KPCC ಸುದ್ದಿ, ಡಿಕೆಶಿ ಗರಂ

[23/07, 11:38 AM] Ravi Gowda. Kpcc. official: *ಪಕ್ಷದ ಮೇಲೆ ಆಸಕ್ತಿ ಇದ್ದರೆ ಎಲ್ಲ ನಾಯಕರು ತಮ್ಮ ಸಮುದಾಯಗಳನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಿ: ಡಿ.ಕೆ. ಶಿವಕುಮಾರ್*

*ಬೆಂಗಳೂರು:*

‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ’ ಎಂದರು.

ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಹಾಗೂ ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ’ ಎಂದು ತಿಳಿಸಿದರು.

ಕೋಲಾರದಲ್ಲಿ ಬೇರೆ, ಬೇರೆ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕೋಲಾರದಲ್ಲಿ ಯಾವುದೇ ಬಣ ಇಲ್ಲ. ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಸಿಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದೇವೆ. ನಾವು ಎಲ್ಲ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲು ಸೂಚಿಸಿದ್ದು, ಅವರು ಮಾಡಿದ್ದಾರೆ’ ಎಂದು ಉತ್ತರಿಸಿದರು. 

ನಾನು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ಹೋಗುವುದಿಲ್ಲ, ನನ್ನದೇ ಆದ ಪ್ರತ್ಯೇಕ ಗುರುತು ಇದೆ ಎಂಬ ಎಂ.ಬಿ. ಪಾಟೀಲ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ’ ಎಂದರು.
[23/07, 2:30 PM] Ravi Gowda. Kpcc. official: *ಸಚಿವ ಅಶ್ವತ್ಥ ನಾರಾಯಣ ಅವರ ಒತ್ತಡದ ಮೇರೆಗೆ ಕರ್ನಾಟಕ ಮುಕ್ತ ವಿವಿಯ ಹಣವನ್ನು ಕಾನೂನು ಬಾಹೀರವಾಗಿ ಬೇರೆಡೆಗೆ ವರ್ಗಾವಣೆ; ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ*

*ಬೆಂಗಳೂರು:*

‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ ತನಿಖೆ ಆಗಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ಪಕ್ಷದ ಕಚೇರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರ ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಸಂವಹನ ವಿಭಾಗದ ಸಂಜೋಜಕರಾದ ಜಿ.ಸಿ ರಾಜು ಹಾಗೂ ಕಾನೂನು ವಿಭಾಗದ ಉಪಾಧ್ಯಕ್ಷರಾದ ದಿವಾಕರ್ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

‘ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವು 1992ರ ಕಾಯಿದೆ ಅಡಿಯಲ್ಲಿ ರಚನೆಯಾಗಿದ್ದು, ಕಲಂ 4ರ ಅಡಿಯಲ್ಲಿ ತನ್ನ ಧೈಯೋದ್ದೇಶಗಳ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು. ಈ ವಿಶ್ವ ವಿದ್ಯಾಲಯಕ್ಕೆ ಮಾನ್ಯ ರಾಜ್ಯಪಾಲರು ಕುಲಾಧಿಪತಿಗಳಾಗಿದ್ದು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಡಾ|| ಅಶ್ವಥ್ ನಾರಾಯಣ್‌ರವರು ಸಮ ಕುಲಾಧಿಪತಿಗಳಾಗಿರುತ್ತಾರೆ. ಡಾ|| ಎಸ್‌.ವಿದ್ಯಾಶಂಕರ್‌ರವರು ಕುಲಪತಿಗಳಾಗಿರುತ್ತಾರೆ.

