನೆ: ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಜುಲೈ 8-
ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ಸೃಜಿಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರಟವೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಅವರು ಇಂದು ದ್ರಾಕ್ಷಿ ಬೆಳೆಗಾರರಿಗೆ ವಿವಿಧ ಸೌಲಭ್ಯ ಒದಗಿಸುವ ಕುರಿತು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ವಿಜಯಪುರ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ 1 ಲಕ್ಷ ಟನ್ ದ್ರಾಕ್ಷಿ ಉತ್ಪಾದನೆಯಾಗುತ್ತಿದ್ದು, ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ಅಗತ್ಯ ಎಂದು ದ್ರಾಕ್ಷಿ ಬೆಳೆಗಾರರು ತಿಳಿಸಿದರು. 
ಮಂಡಳಿಯ ಹೆಸರಿನಲ್ಲಿ ವೈನ್ ಪಾರ್ಕಿನಲ್ಲಿ ಒಟ್ಟು 141.28 ಎಕರೆ ಜಮೀನು ಇದ್ದು, ಇದರಲ್ಲಿ ಶೈತ್ಯ ಸಂಗ್ರಹಾಗಾರ ನಿರ್ಮಿಸಲು 6 ಎಕರೆ ಜಮೀನು ಗುರುತಿಸಲಾಗಿದೆ. ಇದಲ್ಲದೆ ದ್ರಾಕ್ಷಿ ಬೆಳೆಗಾರರ ಸಂಘಗಳ ಮೂಲಕವೂ ಶೈತ್ಯ ಸಂಗ್ರಹಾಗಾರ ನಿರ್ಮಿಸಲು ಹಾಗೂ ಈ ಸಂಘಗಳಿಗೆ ಎನ್.ಎಚ್.ಎಂ. ಅಡಿ ಸಹಾಯಧನ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಸಿದ್ರಾಕ್ಷಿಗೆ ಮಾರುಕಟ್ಟೆ ಸೌಲಭ್ಯ ವಿಸ್ತರಿಸಲು ರೆಫ್ರಿಜರೇಟರ್ ಕಂಟೇನರ್ ಇರುವ ರೈಲು ಸೇವೆ ಒದಗಿಸಲು ರೈಲ್ವೆ ಸಚಿವಾಲಯದೊಂದಿಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದರೊಂದಿಗೆ ಒಣದ್ರಾಕ್ಷಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಹಾಗೂ ರಫ್ತು ಉತ್ತೇಜನಕ್ಕೆ ಕ್ರಮ ವಹಿಸಲಾಗುವುದು. ಬ್ರಾಂಡಿಂಗ್, ಪ್ಯಾಕೇಜಿಂಗ್ ಮೊದಲಾದ ವಿಷಯಗಳಲ್ಲಿ ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದರೊಂದಿಗೆ ವೈನ್ ತಯಾರಿಕೆಗೆ ಹಾಗೂ ಮಾರಾಟಕ್ಕೆ ಉತ್ತೇಜನ ನೀಡಲು ಹಾಗೂ ರಫ್ತು ಅವಕಾಶ ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ವೈನ್ ಪಾರ್ಕ್ನಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ಕೆರೆಯಲ್ಲಿ ಬೋಟಿಂಗ್ ಮತ್ತಿತರ ಮನರಂಜನೆ ಹಾಗೂ ರೆಸಾರ್ಟ್ ನಿರ್ಮಾಣಕ್ಕೆ ಡಿ.ಪಿ.ಆರ್. ಸಿದ್ಧಪಡಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಸೂಚಿಸಲಾಯಿತು.
ನೂತನವಾಗಿ ನಿರ್ಮಾಣವಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣದಲ್ಲಿ ಕಾರ್ಗೊ ವಿಮಾನ ಸೇವೆ ಒದಗಿಸಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆನಂದ್ ಸಿಂಗ್, ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ್ ಕೇವಲ್ ಚಂದ್ ಬನ್ಸಾಲಿ, ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ತೋಟಗಾರಿಕಾ ಇಲಾಖೆಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[08/07, 7:21 PM] Gurulingswami. Holimatha. Vv. Cm: *ಬೆಂಗಳೂರಿನಲ್ಲಿಯೇ ಏರ್ ಕ್ರಾಫ್ಟ್  ಉತಾದನೆಯಾಗುವ ದಿನಗಳು ದೂರವಿಲ್ಲ.:*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 08: ಬೆಂಗಳೂರಿನಲ್ಲಿಯೇ ಏರ್ ಕ್ರಾಫ್ಟ್ ಉತಾದನೆಯಾಗುವ ದಿನಗಳು ದೂರವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಫ್ರಾನ್ ಗ್ರೂಪ್ ಹಾಗೂ ಹಿಂದೂಸ್ಥಾನ್ ಏರೋನಾಟಿಕ್ಸ್  ಲಿಮಿಟೆಡ್  ಸಹಯೋಗದಲ್ಲಿ ಏರ್ ಕ್ರಾಫ್ಟ್ ಇಂಜಿನ್‍ಗಳ ಘಟಕವನ್ನು ಉದ್ಘಾಟಸಿ ಮಾತನಾಡಿದರು.

