ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ರಾಜ್ಯ ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕ ಗೊಂಡಿರುವ ನ್ಯಾ. ಅನಿಲ್ ಭೀಮಸೇನ ಕಟ್ಟಿ, ನ್ಯಾ. ಗುರುಸಿದ್ಧಯ್ಯ ಬಸವರಾಜ, ನ್ಯಾ. ಚಂದ್ರಶೇಖರ್ ಮೃತ್ಯುಂಜಯ ಜೋಶಿ, ನ್ಯಾ. ಉಮೇಶ್ ಮಂಜುನಾಥ್ ಭಟ್ ಅಡಿಗ ಹಾಗೂ ನ್ಯಾ. ತಲಕಾಡು ಗಿರಿಗೌಡ ಶಿವಶಂಕರೇ ಗೌಡ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯ ಉಚ್ಛ ನ್ಯಾಯಾಲಯದ ಪ್ರಭಾರಿ ಮುಖ್ಯ ನ್ಯಾಯಾಧೀಶ ನ್ಯಾ. ಅಲೋಕ್ ಅರಾಧೆ ಉಪಸ್ಥಿತರಿದ್ದರು.
Post a Comment