ಆಗಸ್ಟ್ 13, 2022
,
5:15PM
ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಭಾರತದಲ್ಲಿ ತಯಾರಿಸಿದ ವಸ್ತುಗಳನ್ನು ಬಳಸಲು ಜನರಿಗೆ ಕರೆ ನೀಡಿದ್ದಾರೆ
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಭಾರತದಲ್ಲಿ ತಯಾರಿಸಿದ ವಸ್ತುಗಳನ್ನು ಬಳಸಲು ಜನರಿಗೆ ಕರೆ ನೀಡಿದ್ದಾರೆ. ಶ್ರೀ ಗೋಯಲ್ ಅವರು ಇಂದು ಹರ್ ಘರ್ ತಿರಂಗ ಮಹೋತ್ಸವದ ಸಂದರ್ಭದಲ್ಲಿ ನವದೆಹಲಿಯ ರಾಜ್‌ಘಾಟ್‌ನ ಗಾಂಧಿ ದರ್ಶನದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು. ಸ್ವದೇಶಿ ಮತ್ತು ಸ್ವಾವಲಂಬಿ ಭಾರತದ ಸಂದೇಶವನ್ನು ಜನರು ಮುಂದಕ್ಕೆ ಕೊಂಡೊಯ್ಯುವಂತೆ ಅವರು ಒತ್ತಾಯಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ, ಶ್ರೀ ಗೋಯಲ್ ಅವರು ಸಭೆಗೆ ಹರ್ ಘರ್ ತಿರಂಗ ಪ್ರತಿಜ್ಞೆಯನ್ನು ಬೋಧಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ದೇಶವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವಂತೆ, ಮುಂದಿನ 25 ವರ್ಷಗಳಲ್ಲಿ ಭಾರತವನ್ನು ವೇಗವಾಗಿ ಮುನ್ನಡೆಸಲು ಮತ್ತು ಈ ದೇಶವನ್ನು ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ಜನರು ತೆಗೆದುಕೊಳ್ಳಬೇಕು ಎಂದು ಸಚಿವರು ಹೇಳಿದರು. ಭಾರತವು ವಿಶ್ವ ಆರ್ಥಿಕತೆಯ ಬೆಳವಣಿಗೆಯ ಎಂಜಿನ್ ಆಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Post a Comment