ಆಗಸ್ಟ್ 17, 2022
,
8:09PM
ಬಿಜೆಪಿ ಪಕ್ಷದ ಸಂಸದೀಯ ಮಂಡಳಿ, ಕೇಂದ್ರ ಚುನಾವಣಾ ಸಮಿತಿಯನ್ನು ಪುನರ್ ರಚಿಸಿದೆ
ಬಿಜೆಪಿ ಇಂದು ಪಕ್ಷದ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯನ್ನು ಪುನರ್ ರಚಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದ ಮಂಡಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಇರಲಿದ್ದಾರೆ. ಮಂಡಳಿಗೆ ಹೊಸ ಸದಸ್ಯರು ಸೇರ್ಪಡೆಯಾಗಿದ್ದಾರೆ.
ಅವರೆಂದರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್, ರಾಜ್ಯಸಭಾ ಸಂಸದ ಕೆ ಲಕ್ಷ್ಮಣ್ ಮತ್ತು ಲೋಕಸಭೆಯ ಮಾಜಿ ಸಂಸದೆ ಸುಧಾ ಯಾದವ್, ಮಾಜಿ ಕೇಂದ್ರ ಸಚಿವ ಸತ್ಯನಾರಾಯಣ್ ಜಟಿಯಾ ಮತ್ತು ಇಕ್ಬಾಲ್ ಸಿಂಗ್ ಲಾಲ್ಪುರ. ಪಕ್ಷದ ಕೇಂದ್ರ ಚುನಾವಣಾ ಸಮಿತಿಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ರಾಜ್ಯಸಭಾ ಸಂಸದ ಓಂ ಮಾಥುರ್ ಅವರನ್ನು ಸೇರಿಸಲಾಗಿದೆ.
Post a Comment