ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ, ಅಂತಿಮ ದರ್ಶನ
ಬೆಂಗಳೂರು, ಆಗಸ್ಟ್ 12-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ನಿಧನರಾದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು.
ಅವರ ' ಕಾಡು ಕುದುರೆ ಓಡಿ ಬಂದಿತ್ತಾ ' ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಭಾಜನರಾದರು.
ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು ಇನ್ನಷ್ಟು ಎತ್ತರಕ್ಕೆ ಒಯ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಅವರ ನಿಧನದಿಂದ ಸುಗಮ ಸಂಗೀತ ಕ್ಷೇತ್ರದ ಒಬ್ಬ ಶ್ರೇಷ್ಠ ಗಾಯಕನನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
[12/08, 1:02 PM] Gurulingswami. Holimatha. Vv. Cm: *ಸಕಲ ಸರ್ಕಾರಿ ಗೌರವ ಗಳೊಂದಿಗೆ ಶಿವಮೊಗ್ಗ ಸುಬ್ಬಣ್ಣ ಅಂತ್ಯಕ್ರಿಯೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 12: ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಟ್ಟು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು.
ಶಿವಮೊಗ್ಗ ಸುಬ್ಬಣ್ಣ ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಯಲ್ಲಿ ಪರಿಣಿತರಾಗಿದ್ದರು. ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕರ್ನಾಟಕದ ಮನೆ ಮನೆಗೆ ಹಾಡುಗಳನ್ನು ಮುಟ್ಟಿಸಿದ್ದಾರೆ. ಜನ ಅವರ ಹಾಡುಗಳನ್ನು ಕೇಳಿ ಆನಂದಿಸಿ ಪ್ರೇರಣೆ ಪಡೆದಿದ್ದಾರೆ. ಇಂಥ ಮಹಾನ್ ಕಲಾವಿದರನ್ನು ಕಳೆದುಕೊಂಡು ಕನ್ನಡ ನಾಡು ಹಾಗೂ ಕನ್ನಡದ ಸಾಂಸ್ಕೃತಿಕ ಲೋಕ ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
Post a Comment