[04/08, 1:49 AM] Gurulingswami. Holimatha. Vv. Cm: ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯ Actions ಪರವಾಗಿ ಸಚಿವರಾದ ಗೋವಿಂದ ಕಾರಜೋಳ್, ಸಿಸಿ ಪಾಟೀಲ್,ಅರಗ ಜ್ಞಾನೇಂದ್ರ ಅವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಎಲ್ಸ್ವಾಗತಿಸಿದರು
[04/08, 1:51 AM] Gurulingswami. Holimatha. Vv. Cm: ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯ Actions ಪರವಾಗಿ ಸಚಿವರಾದ ಗೋವಿಂದ ಕಾರಜೋಳ್, ಸಿಸಿ ಪಾಟೀಲ್,ಅರಗ ಜ್ಞಾನೇಂದ್ರ ಹಾಗೂ ಪಕ್ಷದ ಪರವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಎಲ್ಸ್ವಾಗತಿಸಿದರು.
[04/08, 10:35 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ಹೂ ಗುಚ್ಛ ನೀಡಿ ಗೌರವಿಸಿದರು.
[04/08, 11:22 AM] Gurulingswami. Holimatha. Vv. Cm: ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಚಿವ ಮುರುಗೇಶ ನಿರಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.
[04/08, 3:05 PM] Gurulingswami. Holimatha. Vv. Cm: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಯಲಹಂಕದಲ್ಲಿರುವ ಕೆಎಂಎಫ್ ಮದರ್ ಡೈರಿಗೆ ಭೇಟಿ ನೀಡಿ ಹಾಲಿನ ಪುಡಿ ಘಟಕದ ಕಾರ್ಯವೈಖರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಸಚಿವ ಎಸ್ ಟಿ ಸೋಮಶೇಖರ್ , ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕ ಎಸ್ ಆರ್ ವಿಶ್ವನಾಥ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.
[04/08, 3:20 PM] Gurulingswami. Holimatha. Vv. Cm: *ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 04 :
ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ ಹೊರತುಪಡಿಸಿದರೆ, ಪ್ರಪಂಚದ ಯಾವುದೇ ನಗರಗಳಲ್ಲಿ ಈ ಸಂಖ್ಯೆಯ ಆರ್ ಎಂಡ್ ಡಿ ಕೇಂದ್ರಗಳನ್ನು ಕಾಣಲು ಸಾಧ್ಯವಿಲ್ಲ ಎಂದರು.
*ಕರ್ನಾಟಕದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಕೊಡುಗೆ :*
ರಾಜ್ಯದಲ್ಲಿ ಉದ್ಯೋಗ ನೀತಿಯನ್ನು ರೂಪಿಸಲಾಗಿದ್ದು, ಉದ್ಯೋಗದಾತ ಉದ್ಯಮಿಗಳಿಗೆ ಪ್ರೋತ್ಸಾಹಕಗಳನ್ನು ನೀಡಲಾಗುವುದು. ಸೆಮಿಕಂಡಕ್ಟರ್ ನೀತಿ, ವಿದ್ಯುತ್ ಚಾಲಿತ ವಾಹನ ನೀತಿ, ನವೀಕರಿಸಬಹುದ ಇಂಧನ ನೀತಿಗಳನ್ನು ರೂಪಿಸಲಾಗಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯಕ್ಕೆ 110 ಲಕ್ಷ ಕೋಟಿ ರೂ.ಗಳ ವಿದೇಶಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೈಡ್ರೋಜನ್ ಇಂಧನ, ಸಮುದ್ರನೀರಿನಿಂದ ಅಮೋನಿಯಾ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ. ಕರ್ನಾಟಕದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಕೊಡುಗೆಗೆ ಮನ್ನಣೆ ನೀಡಲಾಗುತ್ತಿದೆ. ಭಾರತದಲ್ಲಿ ಅಮೃತ ಕಾಲವನ್ನು ಸ್ಥಾಪಿಸುವ ಕೆಲಸನವನ್ನು ಎಲ್ಲರೂ ಒಗ್ಗಟ್ಟಾಗಿ ಮಾಡಬೇಕಿದೆ ಎಂದರು.
*ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ರಾಜ್ಯದ ಕೊಡುಗೆ :*
ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜಮಹಾರಾಜರ ಕಾಲದಿಂದಲೂ ಪ್ರಗತಿಪರ ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ವಾಣಿಜ್ಯ, ತಂತ್ರಜ್ಞಾನದ ಬೆಳವಣಿಗೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ.ಕರ್ನಾಟಕ ಐಟಿಬಿಟಿ, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಪಾಶ್ಚಿಮಾತ್ಯ ರಾಷ್ಟ್ರಗಳನ್ನು ಹಿಂದಿಕ್ಕುತ್ತಿದೆ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್‍ನಷ್ಟು ಕೊಡುಗೆ ನೀಡಬೇಕೆನ್ನುವ ಗುರಿ ಇದೆ. ಇದಕ್ಕಾಗಿ ವಲಯವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
*ಕೃಷಿಯಿಂದ ಆಹಾರ ಭದ್ರತೆಯ ಜೊತೆಗೆ ಆರ್ಥಿಕ ಭದ್ರತೆ :*
ಕರ್ನಾಟಕ ಕೃಷಿ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಕಂಡಿದೆ. 10 ಕೃಷಿ ಹವಾಮಾನ ವಲಯಗಳು ರಾಜ್ಯದಲ್ಲಿದ್ದು, ವರ್ಷಪೂರ್ತಿ ಕೃಷಿ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಕೃಷಿ ವಲಯದ ಶೇ.1 ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದಲ್ಲಿ ಶೇ. 4 ಹಾಗೂ ಸೇವಾ ವಲಯದಲ್ಲಿ ಶೇ. 10 ರಷ್ಟು ಅಭಿವೃದ್ಧಿಗೆ ಕಾರಣವಾಗುತ್ತದೆ. ಆಹಾರ ಕ್ಷೇತ್ರ ಆಹಾರ ಭದ್ರತೆಯ ಜೊತೆಗೆ ಆರ್ಥಿಕ ಭದ್ರತೆಯನ್ನೂ ಕೊಡುವುದರಿಂದ ಉದ್ಯಮಿಗಳು ಆಹಾರ ಕ್ಷೇತ್ರದತ್ತ ಗಮನಹರಿಸಬೇಕು. ಆಹಾರ ಮತ್ತು ಸೇವಾ ವಲಯದ ಸಂಪರ್ಕ ಗಟ್ಟಿಗೊಳ್ಳಬೇಕು. ಇದಕ್ಕೆ ಪೂರಕವಾದ ನೀತಿಗಳನ್ನೂ ರೂಪಿಸಲಾಗಿದೆ. ಪ್ರಧಾನಿಗಳ ಆಶಯವಾದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಕಾರವಾದಾಗ, ರೈತರ ಆದಾಯವೂ ದುಪ್ಪಟ್ಟಾಗುತ್ತದೆ. ಆಗ ಶೇ. 60 ಪ್ರತಿಶತ ಕೃಷಿಯನ್ನೇ ನಂಬಿರುವ ಜನರ ಜೀವನ ಸುಧಾರಣೆ ಸಾಧ್ಯ. ತಳಮಟ್ಟದ ಶ್ರಮಿಕರೇ ಆರ್ಥಿಕತೆಯ ಬೆನ್ನೆಲುಬಾಗಿದ್ದಾರೆ. ಮುಂದಿನ 25 ವರ್ಷಗಳ ಅಮೃತಕಾಲದಲ್ಲಿ ಶ್ರಮಿಕ ವರ್ಗದ ಅಭಿವೃದ್ಧಿಯನ್ನು ಗುರಿಯಾಗಿಸಿಕೊಳ್ಳಬೇಕಿದೆ ಎಂದರು.
*ಭಾರತೀಯರಲ್ಲಿ ಆತ್ಮವಿಶ್ವಾಸ ತುಂಬಿಸಿದ ಆತ್ಮನಿರ್ಭರ ಭಾರತ :*
ಒಂದು ದೇಶ 75 ವರ್ಷಗಳಲ್ಲಿ ಅಗಾಧ ಅನುಭವವನ್ನು ಹೊಂದಿರುತ್ತದೆ. ಅನೇಕ ಏಳುಬೀಳುಗಳನ್ನು ಕಂಡಿದೆ. ಪ್ರಜಾಪ್ರಭುತ್ವಕ್ಕೆ ಹಾಕಲಾಗಿದ್ದ ಸವಾಲುಗಳನ್ನು ದೇಶದ ಜನರ ನೈತಿಕ ಶಕ್ತಿಯಿಂದ ಎದುರಿಸಲಾಯಿತು. ಮೇಕ್ ಇನ್ ಇಂಡಿಯಾ ನೀತಿ ಭಾರತವನ್ನು ಸದೃಢವಾಗಿಸಿತು. ಆತ್ಮನಿರ್ಭರ ಮಂತ್ರದಿಂದ ದೇಶದ ಜನರ ಆತ್ಮವಿಶ್ವಾಸ ಹೆಚ್ಚಿತು. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬ ನಾಗರಿಕರಲ್ಲಿ ಆತ್ಮವಿಶ್ವಾಸವನ್ನು ತುಂಬಿದರು. ದೇಶದ ಕಟ್ಟಕಡೆಯ ವ್ಯಕ್ತಿಯ ಆಶಾಭಾವವೇ ಈ ದೇಶದ ಶಕ್ತಿ. ಕಟ್ಟಕಡೆಯ ವ್ಯಕ್ತಿ ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಮೂಲಕ ದೇಶದ ಭವಿಷ್ಯವಾಗುತ್ತಾನೆ. ಈ ನೀತಿಯನ್ನೇ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬಿಂಬಿಸುತ್ತದೆ. ದೂರದೃಷ್ಟಿಯ , ಶಕ್ತಿಯುತ ನಾಯಕ ಬೇಕಾಗುತ್ತದೆ. ಈ ಗುಣಗಳನ್ನು ನಾವು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರಲ್ಲಿ ಕಾಣಬಹುದಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಚಿವ ಮುರುಗೇಶ ನಿರಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.
