ಆಗಸ್ಟ್ 28, 2022
,
7:59PM
ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷರ
ಆಯ್ಕೆಗೆ ಚುನಾವಣೆ ನಡೆಯಲಿದೆ
ಈ ವರ್ಷ ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ. ನವದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಸಿಡಬ್ಲ್ಯೂಸಿ, ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಕ್ಷದ ಮುಖ್ಯಸ್ಥರ ಚುನಾವಣೆಯ ವೇಳಾಪಟ್ಟಿಯನ್ನು ಸಿಡಬ್ಲ್ಯುಸಿ ಅನುಮೋದಿಸಿದೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಚುನಾವಣೆಗೆ ಅಧಿಸೂಚನೆ ದಿನಾಂಕ ಸೆಪ್ಟೆಂಬರ್ 22 ಎಂದು ಘೋಷಿಸಿದರು. ಅಭ್ಯರ್ಥಿಗಳು ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 30 ರೊಳಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದು ಎಂದು ಅವರು ಹೇಳಿದರು. ನಾಮಪತ್ರಗಳ ಪರಿಶೀಲನೆಯ ದಿನಾಂಕ ಅಕ್ಟೋಬರ್ 1 ಮತ್ತು ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕ ಅಕ್ಟೋಬರ್ 8. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಗತ್ಯ ಬಿದ್ದರೆ ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ ಎಂದರು.

Post a Comment