ಬೆಂಗಳೂರು(ಆ.30): ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ (Idgah Maidan in Hubballi) ಗಣೇಶೋತ್ಸವಕ್ಕೆ (Ganesh Chaturthi) ತಡೆಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠ ಅಂಜುಮನ್ ಸಂಸ್ಥೆಯ ಅರ್ಜಿ ವಜಾಗೊಳಿಸಿದೆ.ಪಾಲಿಕೆ ಆಯುಕ್ತರ ನಿರ್ಧಾರಕ್ಕೆ ಮನ್ನಣೆ ನೀಡಿದೆ. ಹೌದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ಬ್ರೇಕ್ ಹಾಕಿ, ಎರಡು ದಿನಗಳ ಕಾಲ ಯಥಾಸ್ಥಿತಿ ಕಾಪಾಡುವಂತೆ ನೀಡಿದ್ದ ಆದೇಶವನ್ನಾಧರಿಸಿ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲೂ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಬೇಕೆಂದು ಕೋರಿ ವಿಚಾರಣೆಗೆ ಅರ್ಜಿದಾರರು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಮೂವರು ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾ. ಅಶೋಕ್ ಎಸ್ ಕಿಣಗಿಯವರ ಅರ್ಜಿ ವಜಾಗೊಳಿಸಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಬ್ರೇಕ್, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ!
ಏಕಾಏಕಿ ವಿಚಾರಣೆ ಏಕೆ?
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ಈ ಮೊದ್ಲೇ ಮಧ್ಯಂತರ ಆದೇಶ ನೀಡಿದೆ. ಇದರ ಪರಿಣಾಮ, ಮೂರು ದಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡ ಸಾಧಿಕ್ ಗುಡವಾಲಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿ ಗಣೇಶೋತ್ಸವ ಪ್ರತಿಷ್ಠಾಪನೆಗೆ ಅರ್ಜಿ ನಿರ್ಧರಿಸುವ ಅಧಿಕಾರವನ್ನು ಹೈಕೋರ್ಟ್ ಹುಬ್ಬಳ್ಳಿ-ಧಾರವಾಡ ಕಮಿಷನರ್ಗೆ ನೀಡಿತ್ತು.
ಈ ಮಧ್ಯೆ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಬಂದಿದೆ. ವಿಭಿನ್ನ ತೀರ್ಪಿನ ನೆಪವೊಡ್ಡಿ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾ. ಅಶೋಕ್ ಎಸ್ ಕಿಣಗಿಯವರಿರುವ ಏಕಸದಸ್ಯ ಪೀಠ ಅವರ ಕಚೇರಿಯಲ್ಲೇ ನಡೆಸುತ್ತಿತ್ತು. ಆದರೀಗ ಮೂವರು ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಅರ್ಜಿ ವಜಾಗೊಳಿಸಿದ್ದಾರೆ. ಈ ಮೂಲಕ ಈಗಾಗಲೇ ಆಯೋಜಿಸಲಾಗಿರುವ ಗಣೇಶೋತ್ಸವ ಈದ್ಗಾ ಮೈದಾನದಲ್ಲಿ ನಡೆಯಲಿದೆ. ಇನ್ನು ಇದೇ ಮೊದಲ ಬಾರಿ ಈ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದೆ ಎಂಬುವುದು ಉಲ್ಲೇಖನೀಯ.
BBMPಗೆ ಹಿಂದೂಪರ ಸಂಘಟನೆಗಳಿಂದ ಡೆಡ್ ಲೈನ್! ಯೋಗ ದಿನಕ್ಕೆ ಅವಕಾಶ ಕೊಡದಿದ್ರೆ ಕೋರ್ಟ್ ಮೊರೆ?
ಹೈಕೋರ್ಟ್ ಹೇಳಿದ್ದೇನು?
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಏರ್ಪಡಿಸಲಾದ ಗಣೇಶೋತ್ಸವಕ್ಕೆ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಸುಪ್ರೀಂ ಕೋರ್ಟ್‌ನಲ್ಲಿ ವಿವಾದದಲ್ಲಿರುವ ಚಾಮರಾಜಪೇಟೆ ಈದ್ಗಾ ಮೈದಾನದಂತೆ, ಹುಬ್ಬಳ್ಳಿಯಲ್ಲಿ ಯಾವುದೇ ವಿವಾದವಿಲ್ಲ ಎಂದು ಸ್ಪಷ್ಟಪಡಿಸಿದೆ.
ಅಲ್ಲದೇ ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಈದ್ಗಾ ಮೈದಾನವು ನಿಗಮದ ಆಸ್ತಿಯಾಗಿದ್ದು. ಜಾಗದ ಮೇಲೆ ಸರ್ಕಾರಕ್ಕೆ ಎಲ್ಲಾ ಹಕ್ಕುಗಳು ಇದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯ ಕೈಗೊಳ್ಳಬಹುದು. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ ಎಂಬುವುದನ್ನು ಸ್ಪಷ್ಟಪಡಿಸಿದೆ.
Idgah Maidan: ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್!
ಹಿಂದೂ ಕಾರ್ಯಕರ್ತರಿಂದ ವಿಜಯೋತ್ಸವ
ಇನ್ನು ಹೈಕೋರ್ಟ್ನ ಈ ತೀರ್ಪು ಹೊರ ಬಿದ್ದ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನದ ಬಳಿ ಹಿಂದೂಪರ ಸಂಘಟನೆಗಳ ಮುಖಂಡರು ವಿಜಯೋತ್ಸವ ಆಚರಿಸಿದ್ದಾರೆ. ಹುಬ್ಬಳ್ಳಿಯ ವಿವಿಧೆಡೆಯಿಂದ ಆಗಮಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗಣೇಶನ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ.
Post a Comment