ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯ ಬೆನ್ನಲ್ಲೇ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ನಳಿನ್ ಕುಮಾರ್ ಕಟೀಲ್ ಅವರು ಮಾಡಿದ್ದ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಮತ್ತೆ ವೀಡಿಯೋ ಮಾಡಿರುವ ಕಟೀಲ್, ನಮ್ಮ ಕಾರ್ಯಕರ್ತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ವೀಡಿಯೋ ಮಾಡಿರುವ ನಳೀನ್, ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಇಂತಹ ಘಟನೆಗಳು ನಡೆದಾಗ ಕಾರ್ಯಕರ್ತರಿಗೆ ಉತ್ತರ ಕೊಡುವಂತಹ ಕೆಲಸವನ್ನು ಮಾಡುತ್ತೆ. ಈ ಬಗ್ಗೆ ನನಗೆ ವಿಶ್ವಾಸ ಇದೆ. ಮುಖ್ಯಮಂತ್ರಿಗಳ ಬಳಿ ಕೂಡ ಹೇಳಿದ್ದೇನೆ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗುವ ರೀತಿಯಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಇದರ ಹಿಂದೆ ಇರುವ ಎಲ್ಲಾ ಷಡ್ಯಂತ್ರ, ಪಿತೂರಿಗಳನ್ನು ಹಾಗೂ ಕೇರಳ ಮುಲದ ಕೈವಾಡಗಳಿದ್ದರೆ ಅದನ್ನು ಕೂಡ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವ ಮೂಲಕ ಉತ್ತರ ಕೊಡುವ ಕೆಲಸ ಸರ್ಕಾರ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ಭಾಷಣದಲ್ಲಿ ನಳಿನ್ ಕಕುಮಾರ್ ಕಟೀಲ್ ಅವರು, ಕರಾವಳಿ ಜಿಲ್ಲೆಯಲ್ಲಿ ನಾನು ಹೋರಾಟ ಮಾಡಿ ಬಂದವ. ನಮ್ಮ ಜಿಲ್ಲೆಯಲ್ಲಿ ತಾಕತ್ತಿದ್ರೆ ಒಬ್ಬೇ ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಮುಟ್ಟಿ ನೋಡಿ. ಬಿಜೆಪಿ ತಕ್ಕ ಪಾಠ ಕಲಿಸುತ್ತೆ ಅಂತ ಶಪಥ ಮಾಡಿದ್ದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಎರಡ್ಮೂರು ತಿಂಗಳ ಹಿಂದೆ ಶಿವಮೊಗ್ಗದ ಹಿಂದೂ ಹರ್ಷನ ಕೊಲೆ ಆಗಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಿಂದೂ ಕಾರ್ಯಕರ್ತ, ಬಿಜೆಪಿ ಮುಖಂಡನ ಹತ್ಯೆ ನಡೆದಿದೆ. ಆದ್ರೂ ಯಾರಿಗೂ ಬಿಜೆಪಿ ಪಾಠ ಕಲಿಸಿದಂತೆ ಕಾಣುತ್ತಿಲ್ಲ. ಇತ್ತೀಚಿಗೆ ಪರಪ್ಪನ ಅಗ್ರಹಾರದಲ್ಲಿ ಹರ್ಷನ ಕೊಲೆ ಆರೋಪಿಗಳು ವೀಡಿಯೋ ಕಾಲ್ ಮಾಡ್ತಿರೋ ದೃಶ್ಯಗಳೇ ಇದಕ್ಕೆ ಸಾಕ್ಷಿಯಾಗಿವೆ.
Post a Comment