ದಸರಾ ಗಜಪಯಣಕ್ಕೆ ಚಾಲನೆ
ನಾಡಹಬ್ಬ ಮೈಸೂರು ದಸರಾಗೆ ಮುನ್ನುಡಿಯಾ ಗಜಪಯಣಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿದರು.
ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.
ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು.
ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಈ ವೇಳೆ
ಶಾಸಕ ಹೆಚ್ .ಪಿ.ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ಹೆಚ್ .ವಿಶ್ವನಾಥ್, ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಎಸ್.ಪಿ.ಚೇತನ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.
ಆ.10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ.
ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ
ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ. ಪೂಜೆ ಸಲ್ಲಿಸುವ ವೇಳೆ ಶೂ ಧರಿಸಿದ್ದಾರೆ.ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು.ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ.ಆದ್ರೆ ಉಮೇಶ್ ಕತ್ತಿ ಎಲ್ಲವನ್ನೂ ಮರೆತು ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ…
Post a Comment