ನಮ್ಮ ಬದುಕನ್ನು ಸುಲಭಗೊಳಿಸಲು ತಂತ್ರಜ್ಞಾನ  ಬಹು ಮುಖ್ಯ ಸಾಧನ.  ಏರೋಸ್ಪೇಸ್ ತಂತ್ರಜ್ಞಾವೂ  ಕಾಲಕ್ಕೆ ತಕ್ಕಂತೆ ವಿಕಸನಗೊಳ್ಳುತ್ತಾ ಬಂದಿದೆ. ತಂತ್ರಜ್ಞಾನ ವಿಶ್ವ ಯುದ್ಧದ ನಂತರ ಅಭಿವೃದ್ಧಿಗೊಂಡಿತು. ಏರ್‍ಕ್ರಾಫ್ಟ್ ಒಂದರಲ್ಲಿಯೇ ಸಾಕಷ್ಟು ತಂತ್ರಜ್ಞಾನವನ್ನು ಒಳಗೊಂಡಿರುತ್ತದೆ. ಸಫ್ರಾನ್ ಮತ್ತು ಹೆಚ್.ಎ.ಎಲ್ ಪೈಪ್‍ಲೈನ್ ಗಳ ಜೊತೆ ಇಂಜಿನ್ ಉತ್ಪಾದನೆಯನ್ನೂ ಮಾಡಲು ಸಾಧ್ಯವಿದೆ.  ಇದೊಂದು ಹೆಮ್ಮೆಯ ಗಳಿಗೆ. ಹೆಚ್.ಎ.ಎಲ್ ಮತ್ತು ಸಫ್ರಾನ್ 65 ವರ್ಷಗಳ ಸುದೀರ್ಘ ಅವಧಿಯ ಸಹಯೋಗ ಫಲಪ್ರದವಾಗಿದೆ ಎಂದರು.

ಏರೋಸ್ಪೇಸ್ ತಂತ್ರಜ್ಞಾನದಲ್ಲಿ ಬೆಂಗಳೂರು ಈಗಾಗಲೇ ಮುಂಚೂಣಿಯಲ್ಲಿದೆ.  ಏರ್‍ಕ್ರಾಫ್ಟ್ ಇಂಜಿನ್‍ಗಳ ಸೌಲಭ್ಯಗಳ ಘಟಕ ಏರೋಸ್ಪೇಸ್ ತಂತ್ರಜ್ಞಾನದ ಅಭಿವೃದ್ಧಿಗೆ ಇನ್ನಷ್ಟು ಗಟ್ಟಿತಳಪಾಯವನ್ನು ಹಾಕಲಿದೆ ಎಂದರು. ಹೆಚ್.ಎ.ಎಲ್.  ಬೆಂಗಳೂರಿನಲ್ಲಿ  ಮೊದಲಿಗೆ ಪ್ರಾರಂಭವಾದ ಸರ್ಕಾರಿ ಸ್ವಾಮ್ಯದ ಉದ್ದಿಮೆ. ಇದರೊಂದಿಗೆ ಸ್ವಾತಂತ್ರ್ಯಕ್ಕೂ ಮುನ್ನ ಹಾಗೂ ನಂತರದಲ್ಲಿ  ಎನ್.ಎ.ಎಲ್, ಇಸ್ರೋ, ಹೆಚ್.ಎಂ.ಟಿ , ಬಿಇಎಂಎಲ್ ಮುಂತಾದ ಪಿ.ಎಸ್.ಯುಗಳ ಸ್ಥಾಪನೆ ಬೆಂಗಳೂರಿಗೆ ತಂತ್ರಜ್ಞಾನವನ್ನು ಪರಿಚಯಿಸಿತು. ದೇಶ ಹಾಗೂ ಮಾನವನ ಬದುಕಿನ ಅಭಿವೃದ್ಧಿಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರವನ್ನು ವಹಿಸುತ್ತದೆ 
ಎಂದರು.