ಯಾವುದೇ ವಿಶ್ವವಿದ್ಯಾಲಯ ರಾಜ್ಯ ಸರ್ಕಾರದ ರೀತಿಯಲ್ಲಿ ಅನುದಾನಗಳನ್ನು ಹಂಚಿಕೆ ಮಾಡಲು ಸಾದ್ಯವಿಲ್ಲ. ಸಚಿವರ ಪ್ರಭಾವದ ಕಾರಣಕ್ಕೆ ಈ ವಿಶ್ವವಿದ್ಯಾಲಯದ ಕುಲಪತಿಗಳು ನಿಯಮ ಮೀರಿ ಹಣ ದುರ್ಬಳಕೆ ಮಾಡಿದ್ದು, ಇದರ ಸಂಪೂರ್ಣ ತನಿಖೆ ಆಗಬೇಕಾಗಿರುತ್ತದೆ. ಭೋದಕ ಮತ್ತು ಭೋದಕೇತರ ಸಿಬ್ಬಂದಿಗೆ ಮಾಸಿಕ ಅಂದಾಜು 6 ಕೋಟಿ ರೂಪಾಯಿಗಳ ವೇತನ ಪಾವತಿ ಮಾಡಬೇಕಾಗಿದ್ದು, ವಿದ್ಯಾರ್ಥಿಗಳ ಮೂಲಕ ವಾರ್ಷಿಕ ಸುಮಾರು 15-16 ಕೋಟಿ ಶುಲ್ಕ ಸಂಗ್ರಹವಾಗುತ್ತದೆ. ವಿಶ್ವವಿದ್ಯಾಲಯಕ್ಕೆ ಯಾವುದೇ ಆದಾಯದ ಮೂಲಗಳು ಇಲ್ಲದಿದ್ದರೂ, ಶಿಕ್ಷಣ ಸಚಿವರ ಕಾರಣಕ್ಕಾಗಿ ವಿಶ್ವವಿದ್ಯಾಲಯದಲ್ಲಿ ಠೇವಣಿ ರೂಪದಲ್ಲಿರುವ ಹಣವನ್ನು ದುರ್ಬಳಕೆ ಮಾಡಿ ಅನುದಾನಗಳ ಮೂಲಕ ಹಂಚಲಾಗಿದೆ.

ಉನ್ನತ ಶಿಕ್ಷಣ ಸಚಿವರ ಪ್ರಭಾವದ ಕಾರಣಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ ಸುಮಾರು ಮುನ್ನೂರು ಮಂದಿ ಭೋದಕ ಮತ್ತು ಭೋದಕೇತರ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಪ್ರತೀ ನೇಮಕಾತಿಯಲ್ಲಿ ಉನ್ನತ ಶಿಕ್ಷಣ ಸಚಿವರ ಹೆಸರನ್ನು ಬಳಸಿಕೊಂಡು ಹಣ ಸಂಗ್ರಹ ಮಾಡಲಾಗಿದೆ. ಇಲ್ಲಿನ ಅಕ್ರಮ ತನಿಖೆಗೆ ರಚನೆಯಾಗಿದ್ದ ಜಸ್ಟೀಸ್ ಭಕ್ತವತ್ಸಲ ಸಮಿತಿಯ ವರದಿಯನ್ನು ಕಡೆಗಣಿಸಿ, ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ, ಪದೋನ್ನತಿ ಮಾಡಲಾಗಿದೆ. ವಿಶ್ವವಿದ್ಯಾಲಯದ 01-04-2006ರ ನಂತರ ನೇಮಕವಾದ ಸಿಬ್ಬಂದಿಗೆ ಎನ್‌ಪಿಎಸ್ ಪಿಂಚಣಿ ಯೋಜನೆ ಜಾರಿಗೊಳಿಸಲು ಸಂಪನ್ಮೂಲದ ಕೊರತೆಯಿದೆ ಎಂದು ಹೇಳುವ ವಿಶ್ವವಿದ್ಯಾಲಯ ಅಕ್ರಮದ ಮೂಲಕ ಹಲವಾರು ಕೋಟಿ ರೂಪಾಯಿಗಳನ್ನು ಇತರೆ ಕಾಮಗಾರಿಗೆ ನೀಡಿದೆ.