[04/08, 5:12 PM] Gurulingswami. Holimatha. Vv. Cm: ಬೆಂಗಳೂರು, ಆಗಸ್ಟ್ 04: *ಮಾನ್ಯ* *ಮುಖ್ಯಮಂತ್ರಿ ಶ್ರೀ* *ಬಸವರಾಜ್ ಬೊಮ್ಮಾಯಿ ಅವರು* ಕೇಂದ್ರದ ಸಂಸ್ಕೃತಿ ಸಚಿವಾಲಯ ಹಾಗೂ ಭಾರತೀಯ ಕೈಗಾರಿಕೆಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಆಯೋಜಿಸಿರುವ " *ಸಂಕಲ್ಪ್ ಸೆ* *ಸಿದ್ಧಿ* " *ಸಮ್ಮೇಳನದ 3ನೇ* *ಆವೃತ್ತಿಯ ಉದ್ಘಾಟನಾ* ಕಾರ್ಯಕ್ರಮದಲ್ಲಿ *ಕೇಂದ್ರದ ಗೃಹ* *ಮತ್ತು ಸಹಕಾರಿ ಸಚಿವರಾದ* *ಶ್ರೀ ಅಮಿತ್ ಶಾ* ಅವರೊಂದಿಗೆ *ಕಾರ್ಯಕ್ರಮದಲ್ಲಿ* *ಪಾಲ್ಗೊಂಡು* *ಮಾತನಾಡಿದರು.*
[04/08, 7:50 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಭಾರತೀಯ ಸೇವಾದಳದ ನೂತನ ಪದಾಧಿಕಾರಿಗಳು ಸೌಹಾರ್ದಯುತವಾಗಿ ಭೇಟಿ ಮಾಡಿ ಸನ್ಮಾನಿಸಿದರು.
[04/08, 7:57 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮೊಬೈಲ್ ಅಪ್ಲಿಕೇಶನ್ ನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ವಿ. ಸೋಮಣ್ಣ, ಶಿವರಾಮ ಹೆಬ್ಬಾರ, ಡಾ. ಸಿ ಎನ್ ಅಶ್ವತ್ಥ ನಾರಾಯಣ, ಶಾಸಕರಾದ ನೆಹರೂ ಓಲೆಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ ಜೋಷಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕಾರ್ಯದರ್ಶಿಗಳಾದ ಎಂ ಎಸ್ ಶ್ರೀಕರ್, ಜಯರಾಮ ಮತ್ತು ಇತರರು ಉಪಸ್ಥಿತರಿದ್ದರು.