*ಪ್ರಧಾನಿಗಳ ಆತ್ಮನಿರ್ಭರ್ ಭಾರತದ ಕನಸು ನನಸಾಗುತ್ತಿದೆ*
ವಿಶ್ವದ ಪ್ರಮುಖ ಏರ್‍ಕ್ರಾಫ್ಟ್ ಸಂಸ್ಥೆಗಳು ಬೆಂಗಳೂರಿನಲ್ಲಿ ಉತ್ಪಾದನೆಯನ್ನು ಪ್ರಾರಂಭಿಸುವಂತಾಗಬೇಕು.  ಏರ್ ಕ್ರಾಫ್ಟ್ ಗಳ ಬಿಡಿ ಭಾಗಗಳು ಇಲ್ಲಿ ಉತ್ಪಾದನೆಯಾಗುವುದರಿಂದ ಏರ್‍ಕ್ರಾಫ್ಟ್ ನ್ನು ಉತ್ಪಾದಿಸುವುದು ಕಷ್ಟಸಾಧ್ಯವೇನಲ್ಲ.  ಹೆಚ್.ಎ.ಎಲ್. ತನ್ನ ವ್ಯಾಪ್ತಿಯನ್ನು ದೊಡ್ಡ ಮಟ್ಟದಲ್ಲಿ ವಿಸ್ತರಿಸುತ್ತಿದೆ. ಇಂಟೆಲ್ ನೊಂದಿಗೆ ಸೆಮಿಕಂಡಕ್ಟರ್‍ಗಳ ಉತ್ಪಾದನೆಗಾಗಿ ಕರ್ನಾಟಕ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಸೆಮಿಕಂಡಕ್ಟರ್ ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿರುವ ಏಕೈಕ ರಾಜ್ಯ ಕರ್ನಾಟಕ.  ಇದರ ಹಿಂದಿನ ಶಕ್ತಿ ಹೆಚ್.ಎ.ಎಲ್. ಆಗಿದೆ. ಸೆಮಿಕಂಡಕ್ಟರ್ ಉತ್ಪಾದನೆ ರಾಜ್ಯದಲ್ಲಿ ಬಹು ದೊಡ್ಡ ಬದಲಾವಣೆಯನ್ನು ತರಲಿದೆ.  ಜಿನೋಮ್ಯಾಟಿಕ್ಸ್  ನಿಂದ ಏರೋಸ್ಪೇಸ್ ವರೆಗೆ  ಎಲ್ಲಾ ವಲಯದಲ್ಲಿಯೂ ಬೆಂಗಳೂರು ಮುಂಚೂಣಿಯಲ್ಲಿದೆ.    ನವಕರ್ನಾಟದಿಂದ ನವ ಭಾರತ ನಿರ್ಮಾಣ ನಮ್ಮ ಗುರಿ.  ದೇಶದ ಆರ್ಥಿಕ ಬೆಳವಣಿಯಲ್ಲಿ ಕರ್ನಾಟಕ ಮಹತ್ವದ ಪಾತ್ರವನ್ನು ವಹಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರ  ಆತ್ಮನಿರ್ಭರ್ ಭಾರತದ ಕನಸು ಈಡೇರುತ್ತಿದೆ.  ಡಿ.ಆರ್.ಡಿ.ಒ ಮತ್ತು ಇತರ ರಕ್ಷಣಾ ಸಂಸ್ಥೆಗಳು ಶೇ 60 ರಷ್ಟು ರಫ್ತನ್ನು ಮೇಕ್ ಇನ್ ಇಂಡಿಯಾ ಮೂಲಕ ಕಡಿಮೆ ಮಾಡಿದ್ದಾರೆ. ಸ್ಥಳೀಯ ಪ್ರತಿಭೆಗಳ ಬಳಕೆಗೂ ಇದರಿಂದ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[08/07, 8:53 PM] Gurulingswami. Holimatha. Vv. Cm: *ಕನ್ನಡಕ್ಕೆ ರೋಚಕ ಇತಿಹಾಸವಿದೆ, ಗಡಿ ಆಚೆಗೆ ಕನ್ನಡದ ವಿಶ್ಲೇಷಣೆಯಾಗಬೇಕು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜುಲೈ 08: ಗಡಿ ಆಚೆಗೆ ಕನ್ನಡದ ವಿಶ್ಲೇಷಣೆ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು  ರವೀದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕನ್ನಡ ರಥ- ಕಾಯಕ ಪಥ ಪುಸ್ತಕ ಲೋಕಾರ್ಪಣೆ ಹಾಗೂ  ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮೂರು ದಶಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾತೃ ಭಾಷೆ ಸದಾ ಅಭಿವೃದ್ಧಿಯಾದಾಗ ಕನ್ನಡ ಮತ್ತು ಕನ್ನಡಿಗರ ಬದುಕು ಬೆಳೆಯುತ್ತದೆ.  ಈ ಅರಿವಿನಿಂದ ನಾವು ಕೆಲಸ ಮಾಡಬೇಕು.  ಇತರೆ ಭಾಷೆಗಳನ್ನು ಕಲಿಯುವುದು ಬಳಕೆ ಮಾಡುವುದು ದೊಡ್ಡ ತಪ್ಪು ಎನ್ನುವುದಕ್ಕಿಂತ ನಮ್ಮ ಭಾಷೆಯನ್ನು ಎಷ್ಟು ಬಳಸಿ ಹಾಗೂ ಬೆಳೆಸುತ್ತೇವೆ ಎನ್ನುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು.

