ನಟ ಸುದೀಪ್ ಗೆ BJP ತ್ರಿವರ್ಣ ಧ್ವಜ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ನಡೆಯಲಿರುವ ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯ ನಿವಾಸಿಗಳು ಹಾಗೂ ಖ್ಯಾತ ಚಲನಚಿತ್ರ ನಟರಾದ ಶ್ರೀ ಸುದೀಪ್  ಅವರ ನಿವಾಸಕ್ಕೆ ತೆರಳಿ ಅವರಿಗೆ ತ್ರಿವರ್ಣ ಧ್ವಜವನ್ನು ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜಿ. ವಿ., ಕ್ಷೇತ್ರದ ಶಾಸಕರಾದ ಶ್ರೀ ಸತೀಶ್ ರೆಡ್ಡಿ, ರಾಜ್ಯಸಭಾ ಸಂಸದರಾದ ಶ್ರೀ ಜಗ್ಗೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಮಂಜುನಾಥ್ ಮತ್ತು ಇತರ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

#HarGharTiranga

Post a Comment

Previous Post Next Post