ಸಚಿವ ಅಶ್ವತ್ಥ್ ನಾರಾಯಣ ಅವರು ತಮ್ಮ ಅಧಿಕಾರ ದುರುಪಯೋಗ ಪಡೆಸಿಕೊಂಡು ಉನ್ನತ ಶಿಕ್ಷಣ ಸಚಿವರು 31-08-2020ರಲ್ಲಿ ಶಿಫಾರಸ್ಸು ಮಾಡುವುದರ ಮೂಲಕ ಮುಕ್ತ ವಿಶ್ವ ವಿದ್ಯಾಲಯದ ಹಣವನ್ನು ಇತರ ಉದ್ದೇಶಗಳಿಗೆ ಬಳಸಲು ಅವಕಾಶ ನೀಡಿರುತ್ತಾರೆ. ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಉಪಕುಲಪತಿಗಳು 17-08-2021ರಲ್ಲಿ ಸುಮಾರು 85 ಕೋಟಿ ರೂಪಾಯಿಗಳ ವಿಶ್ವ ವಿದ್ಯಾಲಯದ ಹಣವನ್ನು ಇತರೆ ಕಾಮಗಾರಿಗಳಿಗೆ ಬಳಸಲು ಸಭೆಯ ಮೂಲಕ ಅನುಮತಿ ನೀಡಿದ್ದು, ಪರಿಷ್ಕೃತ ವೆಚ್ಚದಲ್ಲಿ ಇದು 94ಕೋಟಿ ರೂಪಾಯಿ ಆಗಿರುತ್ತದೆ. ಶಿಕ್ಷಣ ಸಚಿವರ ಪ್ರಭಾವದ ಕಾರಣಕ್ಕಾಗಿ 25ಕೋಟಿ ರೂಪಾಯಿ ಸಂಸ್ಕೃತ ವಿಶ್ವವಿದ್ಯಾಲಯದ ಕಟ್ಟಡಕ್ಕೆ ನೀಡಿರುತ್ತಾರೆ.

ಇನ್ನು ಸಹಕಾರ ಸಂಘಗಳ ನಿಯಮ 17ರ ಅಡಿಯಲ್ಲಿ ನೌಕರರ ನೇಮಕಾತಿಗೆ ಪೂರಕವಾಗಿ ನಡೆಸುವ ಪರೀಕ್ಷೆಯ ಮೇಲ್ವಿಚಾರಣೆಯನ್ನು ಪಡೆದುಕೊಂಡಿರುವ ಮುಕ್ತ ವಿಶ್ವವಿದ್ಯಾಲಯ ರಾಜ್ಯದ ಹಾಲು ಉತ್ಪಾದಕರ ಸಹಕಾರ ಸಂಘಗಳು, ರಾಜ್ಯ ಎಣ್ಣೆ ಬೀಜಕಾಳು ಸಹಕಾರ ಮಹಾಮಂಡಲ ಹಾಗೂ ಇನ್ನಿತರ ಸಹಕಾರಿ ಬ್ಯಾಂಕುಗಳು ಈ ವಿಶ್ವವಿದ್ಯಾಲಯದ ಮೂಲಕ ಪರೀಕ್ಷೆಗಳನ್ನು ನಡೆಸಿದ್ದು, ಎಲ್ಲಾ ಪರೀಕ್ಷಾ ವ್ಯವಸ್ಥೆಯಲ್ಲಿ ಆಕ್ರಮ ನಡೆದಿರುತ್ತದೆ.

22-01-2022ರಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಡಿ.ಕೆ.ಸುರೇಶ್‌ರವರು ಬಮೂಲ್‌ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಆಕ್ರಮ ತನಿಖೆಗೆ ಸರ್ಕಾರಕ್ಕೆ ಪತ್ರ ಬರೆದಿರುತ್ತಾರೆ.

ವಿಶ್ವವಿದ್ಯಾಲಯದಲ್ಲಿ ಸಹಕಾರ ಸಂಸ್ಥೆಗಳ ಪರೀಕ್ಷೆಗಳನ್ನು ನಡೆಸಲು ಲಕ್ಷಾಂತರ ರೂಪಾಯಿಗಳನ್ನು ಪಡೆಯಲಾಗಿದ್ದು, ನಿಯಮಗಳಿಗೆ ವಿರುದ್ಧವಾಗಿ ವಿಶ್ವವಿದ್ಯಾಲಯದ ಸಹಸಂಯೋಜಕರ ಹೆಸರಿನಲ್ಲಿ ಖಾತೆ ತೆಗೆದು ಈ ಹಣವನ್ನು ಬಳಸಲಾಗಿದೆ. ಲಕ್ಷಾಂತರ ರೂಪಾಯಿಗಳನ್ನು ನಗದು ರೂಪದಲ್ಲಿ ಈ ಖಾತೆಯಿಂದ ಪಡೆಯುವ ಮೂಲಕ ಹಣ ಅಕ್ರಮ ವರ್ಗಾವಣೆ (ಮನಿಲಾಂಡ್ರಿಂಗ್) ನಡೆಸಲಾಗಿದ್ದು, ತಕ್ಷಣ ತನಿಖೆಯಾಗಬೇಕಾಗಿದೆ.