 ಗೋಕಾಕ್ ಚಳವಳಿಯಿಂದ ಕನ್ನಡದಲ್ಲಿ ದೊಡ್ಡ ಬದಲಾವಣೆ  ಆಗಿದೆ. ಕನ್ನಡ ನಾಡಿನ ಜನಸಾಮಾನ್ಯರು, ವಿದ್ಯಾರ್ಥಿಗಳು, ರೈತರು, ಸಾಹಿತಿಗಳು, ಕೂಲಿಕಾರ್ಮಿಕರು ಎಲ್ಲರೂ ಚಳವಳಿಗೆ ಧುಮುಕಿದರು. ಕನ್ನಡದ ಪ್ರಜ್ಞೆ ಕಾಯ್ದುಕೊಳ್ಳಲು ಕನ್ನಡ ಕಾವಲು ಸಮಿತಿ ಪಾಟೀಲ ಪುಟ್ಟಪ್ಪನವರ ಅಧ್ಯಕ್ಷತೆಯಲ್ಲಿ ನೇಮಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವಾಗಿ ರೂಪಾಂತರವಾಯಿತು.
ಕನ್ನಡದ ಅಭಿವೃದ್ಧಿಗೆ ದೊಡ್ಡ ಶಕ್ತಿ ಸಿಕ್ಕಿದೆ ಎಂದು ನುಡಿದರು. 

