ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಮಯೂರು ಜಯಕುಮಾರ್, ವಿಷ್ಣುನಾಥನ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಹಿರಿಯ ಮುಖಂಡ ಎಚ್.ಕೆ. ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್ ಮತ್ತಿತರರು ಭಾಗವಹಿಸಿದ್ದರು.
Post a Comment