ಇನ್ನು ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜ್ ನೌಕರರಾಗಿದ್ದ ಡಾ|| ವಿದ್ಯಾಶಂಕರ್‌ರವರನ್ನು ಶಿಕ್ಷಣ ಸಚಿವರ ಪ್ರಭಾವದ ಕಾರಣಕ್ಕೆ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳನ್ನಾಗಿ ನೇಮಿಸಿ, ಇವರ ಮೇಲೆ ಅನೇಕ ಅಕ್ರಮದ ದೂರುಗಳು ಬಂದರೂ 06-04-2022ರಲ್ಲಿ ಇವರನ್ನು ಒಂದು ವರ್ಷದ ಅವಧಿಗೆ ಮುಂದುವರೆಸಲಾಗಿದೆ. ಇವರ ಮುಂದುವರಿಕೆಯ ಅಕ್ರಮದಲ್ಲಿ ಸಚಿವರು ಮತ್ತು ರಾಜ್ಯಪಾಲರ ಕಛೇರಿಯೂ ಭಾಗಿಯಾಗಿರುತ್ತಾರೆ.

21-02-2022ರಲ್ಲಿ ನವದೆಹಲಿಯ ಯುಜಿಸಿ ಸಂಸ್ಥೆಯು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಈ ವಿಶ್ವವಿದ್ಯಾಲಯದ ಕುಲಪತಿಗಳ ಮೇಲೆ ಬಂದಿರುವ ಅಕ್ರಮಗಳ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಿರುತ್ತದೆ. ಅದೇ ರೀತಿ ಸಹಕಾರ ಸಂಸ್ಥೆಗಳ ಪರೀಕ್ಷಾ ಅಕ್ರಮಗಳ ಸಂಬಂಧ ತನಿಖೆ ಮಾಡಲು ಸಹಕಾರ ಸಚಿವರ ಸೂಚನೆಯ ಮೇರೆಗೆ ಸಹಕಾರ ಇಲಾಖೆಯು ನಿಭಂದಕರಿಗೆ ಪತ್ರ ಬರೆದಿರುತ್ತದೆ. 

ಇಷ್ಟೆಲ್ಲಾ ಗುರುತರ ಆರೋಪಗಳ ಮಧ್ಯೆ ರಾಜ್ಯಪಾಲರು ಇವರ ಅವಧಿಯನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಈಗಿನ ಕುಲಪತಿಗಳು ಉನ್ನತ ಶಿಕ್ಷಣ ಸಚಿವರಿಗೆ ಆಪ್ತರಾಗಿದ್ದು, ರಾಜ್ಯದ ವಿಶ್ವವಿದ್ಯಾಲಯಗಳ ಮತ್ತು ಉನ್ನತ ಶಿಕ್ಷಣ ಸಚಿವರ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಇದೇ ಸಂಪರ್ಕ ಮತ್ತು ಪ್ರಭಾವವನ್ನು ಬಳಸಿಕೊಂಡು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾಗಲು ಪ್ರಯತ್ನಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿತ ಕುಲಪತಿಗಳ ಮೇಲೆ ನ್ಯಾಯಾಂಗ ತನಿಖೆ ಒಳಪಡಿಸಿ, ವಿಶ್ವವಿದ್ಯಾಲಯ ಮತ್ತು ಇದರ ಹಣವನ್ನು ಸಂರಕ್ಷಿಸಬೇಕಾಗಿ ಒತ್ತಾಯಿಸುತ್ತೇನೆ. ಕಳಂಕಿತರನ್ನು ತೊಲಗಿಸಿ, ವಿಶ್ವವಿದ್ಯಾಲಯಗಳನ್ನು ಸಂರಕ್ಷಿಸಬೇಕು’