ಅದರ ಅಭಿವೃದ್ಧಿಯ ಕೆಲಸ 3 ದಶಕಗಳಲ್ಲಿ ಆಡಳಿತದಲ್ಲಿ, ಸಾಮಾಜಿಕವಾಗಿ, ಸಾಹಿತ್ಯದಲ್ಲಿ ಬಹಳಷ್ಟು ಕೆಲಸವಾಗಿದೆ. ಆದರೂ ಕನ್ನಡಕ್ಕೆ ಅಪಾಯವಿದೆ ಎನ್ನುವ ಭಯ ಕಾಡುತ್ತಿದೆ. ಬೇರೆ ಭಾಷೆಗಳ ಆಕ್ರಮಣ ಇದಕ್ಕೆ ಕಾರಣ ಎಂದು ನುಡಿದರು. 

ನಮ್ಮದು ಸುಸಂಸ್ಕೃತ ಭಾಷೆ. ಬೈಯುವಾಗಲೂ ಅತ್ಯಂತ ಸೂಕ್ಷ್ಮವಾಗಿ ಪದಗಳನ್ನು ಬಳಸಲಾಗುತ್ತದೆ.  ನಮ್ಮದು ಅತಿ ಸಹಿಷ್ಣುತೆಯ ಸಂಸ್ಕೃತಿ. ಅತಿ ಎನ್ನುವುದನ್ನು ಬಿಟ್ಟು ಸಹಿಷ್ಣುತೆಯನ್ನು ಮಾತ್ರ ಇಟ್ಟುಕೊಳ್ಳಬೇಕು.  ಸಹಿಷ್ಣುತೆಯಿಲ್ಲದವರು ಅದನ್ನು ರೂಢಿಸಿಕೊಂಡಾಗ ಭಾಷೆ, ಭಾಷೆಗಳ ಮಧ್ಯೆ ಸಾಮ್ಯ, ಬಾಂಧವ್ಯ ಉಂಟಾಗುತ್ತದೆ. ಆದರೆ ಇದು ಸುಲಭವಲ್ಲ ಎಂದರು.

ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಕನ್ನಡವನ್ನು ಉಳಿಸಿ ಬೆಳೆಸಲು ಬದುಕಿನ ಪ್ರತಿ ಆಯಾಮದಲ್ಲಿಯೂ ಕನ್ನಡವನ್ನು ಬಳಕೆ ಮಾಡಬೇಕು.  
ಕನ್ನಡದ ಬಗ್ಗೆ ನಮ್ಮ ಮನೋಭಾವ, ಧೋರಣೆ  ನಿತ್ಯವೂ ಜಾಗೃತವಾಗಿರಬೇಕು. ಕನ್ನಡದ ಸಾಹಿತ್ಯ ಭಂಡಾರ ಬಹಳ ದೊಡ್ಡದಿದೆ. ಅದನ್ನು ಸರಿಯಾದ ರೀತಿಯಲ್ಲಿ ಪ್ರತಿಬಿಂಬಿಸಬೇಕು. ಕನ್ನಡದ ಸಾಹಿತ್ಯವನ್ನು  ಕನ್ನಡದಲ್ಲಿ ಪ್ರಚಾರ ಮಾಡಲು ನಾವು ತಿಣುಕಾಡುವ ಸ್ಥಿತಿ ಇದೆ. ಬೇರೆ ಭಾಷೆಯಲ್ಲಿ ಒಂದು ಪುಸ್ತಕ ಬಂದರೆ ಇಂಗ್ಲಿಷ್‍ಗೆ ಅನುವಾದವಾಗಿ ಪ್ರಚಾರ ದೆಹಲಿಯಲ್ಲಿ ಆಗುತ್ತದೆ. ನಮ್ಮಲ್ಲಿ  ಎಲ್ಲ ವಿಚಾರಗಳಲ್ಲಿ ಉತ್ಕೃಷ್ಟ ಸಾಹಿತ್ಯವಿದೆ. ನಮಗೆ ಅತ್ಯಂತ ರೋಚಕವಾದ ಇತಿಹಾಸವಿದೆ. ನಾವು ಸ್ಥಳೀಯ ಇತಿಹಾಸವನ್ನು ಮರೆತು ಬಿಟ್ಟಿದ್ದೇವೆ. ಮೈಲಾರ ಮಹಾದೇವಪ್ಪ, ಕನ್ನೇಶ್ವರ ರಾಮ, ವೀರ ಸಿಂದೂರ ಲಕ್ಷ್ಮಣ ಸ್ವತಂತ್ರ ಹೋರಾಟದ ಸ್ಥಳೀಯ ನಾಯಕರು. ಇವರ ಬಗ್ಗೆ ನಾವು ಚರ್ಚೆ ಮಾತನಾಡುವುದರಿಂದ ಅವರ ವ್ಯಕ್ತಿತ್ವದ ಜೊತೆಗೆ ಭಾಷೆಯ ಶ್ರೀಮಂತಿಕೆಯೂ ಆಗುತ್ತದೆ.

