ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದಂದು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ಸ್ಮರಿಸಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ


 ಆಗಸ್ಟ್ 09, 2022

, 2:21PM

ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದಂದು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ಸ್ಮರಿಸಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ

ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದಂದು, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಚಳವಳಿಯ ಸಂದರ್ಭದಲ್ಲಿ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ಸ್ಮರಿಸಿದರು.


ಕ್ವಿಟ್ ಇಂಡಿಯಾ ಚಳುವಳಿ ದಿನವು ದೇಶದ ಬಹುದೊಡ್ಡ ಶಕ್ತಿಗಳಲ್ಲಿ ಏಕತೆ ಎಂಬುದನ್ನು ಜನರಿಗೆ ನೆನಪಿಸುತ್ತದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ನಿಸ್ವಾರ್ಥ ತ್ಯಾಗ ಮತ್ತು ದಣಿವರಿಯದ ಪ್ರಯತ್ನಗಳನ್ನು ದೇಶವು ಸ್ಮರಿಸುತ್ತದೆ ಎಂದು ಶ್ರೀ ನಾಯ್ಡು ಟ್ವೀಟ್ ಮಾಡಿದ್ದಾರೆ. ಸಮೃದ್ಧ, ಎಲ್ಲರನ್ನೂ ಒಳಗೊಳ್ಳುವ, ಶಾಂತಿಯುತ ಮತ್ತು ಸೌಹಾರ್ದಯುತವಾದ ಭಾರತವನ್ನು ನಿರ್ಮಿಸಲು ಅವರು ಪ್ರತಿಯೊಬ್ಬರನ್ನು ಕೇಳಿಕೊಂಡರು.


ಬಾಪು ಅವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಲಪಡಿಸಿದ ಎಲ್ಲರನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ. ಬಾಪು ಅವರಿಂದ ಪ್ರೇರಿತವಾದ ಕ್ವಿಟ್ ಇಂಡಿಯಾ ಚಳವಳಿಯು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ ಮತ್ತು ಡಾ. ರಾಮ್ ಮನೋಹರ್ ಲೋಹಿಯಾ ಅವರಂತಹ ಶ್ರೇಷ್ಠರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ಜನರ ಗಮನಾರ್ಹ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಟ್ವೀಟ್‌ನಲ್ಲಿ ಹೇಳಿದ್ದಾರೆ. ಆಗಸ್ಟ್ 9 ಭಾರತದ ರಾಷ್ಟ್ರೀಯ ಕ್ರಾಂತಿಯ ಜ್ವಲಂತ ಸಂಕೇತವಾಗಿದೆ ಎಂದು ಲೋಕನಾಯಕ್ ಜೆಪಿ ಹೇಳಿದ್ದನ್ನು ಮೋದಿ ಸ್ಮರಿಸಿದರು.


ಬಾಂಬೆಯಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ಪ್ರಾರಂಭದಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪೋಸ್ಟ್ ಮಾಡಿದ ಪ್ರಧಾನಿ ಮತ್ತು ಕ್ವಿಟ್ ಇಂಡಿಯಾ ಚಳವಳಿಯ ಮಹತ್ವವನ್ನು ಎತ್ತಿ ತೋರಿಸುವ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.

Post a Comment

Previous Post Next Post