*ಯಡಿಯೂರಪ್ಪನವರ ರಾಜೀನಾಮೆಗೆ ಸ್ಪಷ್ಟ ಕಾರಣವೇನು?: ಬಿಜೆಪಿಗೆ ಪ್ರಶ್ನೆ*

‘ಯಡಿಯೂರಪ್ಪನವರು ನಿನ್ನೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ಯಡಿಯೂರಪ್ಪನವರ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರಗಳನ್ನು ವಿಧಾನ ಮಂಡಳದ ಒಳಗೆ ಹಾಗೂ ಹೋರಗೆ ಟೀಕಿಸಿದೆ. ಆದರೆ ಯಡಿಯೂರಪ್ಪನವರು ಹಿರಿಯ ರಾಜಕಾರಣಿಯಾಗಿದ್ದು, ಅವರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಇದುವರೆಗೂ ಅವರನ್ನು ಯಾವ ಕಾರಣಕ್ಕೆ ಕೆಳಗಿಳಿಸಲಾಯಿತು ಎಂಬುದರ ಬಗ್ಗೆ ಬಿಜೆಪಿ ಸೂಕ್ತ ಕಾರಣ ನೀಡಿಲ್ಲ.

ಕೇರಳದಲ್ಲಿ 85 ವರ್ಷದ ಹಿರಿಯರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಕಟಿಸಿದ್ದ ಬಿಜೆಪಿ ಯಡಿಯೂರಪ್ಪನವರಗೆ 75 ವರ್ಷವಾಯಿತು ಎಂಬ ವಿಚಾರವಾಗಿ ಹುದ್ದೆಯಿಂದ ಕೆಳಗಿಳಿಸಯಾಯಿತೇ?

ಬಿಜೆಪಿ ನಾಯಕರೇ ಹೇಳುವಂತೆ ಅಪ್ಪ ಮಕ್ಕಳನ್ನು ಹೊರಗಿಟ್ಟು ಪಕ್ಷವನ್ನು ಕಟ್ಟಬೇಕು ಎಂಬ ಕಾರಣಕ್ಕೆ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತೇ?

ಯಡಿಯೂರಪ್ಪನವರ ಅಗತ್ಯ ಪಕ್ಷಕ್ಕೆ ಇನ್ನು ಅಗತ್ಯವಿಲ್ಲ ಎಂಬ ಕಾರಣಕ್ಕೆ ಅವರನ್ನು ಮೂಲೆಗುಂಪು ಮಾಡಲಾಯಿತೇ?

ಅಥವಾ ಯಡಿಯೂರಪ್ಪನವರ ವಿರುದ್ಧ ಕಾಂಗ್ರೆಸ್ ಪಕ್ಷ ಮಾಡಿದ ಭ್ರಷ್ಟಾಚಾರ ಆರೋಪಗಳು ನಿಜ ಎಂದು ಅವರಿಂದ ರಾಜೀನಾಮೆ ಪಡೆಯಲಾಯಿತೇ? 