ಬದುಕಿನ ಮೌಲ್ಯವನ್ನು ಹೇಳುವಂತಹ ಅದ್ಭುತವಾದ ವಚನ ಸಾಹಿತ್ಯ, ದಾಸ ಸಾಹಿತ್ಯ ನಮ್ಮಲ್ಲಿದೆ. ನಮ್ಮ ಭಾಷೆಯಲ್ಲಿ ನಮ್ಮದೆಯಾದ ಶಬ್ದಕೋಶವಿದೆ. ಬೇರೆ ಭಾಷೆಗಳಲ್ಲಿ ಅಭಿವ್ಯಕ್ತ ಮಾಡುವ ಶಕ್ತಿ ಇಲ್ಲದೇ ಸಂಸ್ಕೃತವನ್ನು ಹೆಚ್ಚು ಬಳಕೆ ಮಾಡಲಾಗುತ್ತದೆ. ಇದು ಬೇರೆ ಭಾಷೆಗಳಿಗೂ ನಮ್ಮ ಭಾಷೆಗೂ ಇರುವ ವ್ಯತ್ಯಾಸ. ವಿದೇಶಗಳಲ್ಲಿರುವ ನಮ್ಮ ಕನ್ನಡಿಗರಿಗೆ ಕನ್ನಡದ ಮೇಲೆ ಬಹಳಷ್ಟು ಪ್ರೀತಿ, ಅಭಿಮಾನವಿದೆ. ಅಮೆರಿಕದಲ್ಲಿ ಕನ್ಮಡ ಸಾಹಿತ್ಯ ರಚನೆಯಾಗಿದೆ. ಅಲ್ಲಿನ ಪುಸ್ತಕಗಳನ್ನು ಓದಿದಾಗ ನನಗೆ ಅಚ್ಚರಿ ಆಗಿತ್ತು. ಬೇರೆ ಬೇರೆ ನಾಯಕರು ಕನ್ನಡದ ಬಗ್ಗೆ ಬಹಳಷ್ಟು ಪ್ರೀತಿ ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ವ್ಯಾಪಕವಾಗಿ ಬೆಳೆಯಲಿ. ಕನ್ನಡದ ಅಭಿವೃದ್ಧಿ, ಬೆಳವಣಿಗೆಗೆ ನಮ್ಮ ಸರ್ಕಾರ ಸದಾಕಾಲ ಇರುತ್ತದೆ. ಇನ್ನಷ್ಟು ಉತ್ಕೃಷ್ಟ ಸಾಹಿತ್ಯ ರಚನೆಯಾಗಲಿ ಎಂದು ಆಶಿಸಿದರು.

 ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಜೆ.ಸಿ ಮಾಧುಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಮತ್ತು ಇತರರು ಉಪಸ್ಥಿತರಿದ್ದರು.
[08/07, 11:10 PM] Gurulingswami. Holimatha. Vv. Cm: ಅಮರನಾಥ ಯಾತ್ರೆ
ಮೇಘ ಸ್ಫೋಟದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 

ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ  12 ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡದಿದ್ದಾರೆ.

 ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಟ್ರೀಟ್ ನಲ್ಲಿ ಪ್ರಾರ್ಥಿಸಿದ್ದಾರೆ.

Post a Comment

Previous Post Next Post