[04/08, 9:02 PM] Gurulingswami. Holimatha. Vv. Cm: *ಮುಖ್ಯಮಂತ್ರಿಯವರಿಗೆ ಯುವ ನೀತಿ ಕರಡು ಸಲ್ಲಿಕೆ:*
*ಮುಂದಿನ ವರ್ಷ ಯುವ ಬಜೆಟ್*
ಬೆಂಗಳೂರು, ಆಗಸ್ಟ್ 4-
ಡಾ. ಆರ್.ಬಾಲಸುಬ್ರಹ್ಮಣ್ಯ ಸಮಿತಿಯು ಇಂದು ಕರಡು ಯುವ ನೀತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ದೇಶದ ಶೇ. 46 ರಷ್ಟು ಜನಸಂಖ್ಯೆ ಯುವಕರಾಗಿದ್ದು, ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಯುವ ಬಜೆಟ್ ಅನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಯುವ ನೀತಿಯ ಕರಡನ್ನು ಕೂಡಲೇ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡು ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಈ ಕರಡು ಯುವ ನೀತಿಯ ಮುಖ್ಯಾಂಶಗಳನ್ನು ಉಲ್ಲೇಖಿಸಿದ ಡಾ. ಬಾಲಸುಬ್ರಹ್ಮಣ್ಯ ಅವರು ಯುವ ನೀತಿಯು ಯುವ ಕೇಂದ್ರಿತವಾಗಿದ್ದು, ನೀತಿಯ ಅನುಷ್ಠಾನಕ್ಕೆ ಕಾರ್ಯತಂತ್ರ, ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನದ ಅಂಶಗಳನ್ನೂ ಒಳಗೊಂಡಿದೆ. ಸುಸ್ಥಿರ ಅಭಿವೃದ್ಧಿ ಗುರಿಯೊಂದಿಗೂ ಸಂಯೋಜನೆ ಮಾಡಲಾಗಿದೆ ಎಂದು ವಿವರಿಸಿದರು.
*ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ*:
ಆಯವ್ಯಯದಲ್ಲಿ ಯುವಕರು ಸ್ವ ಉದ್ಯೋಗ ಕೈಗೊಳ್ಳಲು ರೂಪಿಸಿರುವ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಯುವಕರ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸಲು ಆಂಕರ್ ಬ್ಯಾಂಕ್ ಆಗಿ ನೇಮಕಗೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಗೆ ಈ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಮಾಡಲಾಯಿತು.
ರಾಜ್ಯದ ಪ್ರತಿ ಗ್ರಾಮದಲ್ಲಿ ಯುವ ಸ್ವಸಹಾಯ ಸಂಘಗಳನ್ನು ರಚಿಸಿ, ಸ್ವ ಉದ್ಯೋಗ ಕೈಗೊಳ್ಳಲು ತರಬೇತಿ, ಬೀಜಧನ ಹಾಗೂ ಮಾರುಕಟ್ಟೆ ಅವಕಾಶ ಕಲ್ಪಿಸುವ ಮೂಲಕ ಯುವಕರ ಆರ್ಥಿಕ ಸಬಲೀಕರಣ ಸಾಧಿಸುವ ಗುರಿಯೊಂದಿಗೆ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ, ಸಚಿವರಾದ ವಿ.ಸೋಮಣ್ಣ, ಡಾ. ಅಶ್ವತ್ಥನಾರಾಯಣ, ಶಿವರಾಮ ಹೆಬ್ಬಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾರ್ಯದರ್ಶಿಗಳಾದ ಎಂ.ಎಸ್. ಶ್ರೀಕರ್ ಹಾಗೂ ಜಯರಾಮ್ ರಾಯಪುರ ಮತ್ತಿತರರು ಭಾಗವಹಿಸಿದ್ದರು.
[04/08, 10:03 PM] Gurulingswami. Holimatha. Vv. Cm: *ಕನ್ನಡ ಸಾಹಿತ್ಯ ಪರಿಷತ್ ಆಪ್ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 4-
ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.
ಕನ್ನಡ ಸಾಹಿತ್ಯ ಪರಿಷತ್ತಿನ ಆಪ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ಸಂಬಂಧ ಕೇವಲ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕಷ್ಟೇ ಸೀಮಿತ ಗೊಳಿಸದೆ, ಕನ್ನಡಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಸದಾ ಜೊತೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ತಂತ್ರಜ್ಞಾನದ ಬಳಕೆಯ ಮೂಲಕ ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಾಹಿತ್ಯ ಪರಿಷತ್ತಿನ ಶ್ರೀಮಂತ ಸಾಹಿತ್ಯ ಭಂಡಾರವನ್ನು ಜನರಿಗೆ ಪರಿಚಯಿಸಲು ತಂತ್ರಜ್ಞಾನದ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಇದರೊಂದಿಗೆ ಉತ್ಕೃಷ್ಟ, ಸಮಾಜಮುಖಿ ಸಾಹಿತ್ಯ ರಚನೆಗೆ ಉತ್ತೇಜನ ನೀಡುವ ಕೆಲಸ ಮಾಡುವಂತೆ ತಿಳಿಸಿದರು.
ಸಮಾರಂಭದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಅಶ್ವತ್ಥನಾರಾಯಣ, ಶಿವರಾಮ ಹೆಬ್ಬಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ,ಶಾಸಕ ನೆಹರು ಓಲೆಕಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಉಪಸ್ಥಿತರಿದ್ದರು.
Post a Comment