[11/08, 12:08 PM] Gurulingswami. Holimatha. Vv. Cm: ಸಿಎಂ ಬದಲಾವಣೆ ಮಾತುಗಳಿಗೆ
ಆಧಾರವಿಲ್ಲ
*ರಾಜ್ಯದ ಅಭಿವೃದ್ಧಿಗೆ 2 ಗಂಟೆ ಹೆಚ್ಚು ಕೆಲಸ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 11: ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ ಇನ್ನೂ 2 ಗಂಟೆಗಳ ಹೆಚ್ಚಿನ ಕೆಲಸ, ರಾಜ್ಯದ ಅಭಿವೃದ್ಧಿ ಗೆ ಅತಿ ಹೆಚ್ಚು ಸಮಯವನ್ನು ನೀಡಲಾಗುವುದು. ಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನರ ಬಳಿಗೆ ಹೋಗುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು ಎಂದರು.
*ಕಾಂಗ್ರೆಸ್ ಮನಸ್ಸಿನಲ್ಲಿ ಅತಂತ್ರ*
ಕಾಂಗ್ರೆಸ್ ಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ಸತ್ಯ ನನಗೆ ಗೊತ್ತಿದೆ ಎಂದರು.
[11/08, 12:56 PM] Gurulingswami. Holimatha. Vv. Cm: .
*ಮಳೆಯಿಂದ ಹಾನಿ: ಕೇಂದ್ರಕ್ಕೆ 2-3 ಗಳಲ್ಲಿ ಮನವಿ*
ಬೆಂಗಳೂರು, ಆಗಸ್ಟ್ 11: ರಾಜ್ಯ ದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ನಡೆಯುತ್ತಿರುವ ಸಮೀಕ್ಷೆಯ ವರದಿ ಶೀಘ್ರ ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿಗೆ ಕೇಂದ್ರದಿಂದ ಪರಿಹಾರ ಕೇಳುತ್ತೀರಾ ಎಂಬ ಪ್ರಶ್ನೆಗೆ ಸಿಎಂ ಉತ್ತರಿಸಿದರು.
ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಮೂಲ ಸೌಕರ್ಯಗಳು ಹಾಳಾಗಿವೆ. ತುರ್ತು ಕೆಲಸಕ್ಕಾಗಿ ರಾಜ್ಯ ಸರ್ಕಾರ ೫೦೦ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ.
ಬೆಳೆ ಹಾನಿಯಾಗಿದೆ. ಅದರ ಸಮೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.
*ಈದ್ಗಾ ಮೈದಾನ: ಕಾನೂನಿನ ಪ್ರಕಾರ ಸಭೆ ಸಮಾರಂಭ ಆಯೋಜನೆ*
ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಸರ್ಕಾರದ ನೀತಿ ನಿಯಮಗಳ ಪ್ರಕಾರ ಸಭೆ ಸಮಾರಂಭಗಳು, ಉತ್ಸವಗಳನ್ನು ಕಾನೂನಿನ ಪ್ರಕಾರ ಕೈಗೊಳ್ಳಲಾಗುವುದು ಎಂದರು. ಯಾರೂ ಏನೇ ಹೇಳಿದರೂ ನಮಗೆ ಕಾನೂನು ಮುಖ್ಯ. ಕಾನೂನು ಬಿಟ್ಟು ಏನೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[11/08, 2:48 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನಲ್ಲಿ ಮೈಸೂರು ವಿಶ್ವವಿದ್ಯಾಲಯ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ , ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಖ್ಯಾತ ಚಿತ್ರನಟ ಯಶ್ ಮತ್ತು ಇತರರು ಉಪಸ್ಥಿತರಿದ್ದರು.