ಯಡಿಯೂರಪ್ಪನವರು ತಮ್ಮ ರಾಜೀನಾಮೆಗೆ ಏನೇ ಕಾರಣ ಕೊಟ್ಟರೂ ಇದುವರೆಗೂ ಪಕ್ಷದ ವತಿಯಿಂದ ಯಾವುದೇ ಸಮರ್ಥನೆ ವ್ಯಕ್ತವಾಗಿಲ್ಲ. ಹೀಗಾಗಿ ಯಾವ ಕಾರಣಕ್ಕೆ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು ಎಂದು ಬಿಜೆಪಿ ಕಾರಣವನ್ನು ತಿಳಿಸಬೇಕು.’
[23/07, 4:45 PM] Ravi Gowda. Kpcc. official: ಕನಕಪುರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಸರಕಾರಿ ಅಧಿಕಾರಿಗಳ ಸಮಯಪಾಲನೆ ಕೊರತೆ, ಮಿತಿ ಮೀರಿದ ಭ್ರಷ್ಟಾಚಾರ ಮತ್ತಿತರ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ, ಸ್ಥಳೀಯ ಶಾಸಕ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ, ಅವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದರು.
[23/07, 4:51 PM] Ravi Gowda. Kpcc. official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕನಕಪುರ ಕೆಡಿಪಿ ಸಭೆಯ ನಂತರ ಮಾಧ್ಯಮಗಳ ಜತೆ ಶನಿವಾರ ಮಾತನಾಡಿದರು. ಎಂಎಲ್ಸಿ ರವಿ ಜತೆಗಿದ್ದರು.
[23/07, 5:05 PM] Ravi Gowda. Kpcc. official: *CORRECTION*
ಕನಕಪುರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಸರಕಾರಿ ಅಧಿಕಾರಿಗಳ ಸಮಯಪಾಲನೆ ಕೊರತೆ, ಮಿತಿ ಮೀರಿದ ಭ್ರಷ್ಟಾಚಾರ ಮತ್ತಿತರ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ, ಸ್ಥಳೀಯ ಶಾಸಕ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ಅವರಿಗೆ ದೂರವಾಣಿ ಕರೆ ಮಾಡಿ, ಅವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದರು.
[23/07, 6:11 PM] Ravi Gowda. Kpcc. official: *ಕನಕಪುರದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

ಇಂದು ಕೆಡಿಬಿ ಸಭೆ ನಡೆಸಿದ್ದೇನೆ. ಜನರ ಅಹವಾಲುಗಳನ್ನು ಆಲಿಸಿ ಅಧಿಕಾರಿಗಳ ಜತೆ ಪಾರದರ್ಶಕವಾಗಿ ಸಭೆ ನಡೆಸಿದ್ದೇನೆ. ಸರ್ಕಾರಿ ಕಚೇರಿಗಳ ಎಲ್ಲ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಅಧಿಕಾರಿಗಳ ಕೆಲಸ ಪರಾಮರ್ಶೆ ಮಾಡಲು, ಅಧಿಕಾರಿಗಳ ಕಾರ್ಯಕ್ರಮಗಳೇನು ಎಂಬ ಮಾಹಿತಿ ತಿಳಿಸಲು ಸೂಚನೆ ನೀಡಿದ್ದೇನೆ. 

ಸಾರ್ವಜನಿಕರ ದೂರು ಹೆಚ್ಚಾಗಿದ್ದ ಪರಿಣಾಮ, ಶನಿವಾರ ರಜಾದಿನವಾದರೂ ಇಂದು ಬಂದು ಸಭೆ ಮಾಡಿದ್ದೇನೆ. ವ್ಯವಸ್ಥೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ.

ಈ ಸಭೆಗೆ ಬಂದವರು ಬಿಜೆಪಿ ಘನ ಸರ್ಕಾರ ನೇಮಿಸಿರುವ ಸದಸ್ಯರಾಗಿದ್ದಾರೆ. ಸರ್ಕಾರ ಎಲ್ಲ ಹುದ್ದೆಗಳಿಗೆ ಬೆಲೆ ನಿಗದಿ ಮಾಡಿರುವ ಪರಿಣಾಮ ಈ ರೀತಿ ಆಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಗೋಡೆ, ಮೇಜುಗಳನ್ನು ಮುಟ್ಟಿದರೆ ದುಡ್ಡು, ದುಡ್ಡು ಎಂಬ ಸದ್ದು ಬರುತ್ತಿದೆ. ಇದಕ್ಕೆ ನಮ್ಮ ತಾಲೂಕು ದೊಡ್ಡ ಸಾಕ್ಷಿಯಾಗಿದೆ.

ಜಮೀರ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ವಿಚಾರವನ್ನು ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಗೆ ತಿಳಿಸಲಾಗುವುದು. ಪಕ್ಷಕ್ಕೆ ಧಕ್ಕೆಯಾಗುವ ಹೇಳಿಕೆ ನೀಡುವವರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

Post a Comment

Previous Post Next Post