[11/08, 3:10 PM] Gurulingswami. Holimatha. Vv. Cm: *ಮೈಸೂರು, ಅಗಸ್ಟ್* 11: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಉನ್ನತ ಶಿಕ್ಷಣ ಇಲಾಖೆ* ಹಾಗೂ *ಮೈಸೂರು* *ವಿಶ್ವವಿದ್ಯಾಲಯದ ವತಿಯಿಂದ* *ಮಾನಸ* *ಗಂಗೋತ್ರಿಯಲ್ಲಿ* ಆಯೋಜಿಸಿರುವ 75ನೇ *ಸ್ವಾತಂತ್ರ್ಯದ ಅಮೃತ* *ಮಹೋತ್ಸವದ ಅಂಗವಾಗಿ* “ *ಯುವಜನ ಮಹೋತ್ಸವ* ”ದ ಉದ್ಘಾಟನೆ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು *ವಿವಿಧ ಅಭಿವೃದ್ಧಿ* *ಕಾರ್ಯಕ್ರಮಗಳನ್ನು ಉದ್ಘಾಟಿಸಿ* *ಮಾತನಾಡಿದರು.*
[11/08, 3:59 PM] Gurulingswami. Holimatha. Vv. Cm: ಆಜಾದಿ ಕಾ ಅಮೃತ ಮಹೋತ್ಸವ
*ರಾಜ್ಯದಲ್ಲಿ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಹಾಗೂ ಅದ್ಧೂರಿ ಆಚರಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮೈಸೂರು, ಆಗಸ್ಟ್ 11 :
ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಿಸಲಿದ್ದು, ರಾಜ್ಯದ ಮನೆಮನೆಗಳಲ್ಲಿ, ಅಂಗಡಿಮುಂಗಟ್ಟು, ಕಚೇರಿ, ಕೈಗಾರಿಕೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಸ್ವಾತಂತ್ರ್ಯ ಹಬ್ಬದ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರತಿಯೊಂದು ಗ್ರಾಮಪಂಚಾಯತಿಯೂ ಸೇರಿದಂತೆ ಇಡೀ ರಾಜ್ಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಹರಘರ್ ತಿರಂಗಾ ಕಾರ್ಯಕ್ರಮದಡಿ 1 ಕೋಟಿಗಿಂತ ಹೆಚ್ಚು ಧ್ವಜಗಳನ್ನು ಗ್ರಾಮಪಂಚಾಯತಿಗಳಿಗೆ ವಿತರಿಸಲಾಗಿದ್ದು, ತಲಾ 400 ರಿಂದ 500 ಧ್ವಜಗಳನ್ನು ಪ್ರತಿ ಗ್ರಾಮಪಂಚಾಯತಿಗೆ ವಿತರಣೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವ ಮತ್ತು ದೇಶ ಕಟ್ಟುವ ಸಂಕಲ್ಪದ ವಿಚಾರಗಳನ್ನು ಕರ್ನಾಟಕದ ರಾಜ್ಯದೆಲ್ಲೆಡೆ ಇದೇ ಆಗಸ್ಟ್ 15 ರಿಂದ ಮುಂದಿನ ಆಗಸ್ಟ್ 15ವರೆಗೂ ಪ್ರಧಾನಿ ಮೋದಿಯವರ ಅಮೃತಕಾಲ ದ ಕಲ್ಪನೆಯನ್ನು ಪ್ರಚಾರ ಮಾಡುವ ವಿಶೇಷ ಕಾರ್ಯಕ್ರಮವನ್ನು ರಾಜ್ಯಸರ್ಕಾರ ಹಮ್ಮಿಕೊಂಡಿದೆ ಎಂದರು.
*ತ್ರಿವರ್ಣ ಧ್ವಜ ಜನರನ್ನು ಒಗ್ಗೂಡಿಸುವ ಶಕ್ತಿಯಾಗಿದೆ :*
ಹರಘರ್ ತಿರಂಗಾ ಕಾರ್ಯಕ್ರಮದ ಬಗ್ಗೆ ವ್ಯಕ್ತವಾಗಿರುವ ಟೀಕೆಗಳಿಗೆ ಪ್ರತಿಕ್ರಯಿಸಿ, ತ್ರಿವರ್ಣ ಧ್ವಜ ನಮ್ಮ ತ್ಯಾಗ ಬಲಿದಾನದಿಂದ ಅಹಿಂಸಾತ್ಮಕವಾಗಿ ಪಡೆದಿರುವಂತಹ ಸ್ವಾತಂತ್ರ್ಯದ ಧ್ವಜ. ಈ ಧ್ವಜದ ಅಡಿಯಲ್ಲಿ ಭಾರತ ರಾಷ್ಟ್ರ ನಿರ್ಮಾಣವಾಗಿದೆ. ಸ್ವತಂತ್ರಪೂರ್ವದಲ್ಲಿ ನಮ್ಮ ಹಿರಿಯರು ಹೋರಾಟ ಮಾಡಿ ಗಳಿಸಿದ ಸ್ವಾತಂತ್ರ್ಯವಾಗಿದೆ. ಸ್ವಾತಂತ್ರ್ಯ ಹೋರಾಟವನ್ನು ಸರಿಯಾಗಿ ತಿಳಿದು, ತಿರುಚದೇ ಮುಂದಿನ ಜನಾಂಗಕ್ಕೆ ತಿಳಿಹೇಳುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜ ನಮ್ಮನ್ನೆಲ್ಲಾ ಒಗ್ಗೂಡಿಸುವ ಶಕ್ತಿಯಾಗಿದೆ. ಈ ತ್ರಿವರ್ಣ ಧ್ವಜದ ಅಡಿಯಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭವಿಷ್ಯ ಅಡಗಿದೆ. ಇಂತಹ ಧ್ವಜದ ಬಗ್ಗೆ ಹಗುರವಾಗಿ ಮಾತನಾಡುವುದು ಯಾವುದೇ ದೇಶ ಭಕ್ತನಿಗೆ ಸೂಕ್ತವಾದುದಲ್ಲ. ಇಂತಹ ಕೆಲಸವನ್ನು ಯಾರೂ ಮಾಡಬಾರದು. ದೇಶದ ಜನ ಇನ್ನಷ್ಟು ಸ್ಪೂರ್ತಿ ಹಾಗೂ ಪ್ರೇರಣೆಯಿಂದ ತಿರಂಗಾ ಧ್ವಜವನ್ನು ಹಾರಿಸಿ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಾರೆ ಎಂದು ತಿಳಿಸಿದರು.
*ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕಾರ್ಯ ಶೀಘದಲ್ಲಿ ಪ್ರಾರಂಭ :*
ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲಿ ವಿಶೇಷವಾಗಿ ಮೈಸೂರಿನಲ್ಲಿ ಅತಿವೃಷ್ಟಿಯಿಂದ ಹಾನಿಯಾಗಿರುವ ಎಲ್ಲ ಮನೆಗಳಿಗೂ ಮೊದಲ ಕಂತಿನ ಪರಿಹಾರವನ್ನು ನೀಡಲಾಗಿದೆ. ಮನೆಗಳಿಗೆ ನೀರು ನುಗ್ಗಿರುವುದಕ್ಕೆ 10,000 , ಪೂರ್ಣ ಹಾನಿಯಾಗಿರುವ ಮನೆಗಳಿಗೆ ನೀಡಲಾಗುವ 5 ಲಕ್ಷ ರೂ.ಗಳಲ್ಲಿ 95,000 ರೂ.ಗಳನ್ನು ಮೊದಲ ಕಂತಾಗಿ ಈಗಾಗಲೇ ನೀಡಲಾಗಿದೆ. ಭಾಗಶ: ಹಾನಿಯಾಗಿರುವ ಮನೆಗಳಿಗೆ ನೀಡಲಾಗುವ 3 ಲಕ್ಷ ರೂ.ಗಳಲ್ಲಿ 95,000 ರೂ.ಗಳನ್ನು ಮೊದಲ ಕಂತಾಗಿ ಈಗಾಗಲೇ ನೀಡಲಾಗಿದೆ. ಹಾನಿಯಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಈಗಾಗಲೇ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ 300 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಗೆ 200 ಕೋಟಿ ರೂ. ನೀಡಲಾಗಿದ್ದು, ದುರಸ್ತಿ ಕಾರ್ಯ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದರು.
*ಬೆಳೆಪರಿಹಾರ :*
ಬೆಳೆನಾಶ ಪರಿಹಾರಕ್ಕಾಗಿ ಜಂಟಿ ಸರ್ವೇಯಾದ ತಕ್ಷಣ , ವಿಪತ್ತು ನಿರ್ವಹಣೆ ಇಲಾಖೆಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ 14 ಲಕ್ಷ ರೈತರಿಗೆ ಕೇವಲ ಒಂದೂವರೆ ತಿಂಗಳಲ್ಲಿ ಬೆಳೆಪರಿಹಾರ ತಲುಪಿಸಲಾಗಿತ್ತು. ಈ ಬಾರಿಯೂ ಇದೇ ಮಾದರಿಯಲ್ಲಿ ಶೀಘ್ರವಾಗಿ ಪರಿಹಾರವನ್ನು ಡಿಬಿಟಿ ಮೂಲಕ ರೈತರಿಗೆ ನೀಡಲಾಗುವುದು. ಅತಿವೃಷ್ಟಿಯಿಂದಾದ ಹಾನಿಯ ಬಗ್ಗೆ ವಿವರವಾದ ವರದಿಯನ್ನು2-3 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಒಮಿಕ್ರಾನ್ ನ ರೂಪಾಂತರಿ ತಳಿಗಳ ಬಗ್ಗೆ ಲ್ಯಾಬ್‍ಗಳಲ್ಲಿ ಜೆನೊಮೆಟಿಕ್ಸ್ ಅಧ್ಯಯನ ಪರೀಕ್ಷೆ ನಿರಂತರವಾಗಿ ನಡೆಯುತ್ತಿದೆ. ಅದರ ಪ್ರಭಾವ, ಹರುಡುವಿಕೆಯ ಶಕ್ತಿಗಳ ಬಗ್ಗೆಯೂ ಪರೀಕ್ಷೆ ನಡೆಯುತ್ತಿದೆ. ಜನರಲ್ಲಿ ಅನಾವಶ್ಯಕವಾದ ಆತಂಕ ನಿರ್ಮಿಸುವುದು ಸರಿಯಲ್ಲ. ವಿಜ್ಞಾನಿಗಳು, ಕೇಂದ್ರ ಸರ್ಕಾರ ಹಾಗೂ ತಜ್ಞರ ನೀಡುವ ಸಲಹೆ ಸೂಚನೆಗಳಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
Post a Comment